ಬೆಂಗಳೂರು: ಇಲ್ಲಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ (Murder case) ಆಗಿದೆ. ಪ್ರತಿಮಾ (45) ಕೊಲೆಯಾದವರು.
ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶನಿವಾರ (ನ.4) ರಾತ್ರಿ 8.30ರ ಸುಮಾರಿಗೆ ಹತ್ಯೆ ನಡೆದಿದೆ. ಪ್ರತಿಮಾಳಿಗೆ ಶನಿವಾರ ರಾತ್ರಿ ಅವರ ಸಹೋದರ ಕರೆ ಮಾಡಿದ್ದಾರೆ. ಆದರೆ ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಭಾನುವಾರ ಬೆಳಗ್ಗೆ ಮನೆ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕೊಲೆಯನ್ನು ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೂ ಮೊದಲು ರಾಮನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ: Karnataka Weather : ನವೆಂಬರ್ 9ರ ವರೆಗೆ ಮಳೆಯದ್ದೇ ಹವಾ! ಕೊಡಗಿಗೆ ಆರೆಂಜ್ ಅಲರ್ಟ್
ಕಳೆದ ಎಂಟು ವರ್ಷಗಳಿಂದ ದೊಡ್ಡಕಲ್ಲಸಂದ್ರದಲ್ಲಿ ಪ್ರತಿಮಾ ವಾಸವಾಗಿದ್ದರು. ಪ್ರತಿಮಾ ಅವರ ಪತಿ ಸತ್ಯನಾರಯಣ, ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ದೊಡ್ಡಕಲ್ಲಸಂದ್ರದಲ್ಲಿ ಈಕೆ ಒಬ್ಬರೇ ವಾಸ ಮಾಡುತ್ತಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಚೇರಿ ಕೆಲಸವನ್ನು ಮುಗಿಸಿ ಪ್ರತಿಮಾರನ್ನು ಚಾಲಕ ಸರ್ಕಾರಿ ಕಾರಿನಲ್ಲೇ ಮನೆಗೆ ಬಿಟ್ಟು ತೆರಳಿದ್ದ ಎನ್ನಲಾಗಿದೆ. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಪ್ರತಿಮಾ ಹತ್ಯೆಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್ಮೆಂಟ್ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ಸ್ಥಳಕ್ಕೆ ದಕ್ಷಿಣ ವಿಭಾಗ ಡಿಸಿಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿ ಸ್ಥಳ ಮಹಜರು ಮಾಡಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳ್ಳಿಸಿದ್ದಾರೆ.
ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರತಿಮಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿದಲು ಮುಟ್ಟಿದೆ. ಪ್ರತಿಮಾ ಸಹೋದರ ಪ್ರತೀಶ್ ಬನ್ನೇರುಘಟ್ಟ ಸಮೀಪದಲ್ಲೇ ವಾಸವಾಗಿದ್ದು, ಬಿಬಿಎಂಪಿಯಲ್ಲಿ ಗುತ್ತಿಗೆದಾರನಾಗಿದ್ದಾರೆ. ಪ್ರತೀಶ್ ನಿನ್ನೆ ರಾತ್ರಿ ಪ್ರತಿಮಾಳಿಗೆ ಕಾಲ್ ಮಾಡಿದ್ದಾರೆ. ಕಾಲ್ ರಿಸೀವ್ ಮಾಡದಿದ್ದಾಗ, ಕೆಲಸದಿಂದ ಸುಸ್ತಾಗಿರಬಹುದು ಎಂದು ಸುಮ್ಮನಾಗಿದ್ದಾರೆ. ಮತ್ತೆ ಬೆಳಗ್ಗೆ ಪೋನ್ ಮಾಡಿದಾಗ ಸ್ವಿಚ್ ಆಫ್ ಎಂದು ಬಂದಿದೆ. ಹೀಗಾಗಿ ಕೆಳಗಡೆ ವಾಸವಿದ್ದ ಮನೆಯವರಿಗೆ ವಿಚಾರಿಸಲು ತಿಳಿಸಿದ್ದಾರೆ. ಬಾಡಿಗೆ ಮನೆಯವರು ಕಿಟಕಿ ಮೂಲಕ ನೋಡಿದಾಗ ಹತ್ಯೆಯಾಗಿರುವುದು ತಿಳಿದು ಬಂದಿದೆ. ಮುಖ್ಯ ಬಾಗಿಲು ಕೂಡ ತೆರದಿದ್ದ ಕಾರಣಕ್ಕೆ ಕೂಡಲೇ ಸಹೋದರನಿಗೆ ಮಾಹಿತಿ ನೀಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.