ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ, ಬೆಂಗಳೂರು ಅಂರಾತಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಲೋಕಾರ್ಪಣೆ ಸೇರಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ನವೆಂಬರ್ 11) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರಿನಲ್ಲಿ ಮೋದಿ ಭಾಗವಹಿಸುವ ಪ್ರಸ್ತಾವಿತ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ.
ಬೆಳಗ್ಗೆ 10.00: ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮನ
ಬೆಳಗ್ಗೆ 10.30: ರಸ್ತೆ ಮೂಲಕ ವಿಧಾನಸೌಧ ಆವರಣಕ್ಕೆ ಆಗಮನ
🔴ಶಾಸಕರ ಭವನದ ಬಳಿಯಿರುವ ಕನಕದಾಸ ಪ್ರತಿಮೆಗೆ ಮಾಲಾರ್ಪಣೆ
🔴ಶಾಸಕರ ಭವನದ ಬಳಿಯಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ
ಬೆಳಗ್ಗೆ 10.42: ರಸ್ತೆ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ(ಮೆಜೆಸ್ಟಿಕ್) ಆಗಮನ
🔴ಚೆನ್ನೈಯಿಂದ ಮೈಸೂರಿನವರೆಗೆ ಬೆಂಗಳೂರು ಮೂಲಕ ಹಾದುಹೋಗುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ
🔴ಬೆಂಗಳೂರಿನಿಂದ ಕಾಶಿಗೆ ತೆರಳುವ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಹಸಿರು ನಿಶಾನೆ
ಬೆಳಗ್ಗೆ 11.20: ಹೆಬ್ಬಾಳದ ಏರ್‌ಫೊರ್ಸ್ ಕಮಾಂಡ್ ಸೆಂಟರ್‌ನಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ
ಬೆಳಗ್ಗೆ 11.50: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೆ ಟರ್ಮಿನಲ್ ಲೋಕಾರ್ಪಣೆ
ಮದ್ಯಾಹ್ನ 12.10: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ
ಮದ್ಯಾಹ್ನ 12.50: ವೇದಿಕೆ ಕಾರ್ಯಕ್ರಮ
🔴ಅಮೃತ್ 2.0 ಯೋಜನೆಗೆ ಚಾಲನೆ
🔴ನಾಡಪ್ರಭು ಕೆಂಪೇಗೌಡರ ಕುರಿತು ವಿಡಿಯೋ ಪ್ರಸಾರ
🔴ಸಿಎಂ ಬಸವರಾಜ ಬೊಮ್ಮಾಯಿ ಭಾಷಣ
🔴ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭಾಷಣ
🔴ಪ್ರಧಾನಿ ನರೇಂದ್ರ ಮೋದಿ ಭಾಷಣ
ಇದನ್ನೂ ಓದಿ | G20 Logo India | ನಮ್ಮ ವೈವಿಧ್ಯತೆ, ಸಾಮರ್ಥ್ಯ ಪ್ರದರ್ಶಿಸೋಣ: ಮೋದಿ, ಜಿ20 ಅಧ್ಯಕ್ಷತೆಯ ಲೋಗೋ ಅನಾವರಣ