ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರಿಯ ಹೆದ್ದಾರಿ 275ರಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಪ್ರಮುಖ ನಾಲ್ಕು ರಾಜ್ಯ ಹೆದ್ದಾರಿಗಳ ಕುರಿತು ಎಂಎಲ್‌ಸಿ ದಿನೇಶ್ ಗೂಳಿಗೌಡ ಜತೆಗೆ ಸಂಸದೆ ಸುಮಲತಾ ಅಂಬರೀಶ್ ಚರ್ಚಿಸಿದರು. ನಾಲ್ಕು ಹೆದ್ದಾರಿಗಳನ್ನೂ ಮದ್ದೂರು ಬಳಿ ಸಂಪರ್ಕ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಿದರು.
ಮದ್ದೂರು-ಮಳವಳ್ಳಿ, ಮದ್ದೂರು-ನಾಗಮಂಗಲ, ಮದ್ದೂರು-ತುಮಕೂರು, ಮದ್ದೂರು-ಹಲಗೂರು ನಾಲ್ಕು ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರಿಯ ಹೆದ್ದಾರಿಯೊಂದಿಗೆ ಸಂಪರ್ಕ ಕಲ್ಪಿಸಬೇಕಿದೆ. ಮದ್ದೂರು ಪಟ್ಟಣ ಮೈಸೂರು-ಬೆಂಗಳೂರು ಹೆದ್ದಾರಿಯ ಮಧ್ಯ ಭಾಗದಲ್ಲಿದ್ದು, ಇಲ್ಲಿಂದ ಹಲವು ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ಸ್ಥಳವಾಗಲಿದೆ.
ಮದ್ದೂರಿನ ನಿಡಘಟ್ಟ ಮತ್ತು ಚನ್ನೇಗೌಡನದೊಡ್ಡಿಯ ಬಳಿ ನಿರ್ಗಮನ ಮತ್ತು ಆಗಮನ ಕಲ್ಪಿಸಬೇಕು. ಕೂಡಲೇ ಈ ಭಾಗದ ರೈತರಿಗೆ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸುಲಲಿತ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ರಾಷ್ಟ್ರಿಯ ಹೆದ್ದಾರಿ ಯೋಜನಾ ನಿರ್ದೇಶಕರಿಗೆ ಸೂಚನೆಯನ್ನು ಕೊಡಲಾಯಿತು. ಶೀಘ್ರದಲ್ಲೆ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸಂಸದೆ ತಿಳಿಸಿದರು.
ಸಭೆಯಲ್ಲಿ ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಉಪಸ್ಥಿತರಿದ್ದರು.
ಇದನ್ನೂ ಓದಿ | ಮುಂದಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಚಲುವರಾಯಸ್ವಾಮಿ ; ಮಂಡ್ಯದಲ್ಲಿ ಅಭಿಮಾನಿಗಳ ಜೈಕಾರ