Site icon Vistara News

Modi in Bangalore : ಮೋದಿ ನಾಳೆ ಬೆಂಗಳೂರಿಗೆ; ಬೆಳಗ್ಗಿನಿಂದಲೇ ಸಂಚಾರದಲ್ಲಿ ಭಾರಿ ಬದಲಾವಣೆ

Narendra Modi BIETCNarendra Modi BIETC

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜನವರಿ 19ರಂದು (ಶುಕ್ರವಾರ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ((Bengaluru International Airport) ಬಳಿ ಇರುವ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ (Devanahalli Aerospace Park) ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸುತ್ತಿರುವ (Modi in Bangalore) ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ಕೆಲವು ಭಾಗಗಳಲ್ಲಿ ಸಂಚಾರ ಬದಲಾವಣೆ (Traffic root Change) ಮಾಡಲಾಗಿದೆ.

ಮೋದಿ ಅವರು ಶುಕ್ರವಾರ ಮಧ್ಯಾಹ್ನ 2:10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru International Airport) ಬಂದು ಇಳಿಯಲಿದ್ದಾರೆ. ಅಲ್ಲಿಂದ ಬಿಐಇಟಿಸಿ ಕ್ಯಾಂಪಸ್‌ಗೆ ರಸ್ತೆ ಮೂಲಕ ಆಗಮಿಸಲಿದ್ದು, ಸಂಜೆ 3.45ರ ವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ಪ್ರಯಾಣಿಸಲಿದ್ದಾರೆ. ಹೀಗಾಗಿ ನಾಳೆ ಹೆಣ್ಣೂರು-ಬಾಗಲೂರು ರಸ್ತೆ (ಹೊಸ ವಿಮಾನ ನಿಲ್ದಾಣ ರಸ್ತೆ) ಮತ್ತು ಕೆಐಎಗೆ ಹೋಗುವ ಇತರ ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಲ ಕಡೆ ಸಂಚಾರ ನಿಷೇಧಿಸಲಾಗಿದೆ.

ಯಾವ ಮಾರ್ಗದಲ್ಲಿ ಸಂಚಾರ ನಿಷೇಧ?

ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಗೊಲ್ಲಹಳ್ಳಿ ಗೇಟ್ ನಿಂದ ಹುನಚೂರುವರೆಗೆ, ಏರ್ ಲೈನ್ಸ್ ಡಾಬಾದಿಂದ ಬೂದಿಗೆರೆಯವರೆಗೆ, ಹೆಣ್ಣೂರು-ಬಗಲೂರು ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣ ರಸ್ತೆಯವರೆಗೆ, ಚಿಕ್ಕಜಾಲ ಕೋಟೆ ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಬಗಲೂರಿನಿಂದ ವಿಮಾನ ನಿಲ್ದಾಣದವರೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಸಂಚಾರ ಬದಲಾವಣೆ ಹೇಗೆ?

1.ವೈಟ್ ಫೀಲ್ಡ್, ಕೆ.ಆರ್. ಪುರಂನಿಂದ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗೊಲ್ಲಹಳ್ಳಿ ಗೇಟ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:
ಗೊಲ್ಲಹಳ್ಳಿ ಗೇಟ್-ಬಲದಿರುವು-ಹೊನ್ನಹಳ್ಳಿ ಗೇಟ್-ಬೆಟ್ಟಕೋಟೆ-ಎಲ್‌ಲೈನ್ ಡಾಬಾ-ಎಡತಿರುವು-ದೇವನಹಳ್ಳಿ ಬಸ್ ನಿಲ್ದಾಣ-ಎಡ ತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ-ದೇವನಹಳ್ಳಿ ಟೋಲ್-ಎಡ ತಿರುವು-ಕೆಂಪೇಗೌಡ ವಿಮಾನ ನಿಲ್ದಾಣ.

2. ರಾಷ್ಟ್ರೀಯ ಹೆದ್ದಾರಿ-648 ಏರ್‌ಲೈನ್ ಡಾಬಾ ಜಂಕ್ಷನ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕಡೆಗೆ ಕೆ.ಐ.ಎ.ಡಿ.ಬಿ ಇಂಡಸ್ಟ್ರೀಯಲ್ ಏರಿಯಾ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು: ಏರ್‌ಲೈನ್ಸ್ ಡಾಬಾ-ದೇವನಹಳ್ಳಿ ಬಸ್ ನಿಲ್ದಾಣ-ಎಡತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ- ದೇವನಹಳ್ಳಿ ಟೋಲ್-ಎಡ ತಿರುವು- ಕೆಂಪೇಗೌಡ ವಿಮಾನ ನಿಲ್ದಾಣ.

3. ಹೆಣ್ಣೂರು-ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು: ಬಾಗಲೂರು ಗುಂಡಪ್ಪ ಸರ್ಕಲ್-ಎಡ ತಿರುವು-ರೇವಾ ಕಾಲೇಜು ಜಂಕ್ಷನ್-ಬಾಗಲೂರು ಕ್ರಾಸ್-ಬಲ ತಿರುವು- ಚಿಕ್ಕ ಚಾಲ-ಸಾದಹಳ್ಳಿ ಟೋಲ್ -ಏರ್‌ ಪೋರ್ಟ್‌ ಫ್ಲೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ.

4.ಚಿಕ್ಕಜಾಲ ಕೋಟೆ ಕ್ರಾಸ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಚಿಕ್ಕಚಾಲ-ಸಾದಹಳ್ಳಿ ಟೋಲ್ – ಏರ್ ಪೋರ್ಟ್‌ ಫ್ಲೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ

5. ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳನ್ನು ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಬಾಗಲೂರು ಕಾಲೋನಿ ಬಲ ತಿರುವು – ರಜಾಕ್ ಪಾಳ್ಯ – ಎಂ.ವಿ.ಐ.ಟಿ ಕಾಲೇಜು – ಚಿಕ್ಕಚಾಲ ಬಲ ತಿರುವು – ಬಿಬಿ ರಸ್ತೆ – ಸಾದಹಳ್ಳಿ ಟೋಲ್- ಏರ್‌ ಪೋರ್ಟ್‌ ಫ್ಲೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ.

ಇದನ್ನೂ ಓದಿ : Narendra Modi: ಮೋದಿ ಭೇಟಿ; ಜ. 19ರಂದು ಕಲಬುರಗಿ ಏರ್‌ಪೋರ್ಟ್‌ ಸುತ್ತ ಡ್ರೋನ್ ಹಾರಾಟ ನಿಷೇಧ

Exit mobile version