ಬೆಂಗಳೂರು: ಕುಡಿದ ಅಮಲಿನಲ್ಲಿ ಯುವಕನೊಬ್ಬ ಕಟ್ಟಡದಿಂದ ಸ್ನೇಹಿತನನ್ನೇ ತಳ್ಳಿ ಕೊಲೆ ಮಾಡಿರುವ ಘಟನೆ (Murder Case) ತಲಘಟ್ಟಪುರದ ಅಂಜನಾಪುರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ವಿಶಾಲ್ ಯಾದವ್ ಕೊಲೆಯಾದ ಯುವಕ. ಅಭಿಷೇಕ್ ಎಂಬಾತ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ.
ಇಬ್ಬರೂ ಉತ್ತರ ಪ್ರದೇಶ ಮೂಲದವರಾಗಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ದಿನಗೂಲಿ ನೌಕರನಾಗಿದ್ದರು. ನೆನ್ನೆ ಕಟ್ಟಡದಲ್ಲಿ ಸ್ನೇಹಿತರು ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದಿದ್ದರಿಂದ ಕಟ್ಟಡದ ಮೇಲಿಂದ ವಿಶಾಲ್ ಯಾದವ್‌ನನ್ನು ಅಭಿಷೇಕ್ ನೂಕಿದ್ದಾನೆ. ಇದರಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ವಿಶಾಲ್ ಯಾದವ್ ಮೃತಪಟ್ಟಿದ್ದು, ಘಟನೆ ಬಳಿಕ ಆರೋಪಿ ಸ್ನೇಹಿತ ಅಭಿಷೇಕ್ ಪರಾರಿಯಾಗಿದ್ದಾನೆ.
ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಇದನ್ನೂ ಓದಿ | Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ
ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ
ರಾಯಚೂರು: ರಾಯಚೂರಲ್ಲಿ ಪ್ರೇಮ ವೈಫಲ್ಯಕ್ಕೆ (Love Failure) ಯುವಕನೊರ್ವ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣ ಸಮೀಪದ ಕನಸಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಂತೋಷ್ (22) ಮೃತ ದುರ್ದೈವಿ.
ಮನೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ ಮುನ್ನ ತನ್ನ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್‌ನಲ್ಲಿ ʻನಾನು ಸತ್ತರು ಪ್ರೀತಿಗೋಸ್ಕರ ಸೋಲ್ತಿನಿ ಯಾಕೆಂದರೆ ನಾನು ಒಬ್ಬ ಹುಚ್ಚು ಪ್ರೇಮಿʼ ಎಂದು ಫೋಟೊ ಜತೆಗೆ ಬರಹವೊಂದನ್ನು ಹಾಕಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ | Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು
ಸಂತೋಷ್ ತನ್ನ ಅಣ್ಣನ ಹೆಂಡತಿ ತಂಗಿಯನ್ನೇ ಪ್ರೀತಿ ಮಾಡುತ್ತಿದ್ದ. ಆದರೆ ಮದುವೆಗೆ ಒಪ್ಪದಿದ್ದಾಗ ಮನನೊಂದು ಆತ್ಮಹತ್ಯೆ ಶರಣಾಗಿದ್ದಾನೆ. ಮುದ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೈಕ್-ಟ್ರ್ಯಾಕ್ಟರ್ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಸಾವು
ಚಾಮರಾಜನಗರ: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಆಹಾರ ಇಲಾಖೆ ನಿರೀಕ್ಷಕ ಮೃತಪಟ್ಟು, ಶಿರಸ್ತೇದಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸಪುರ ಗ್ರಾಮದ ಬಳಿ ನಡೆದಿದೆ.
ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ (46) ಮೃತರು. ಆಹಾರ ಇಲಾಖೆ ಶಿರಸ್ತೇದಾರ ರಮೇಶ್‌ಗೆ ಗಂಭೀರ ಗಾಯಗಳಾಗಿವೆ. ಗುಂಡ್ಲುಪೇಟೆ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳು, ಇಂದು ಹಂಗಲ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುವ ವೇಳೆ ಅವಘಡ ನಡೆದಿದೆ. ಅಪಘಾತದಲ್ಲಿ
ಸ್ಥಳದಲ್ಲೇ ಆಹಾರ ಇಲಾಖೆ ನಿರೀಕ್ಷಕ ನಾಗೇಂದ್ರ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಾಳು ರಮೇಶ್‌ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.