Site icon Vistara News

Yuva Nidhi Scheme: ಜ. 12ಕ್ಕೆ ಖಾತೆಗೆ ಯುವ ನಿಧಿ ಹಣ ಜಮೆ; ಸುಳ್ಳು ಹೇಳಿ ಪಡೆದರೆ ಕಾಸು ರಿಕವರಿ, ಕೇಸ್‌!

Yuva Nidhi Scheme registration to begin from December 26 and January 12 money will be credited

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Yuva Nidhi Scheme) ಡಿ. 26ರಿಂದ ನೋಂದಣಿಗೆ ಚಾಲನೆ ನೀಡಲಾಗುತ್ತಿದ್ದು, ಜ. 12ರಂದು ಖಾತೆಗೆ ನೇರವಾಗಿ ಜಮೆಯಾಗಲಿದೆ. ಆದರೆ, ಒಂದು ವೇಳೆ ಉದ್ಯೋಗ ಸಿಕ್ಕ ಮೇಲೆಯೂ ಇಲ್ಲವೇ ಉದ್ಯೋಗದಲ್ಲಿದ್ದೂ ಅರ್ಜಿ ಹಾಕಿ ಹಣ ಪಡೆದಿದ್ದು ಸಾಬೀತಾದರೆ ಅಂಥವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಅಲ್ಲದೆ, ಅವರು ಪಡೆದ ಅಷ್ಟೂ ಹಣವನ್ನು ವಾಪಸ್‌ ಪಡೆಯಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಯೋಗಿ ಸಚಿವ‌ ಡಾ. ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವ‌ ಡಾ. ಶರಣಪ್ರಕಾಶ್ ಪಾಟೀಲ್, ಯುವ ನಿಧಿ ಯೋಜನೆಯ ದುರುಪಯೋಗದ ಬಗ್ಗೆ ಸರ್ಕಾರ ಕ್ರಮವಹಿಸಬೇಕಿದೆ. ಯುವನಿಧಿ ದುರುಪಯೋಗ ತಡೆಯುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಶಿವಮೊಗ್ಗದಲ್ಲಿ ಜ.12ಕ್ಕೆ ಶಿವಮೊಗ್ಗದಲ್ಲಿ ಕಾರ್ಯಕ್ರಮ

ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದ್ದು, ಅಂದು ಶಿವಮೊಗ್ಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಿದ್ದೇವೆ. ಕೆಲಸ ಸಿಗದಿರುವ ಬಗ್ಗೆ ಫಲಾನುಭವಿ ಸ್ವಯಂ ಧೃಢೀಕರಣ ಮಾಡಿಕೊಳ್ಳಬೇಕು. ಈ ನಡುವೆ ಕೆಲಸ ಸಿಕ್ಕರೆ ಅವರಿಗೆ ನಿಧಿ ಹಣ ಸಿಗುವುದಿಲ್ಲ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಅರ್ಹತೆ ಏನು?

ಯಾರು ಫಲಾನುಭವಿಗಳು?

ಯಾರು ಅನರ್ಹರು?

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

ಇದನ್ನೂ ಓದಿ: Karnataka Weather: ಬೆಂಗಳೂರಿಗರ ಚಳಿ ಬಿಡಿಸಲಿದೆ ಡಿಸೆಂಬರ್‌ ಕೊನೇ ವಾರ! ರಾಜ್ಯ ಹವಾಮಾನ ಸ್ಥಿತಿ ಏನು?

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.

Exit mobile version