ಬೆಂಗಳೂರು: ಏಕಾಏಕಿ ಪೆಟ್ರೋಲ್-ಡೀಸೆಲ್, ತರಕಾರಿ ಬೆಲೆ ಏರಿಸಿ ಬಡವರ ಹೊಟ್ಟೆ ಮೇಲೆ ಹೊಡೆದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಹಾಲಿನ ದರ ಕೂಡ ಹೆಚ್ಚಿಸಿದ್ದು ((Milk Price Hike), ಕೊಟ್ಟು ಕಿತ್ತುಕೊಳ್ಳುವುದು ಎಂದರೆ ಇದೇ ಅನಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ (TA Sharavana) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಏಕಾಏಕಿ ಪೆಟ್ರೋಲ್-ಡೀಸೆಲ್, ತರಕಾರಿ ಬೆಲೆ ಏರಿಸಿ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಇದೀಗ ಹಾಲಿನ ದರ ಕೂಡ ಹೆಚ್ಚಿಸಿದೆ. ಈ ಸರ್ಕಾರ ಕೂಡಲೇ ತೊಲಗಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿ ಕುಸಿದು ಬಿದ್ದಿದ್ದು, ಚಿಲ್ಲರೆ ಹಣವನ್ನು ಬಡವರ ಜೇಬಿನಿಂದ ಕದಿಯಲು ಹೊರಟ ಸಿದ್ದರಾಮಯ್ಯ ಸರ್ಕಾರ ಕಳ್ಳ ಸರಕಾರ ಎನ್ನುವುದನ್ನು ವಿಧಿಯಿಲ್ಲದೆ ಹೇಳಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Milk Price: ನಂದಿನಿ ಹಾಲು ದರ ಏರಿಕೆ ಶಾಕ್; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!
ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಹಾಲಿನ (Nandini milk) ದರಗಳನ್ನು (milk price hike) ಏರಿಸಲಾಗಿದೆ. ಲೀಟರ್‌ಗೆ 2 ರೂ. ಏರಿಕೆ ಮಾಡಲಾಗಿದ್ದು, ಒಂದು ಲೀಟರ್ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಈ ಮೂಲಕ ತೈಲ ಬೆಲೆ ಏರಿಕೆ (petrol price hike) ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ ರಾಜ್ಯ ಸರಕಾರ.
ಇಷ್ಟು ದಿನ 1000 ml ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ನಾಳೆಯಿಂದ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ನಾಳೆಯಿಂದ ಮಾರಾಟ ಮಾಡಲಾಗುತ್ತದೆ. ಒಟ್ಟು 1050 ml ಹಾಲಿನ ದರ 44 ರೂ. ಆಗುತ್ತಿದೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.
ಆದರೆ ಅರ್ಧ ಲೀಟರ್ ಪ್ಯಾಕೇಟ್ ಹಾಲಿಗೂ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಯಾಕೆಂದರೆ ಅರ್ಧ ಲೀಟರ್ ಹಾಲಿನ ಪ್ಯಾಕೆಟ್‌ಗೂ 50 ml ಹಾಲನ್ನು ಹೆಚ್ಚುವರಿಯಾಗಿ ಸೇರಿಸಲಾಗುತ್ತಿದೆ. ಪ್ರತಿಯೊಂದು ಪ್ಯಾಕೆಟ್‌ಗೂ 50 ML ಹಾಲು ಹೆಚ್ಚುವರಿಯಾಗಿ ಸೇರಿಸುವುದರಿಂದ 2 ರೂಪಾಯಿ ಏರಿಕೆ ಮಾಡಲಾಗುತ್ತಿದೆ. ಈ ಲೆಕ್ಕಾಚಾರದಲ್ಲಿ ಅರ್ಧ ಲೀಟರ್ ಹಾಲಿನ ಎರಡು ಪ್ಯಾಕೆಟ್‌ಗಳನ್ನು ತೆಗೆದುಕೊಳ್ಳುವುದಕ್ಕಿಂತಲೂ, ಒಂದು ಲೀಟರ್ ಹಾಲಿನ ಪ್ಯಾಕೆಟ್ ತೆಗೆದುಕೊಳ್ಳುವುದು ಅಗ್ಗವಾಗಲಿದೆ.
“ಕೆಎಂಎಫ್ ಇಡೀ ರಾಷ್ಟ್ರದಲ್ಲಿ ಅತಿ ದೊಡ್ಡ ಎರಡನೇ ದೊಡ್ಡ ಹಾಲಿನ ಮಂಡಳಿ. 98 ಲಕ್ಷದ 17 ಸಾವಿರ ಲೀಟರ್ ಹಾಲು ನಮ್ಮಲ್ಲಿ ಶೇಖರಣೆ ಆಗುತ್ತಿದೆ. ಒಂದು ಕೋಟಿ ಲೀಟರ್ ಹಾಲಿನ ಶೇಖರಣೆ ಮಾಡಲು ಸಿದ್ಧರಾಗಿದ್ದೇವೆ. 27 ಲಕ್ಷ ಹಾಲು ಉತ್ಪಾದಕ ರೈತರಿಂದ ನಮಗಿದು ಸಾಧ್ಯವಾಗಿದೆ. 30 ಲಕ್ಷ ಲೀಟರ್ ಹಾಲು, ಹಾಲಿನ ಪೌಡರ್‌ಗೆ ಮೀಸಲಾಗಿದೆ” ಎಂದು ಭೀಮಾ ನಾಯ್ಕ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Milk Price: ಜನರ ಬದುಕಿನೊಂದಿಗೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟ; ಹಾಲಿನ ದರ ಏರಿಕೆಗೆ ವಿಜಯೇಂದ್ರ ಆಕ್ರೋಶ
ಹೊಸ ದರಗಳು ಹೀಗಿವೆ:
ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
ಶುಭಂ ಹಾಲು 48ರಿಂದ 50 ರೂ
ಸಮೃದ್ದಿ ಹಾಲು 51ರಿಂದ 53ರೂ
ಶುಭಂ (ಟೋನ್ಡ್ ಹಾಲು) 49ರಿಂದ 51ರೂ
ಸಂತೃಪ್ತಿ ಹಾಲು 55 ರಿಂದ 57 ರೂ
ಶುಭಂ ಗೋಲ್ಡ್ ಹಾಲು 49ರಿಂದ 51ರೂ
ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ