ಬೆಂಗಳೂರು: ಎಟಿಎಂಗೆ ತುಂಬಿಸಬೇಕಿದ್ದ ಒಂದು ಕೋಟಿ ರೂಪಾಯಿ ಹಣದ ಜೊತೆ ವ್ಯಕ್ತಿಯೊಬ್ಬ ಪರಾರಿಯಾಗಿರುವ ಘಟನೆ ರಾಜಧಾನಿಯ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್‌ನ ನೌಕರ ರಾಜೇಶ್ ಮೇಸ್ತಾ ಎಂಬಾತ ಈ ಕೃತ್ಯ ಎಸಗಿದ್ದಾನೆ. ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ಎಟಿಎಂಗಳಿಗೆ ಹಣ ತುಂಬಿಸುವ ಸಂಸ್ಥೆಯಾಗಿದೆ. ಕಳೆದ 11 ವರ್ಷಗಳಿಂದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮೇಸ್ತಾ ಜನವರಿ ಅಂತ್ಯದಲ್ಲಿ ಇದ್ದಕ್ಕಿದ್ದಂತೆ ಫೋನ್ ಸ್ವಿಚ್ಡ್ ಆಫ್ ಮಾಡಿ ಎಸ್ಕೇಪ್ ಆಗಿದ್ದಾನೆ.
ಇದರಿಂ ಅನುಮಾನಗೊಂಡು ಸಂಸ್ಥೆಯಿಂದ ರಾಜೇಶ್ ಹಣ ತುಂಬಿಸುತ್ತಿದ್ದ ಎಟಿಎಂಗಳ ಆಡಿಟ್ ನಡೆಸಿದಾಗ, 1 ಕೋಟಿ 3 ಲಕ್ಷ ರೂಪಾಯಿ ಹಣದ ಸಮೇತ ಪರಾರಿಯಾಗಿರುವುದು ಪತ್ತೆಯಾಗಿದೆ. ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ನಡೆದಿದೆ.
ಇದನ್ನೂ ಓದಿ: ವಂಚನೆ ಮಾಡಿ ಜಮೀನು ಗುಳುಂ ಆರೋಪ; ಮೂವರು ಮಕ್ಕಳೊಂದಿಗೆ ಮುಂಜಾನೆ 5 ಗಂಟೆಗೇ ಟವರ್ ಏರಿದ!