ಬೆಂಗಳೂರು: ಬೆಂಗಳೂರಿನ ಎಸ್‌ಆರ್ ನಗರ ಠಾಣಾ ವ್ಯಾಪ್ತಿಯಲ್ಲಿ ಯುವಕನ ಶವ (Dead Body Found) ಪತ್ತೆಯಾಗಿದೆ. ಮಿಷನ್ ರೋಡ್‌ನ ಪಿ.ಸಿ.ಮೋಹನ್ ಆ್ಯಂಡ್ ಕೊ ಕಾಂಪ್ಲೆಕ್ಸ್‌ನ ಗ್ರೌಂಡ್ ಫ್ಲೋರ್‌ನಲ್ಲಿ ಶವ (Murder Case) ಪತ್ತೆಯಾಗಿದೆ. ಮೃತನನ್ನು ಕೆ.ಎಸ್. ಗಾರ್ಡನ್ ನಿವಾಸಿ ಸತ್ಯ (22) ಎಂದು ಗುರುತಿಸಲಾಗಿದೆ.
ಪ್ಲಂಬರ್ ಕೆಲಸ ಮಾಡಿಕೊಂಡಿದ್ದ ಸತ್ಯ ಗುರುವಾರ ರಾತ್ರಿ ಸ್ನೇಹಿತರ ಜತೆಗೆ ಮನೆಯಿಂದ ಹೊರಗಡೆ ಹೋಗಿದ್ದ. ಆದರೆ ಬೆಳಗಾಗುವುದರಲ್ಲಿ ಬೀದಿ ಹೆಣವಾಗಿದ್ದಾನೆ. ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದಾಗ ಮೃತ ಗುರುತು ಪತ್ತೆ ಮಾಡಿದ್ದಾರೆ. ಸತ್ಯನ ಕಿವಿಯಿಂದ ರಕ್ತ ಬಂದಿರುವುದು ಪತ್ತೆಯಾಗಿದೆ. ಮಗನ ಮೃತದೇಹ ಕಂಡು ಸತ್ಯ ತಾಯಿ ಮೂರ್ಚೆ ಹೋಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರೀತಿ ವಿಷ್ಯಕ್ಕೆ ಬಲಿ?
ಸತ್ಯ ಹುಡುಗಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ವಿಷಯ ತಿಳಿದ ಯುವತಿಯ ಮನೆಯವರು ಸತ್ಯನಾ ವಿರುದ್ಧ ಬಲವಂತವಾಗಿ ಯುವತಿ ಕಡೆಯಿಂದ ಪೊಲೀಸರಿಗೆ ದೂರು ಕೊಡಿಸಿದ್ದರು. ಈ ಸಂಬಂಧ ಸತ್ಯನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿಯೇ ಕೂರಿಸಿಕೊಂಡಿದ್ದರು. ಈ ಘಟನೆಯ ಬಳಿಕ ಸತ್ಯ ಸಾಕಷ್ಟು ನೊಂದಿದ್ದ. ಆದರೆ ಇತ್ತೀಚೆಗೆ ಮತ್ತೆ ಯುವತಿಯ ಜತೆ ಮಾತಾಡುತ್ತಿದ್ದ ಎನ್ನಲಾಗಿದೆ. ಈ ವಿಚಾರ ತಿಳಿದು ಯುವತಿಯ ಕಡೆಯವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇದು ಕೊಲೆಯೋ ಆಕಸ್ಮಿಕ ಸಾವೋ ಎಂಬುದನ್ನು ತಿಳಿಯಲು ಮುಂದಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿದ ಪ್ರೇಮಿ
ಸೋಮವಾರಪೇಟೆ: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ. ಕೊಲೆ ಮಾಡಿದ ಪಾಗಲ್ ಪ್ರೇಮಿಯನ್ನು ವಿರೂಪಾಕ್ಷ ಎಂದು ಗುರುತಿಸಲಾಗಿದೆ. ಮೀನಾ ಕೊಲೆಯಾಗಿರುವ ಬಾಲಕಿ. ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ. ಭೀಕರ ಘಟನೆಯು ಈ ಪ್ರದೇಶದ ಜನರನ್ನು ಬೆಚ್ಚಿ ಬೀಳಿಸಿದೆ.
ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಕೊಲೆ ಮಾಡಿದ್ದಾನೆ ಆರೋಪಿ ವಿರೂಪಾಕ್ಷ.
ಬಾಲಕಿಯನ್ನು ಆರೋಪಿ ವಿರೂಪಾಕ್ಷ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಎಸ್ಎಸ್ಎಲ್ಸಿ ಪಾಸಾಗಿದ್ದ ಬಾಲಕಿ
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ