Murder Case: ಕಲಾಸಿಪಾಳ್ಯದಲ್ಲಿ ಕೊಲೆ; ಪತ್ನಿಗೆ ಬೇರೆ ಮದುವೆ ಮಾಡಿಸಿದವನನ್ನು ಕೊಂದು ಸುಟ್ಟು ಹಾಕಿದ - Vistara News

ಕ್ರೈಂ

Murder Case: ಕಲಾಸಿಪಾಳ್ಯದಲ್ಲಿ ಕೊಲೆ; ಪತ್ನಿಗೆ ಬೇರೆ ಮದುವೆ ಮಾಡಿಸಿದವನನ್ನು ಕೊಂದು ಸುಟ್ಟು ಹಾಕಿದ

ಕಲಾಸಿಪಾಳ್ಯದಲ್ಲಿ ದೊರೆತ ಅರೆ ಬೆಂದ ಹೆಣದ ಹಿಂದಿನ ಕೊಲೆ (Murder case) ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

kalasipaly murder
ಕೊಲೆಯಾದ ಸುಧಾಹರನ್‌, ಆರೋಪಿ ವಿಜಯ್‌ ಕುಮಾರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ (KR Market) ಅರ್ಧ ಬೆಂದ ಹೆಣವೊಂದರ (burnt body) ಬೆನ್ನು ಹತ್ತಿ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಕೊಲೆ (Murder Case) ಆರೋಪಿಯನ್ನು ಕಲಾಸಿಪಾಳ್ಯ ಪೊಲೀಸರು (Bangalore police) ಬಂಧಿಸಿದ್ದಾರೆ.

ಪತ್ನಿಯ ಜತೆ ಅಕ್ರಮ ಸಂಬಂಧ ಇಟ್ಟುಕೊಂಡ ಹಾಗೂ ಆಕೆಗೆ ಬೇರೊಬ್ಬನ ಜತೆ ಮದುವೆ ಮಾಡಿಸಿದ್ದರಿಂದ ಆಕ್ರೋಶಗೊಂಡ ಆರೋಪಿ, ಸುಧಾಹರನ್ ಎಂಬಾತನನ್ನು ಹತ್ಯೆ ಮಾಡಿದ್ದ. ನಂತರ ಸುಟ್ಟು ಹಾಕಿ ಪರಾರಿಯಾಗಿದ್ದ.

ವಿಜಯ್‌ ಕುಮಾರ್‌ ಎನ್ನುವವನೇ ಆರೋಪಿ. ವಿಚಾರಣೆ ವೇಳೆ ಅಸಲಿ ಸತ್ಯ ಬಾಯ್ಬಿಟ್ಟಿದ್ದಾನೆ. ಸುಧಾಹರನ್ ಅಲಿಯಾಸ್ ಕುಳ್ಳ ಎನ್ನುವವನನ್ನು ಈತ ಮರ್ಡರ್ ಮಾಡಿದ್ದಾನೆ. ಸುಧಾಹರನ್ ಮತ್ತು ವಿಜಯ್ ಕುಮಾರ್ ಸ್ನೇಹಿತರಾಗಿದ್ದು, ಇಬ್ಬರೂ ಕಲಾಸಿಪಾಳ್ಯದ ತರಕಾರಿ ಮಾರ್ಕೆಟ್‌ನಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದರು.

ವಿಜಯ್ ಕುಮಾರ್ ಮದ್ಯ ಮತ್ತು ಸಿಗರೇಟ್ ಸೇದುವ ಚಟಕ್ಕೆ ಬಿದ್ದಿದ್ದ. ಇದರಿಂದ 2015ರಲ್ಲಿ‌ ವಿಜಯ್‌ನನ್ನು ಆತನ ತಾಯಿ ಮದ್ಯವರ್ಜನ ಕೇಂದ್ರಕ್ಕೆ ಸೇರಿಸಿದ್ದರು. 11 ತಿಂಗಳು ಮದ್ಯವರ್ಜನ ಕೇಂದ್ರದಲ್ಲಿ ಬಂದಿಯಾಗಿದ್ದ ವಿಜಯ್ ಕುಮಾರ್. ಈ ವೇಳೆ ವಿಜಯ್ ಪತ್ನಿ ನಂದಿನಿಗೆ ಸುಧಾಹರನ್ ಬೇರೊಬ್ಬನ ಜತೆಗೆ ಮದುವೆ ಮಾಡಿಸಿದ್ದ.

ಮದ್ಯವರ್ಜನ ಕೇಂದ್ರದಿಂದ ಹೊರಬಂದಿದ್ದ ವಿಜಯ್‌ಗೆ ಇದರಿಂದ ಶಾಕ್ ಆಗಿತ್ತು. ಪತ್ನಿ‌ಗೆ ಬೇರೆ ಮದುವೆಯಾಗಿ ಹೋಗಿದ್ದರಿಂದ ಆತ ಡಿಪ್ರೆಶನ್‌ಗೆ ಹೋಗಿದ್ದ. ಈ ವಿಚಾರವಾಗಿ ಹಲವು ಬಾರಿ ಸುಧಾಹರನ್‌ನೊಂದಿಗೆ ಜಗಳವಾಡಿದ್ದ. ನಾಲ್ಕು ತಿಂಗಳ ಹಿಂದೆ ತನ್ನ ಪತ್ನಿ ನಂದಿನಿ ಮತ್ತು ಆನಂದ್ ಎಲ್ಲಿದ್ದಾರೆ ಎಂದು ಕೇಳಿದ್ದ. ಈ ವೇಳೆ ಆನಂದ್‌ಗೆ ಸುಧಾಹರನ್ ಫೋನ್ ಮಾಡಿದ್ದ. ಆಗ ಆನಂದ್ ಮತ್ತು ನಂದಿನಿ ಫೋನ್ ರಿಸೀವ್ ಮಾಡಿರಲಿಲ್ಲ.

ಇದರಿಂದ ಸುಧಾಹರನ್ ಮೇಲೆ ದ್ವೇಷ ಸಾಧಿಸಿದ್ದ ವಿಜಯ್, ತನ್ನ ಹೆಂಡತಿಗೆ ಮತ್ತೊಂದು ಮದುವೆ ಮಾಡಿಸಿ ಮೋಸ ಮಾಡಿದ್ದಿ ಎಂದು ಪದೇ ಪದೆ ಜಗಳ ಕಾಯುತ್ತಿದ್ದ. ಕೊನೆಗೆ ಸುಧಾಹರನ್ ಹತ್ಯೆ ಮಾಡಲು ನಿರ್ದರಿಸಿದ್ದ. ನವಂಬರ್ 11ರಂದು ಕಲಾಸಿಪಾಳ್ಯ ಮಾರ್ಕೆಟ್‌ನಲ್ಲಿ ಸುಧಾಹರನ್‌ನನ್ನು ಭೇಟಿಯಾಗಿ ತನ್ನ ಬಳಿ ಇದ್ದ ಒಂದೂವರೆ ಕ್ವಾರ್ಟರ್ ಮದ್ಯದ ಬಾಟಲು ನೀಡಿದ್ದ. ನನಗೆ ಆರೋಗ್ಯ ಸರಿಯಿಲ್ಲ ನೀನೇ ಕುಡಿಯೆಂದು ಸುಧಾಹರನ್‌ಗೆ ಮನವೊಲಿಸಿದ್ದ.

ನಂತರ ಸುಧಾಹರನ್‌ಗೆ ಮತ್ತೊಂದು ಕ್ವಾರ್ಟರ್ ಮದ್ಯ ಕುಡಿಸಿ, ಮಧ್ಯಾಹ್ನ 12 ಗಂಟೆಗೆ ವಿಶ್ರಾಂತಿ ಮಾಡೋಣ ಬಾ ಎಂದು‌ ತರಕಾರಿ ಮಾರ್ಕೆಟ್ ಮೇಲ್ಛಾವಣಿಗೆ ಕರೆದುಕೊಂಡು ಹೋಗಿದ್ದ. ನನ್ನ ಬಳಿ ಇದ್ದ 140 ರೂಪಾಯಿ ಕದ್ದಿದ್ದೀ ಎಂದು ಜಗಳ ತೆಗೆದಿದ್ದ. ಇದರಿಂದ ಮಾತಿಗೆ ಮಾತು ಬೆಳೆದು ಸಿಟ್ಟಿನಿಂದ ವಿಜಯ್ ಕಪಾಳಕ್ಕೆ ಸುಧಾಹರನ್ ಹೊಡೆದಿದ್ದ. ನಂತರ ವಿಜಯ್‌ ತನ್ನ ಬಳಿ ಇದ್ದ ಹಣ್ಣು ಕತ್ತರಿಸುವ ಚಾಕಿನಿಂದ ಸುಧಾಹರನ್ ಕುತ್ತಿಗೆಗೆ ಚುಚ್ಚಿದ್ದ.

ಈ ವೇಳೆ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದ ಸುಧಾಹರನ್. ಶವದ ಗುರುತು ಸಿಗದಂತೆ ಮಾಡಲು ಗೋಣಿಚೀಲ ಸುತ್ತಿ ಬೆಂಕಿ ಹಾಕಿ ವಿಜಯ್‌ ಎಸ್ಕೇಪ್ ಆಗಿದ್ದ. ಪೊಲೀಸ್ ವಿಚಾರಣೆಯಿಂದ ಇದೀಗ ಕೊಲೆ ಹಿಂದಿನ ಸತ್ಯ ಹೊರಹಾಕಿದ್ದಾನೆ.

ಇದನ್ನೂ ಓದಿ: Murder Case : ಫೋಟೊ ಶೂಟ್‌ ತಗಾದೆ ; ನಾಲ್ವರ ಗ್ಯಾಂಗ್‌ನಿಂದ ಯುವಕನ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Assault Case :‌ ಹೊಡಿತಾನೆ ಬಡಿತಾನೆ ನನ್ನ ಗಂಡ; ಅನುಮಾನ ಪಿಶಾಚಿ ಕಾಟಕ್ಕೆ ಬೇಸತ್ತಳು ಹೆಂಡತಿ

Assault Case : ಕುಡಿದು ಬಂದು ಹೊಡೆದು ಬಡಿದು ಮಾಡುತ್ತಿದ್ದ ಸಂಶಯ ಪಿಶಾಚಿ ಪತಿ ವಿರುದ್ಧ ಪತ್ನಿ ಠಾಣೆ (Family Dispute) ಮೆಟ್ಟಿಲೀರಿದ್ದಾರೆ.

VISTARANEWS.COM


on

By

Drunk husband assaults wife
Koo

ಬೆಂಗಳೂರು: ಪತಿಯ ಸಂಶಯವು ಇಡೀ ಸಂಸಾರವನ್ನೇ ಹಾಳು ಮಾಡಿದೆ. ಪರಪುರಷನ ಜತೆ ಪತ್ನಿಗೆ ಸಂಬಂಧವಿದೆ ಎಂದು ಅನುಮಾನಿಸಿದ ಪತಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಬೆಂಗಳೂರಿನ ಸಂಜಯನಗರದಲ್ಲಿ (Assault Case)ಈ ಘಟನೆ ನಡೆದಿದೆ.

ಸುಬ್ರಮಣಿ ಎಂಬಾತ ಕಂಠ ಪೂರ್ತಿ ಕುಡಿದು ಪತ್ನಿ ಸರಸ್ವತಿಗೆ ಮನಬಂದಂತೆ ಥಳಿಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಸರಸ್ವತಿ ಕುಟುಂಬಸ್ಥರು ದೂರದ ಸಂಬಂಧಿಯಾಗಿರುವ ಸುಬ್ರಮಣಿಗೆ 2015ರಲ್ಲಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆಗಿ 9 ವರ್ಷ ಕಳೆದಿರುವ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಫಿಲ್ಟರ್‌ ಕೆಲಸವನ್ನು ಮಾಡಿಕೊಂಡಿದ್ದ ಸುಬ್ರಮಣಿ ಮೊದಮೊದಲು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ. ಆದರೆ ಇತ್ತೀಚೆಗೆ ಕುಡಿದು ಬಂದು ಸಣ್ಣ-ಪುಟ್ಟ ವಿಚಾರಕ್ಕೆ ಬೈಯುವುದು, ಹೊಡೆಯುವುದು ಮಾಡುತ್ತಿದ್ದ.

ಪತಿ ಕಾಟಕ್ಕೆ ಸರಸ್ವತಿ 6 ಬಾರಿ ಪೊಲೀಸ್‌ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಆಗೆಲ್ಲ ಊರಿನ ಹಿರಿಯರು ಮಧ್ಯಸ್ಥಿತಿಕೆ ವಹಿಸಿ ಜಗಳವನ್ನು ಪರಿಹರಿಸಿದ್ದರು. ಆದರೆ ಇದ್ಯಾವುದರಿಂದಲೂ ಬದಲಾಗದ ಸುಬ್ರಮಣಿ ನಿತ್ಯ ಕುಡಿದು ಬಂದು ಪತ್ನಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ನಡುವೆ ಮನೆ ಕೆಲಸಕ್ಕೆ ಹೋಗುತ್ತಿದ್ದ ಪತ್ನಿಯನ್ನು ಅನುಮಾನಿಸುತ್ತಿದ್ದ ಸುಬ್ರಮಣಿ, ಸರಸ್ವತಿ ಕೆಲಸಕ್ಕೆ ಹೋದರೆ ಹಿಂಬಾಲಿಸಿಕೊಂಡು ಹೋಗುವುದು ಮಾಡಿದ್ದಾನೆ.

ಇದನ್ನೂ ಓದಿ: Anil John Sequeira : ಬಂಟ್ವಾಳ ಯುವಕನ ಅಪರೂಪದ ಸಾಧನೆ; 25ನೇ ವಯಸ್ಸಿಗೆ ನ್ಯಾಯಾಧೀಶರಾಗಿ ಆಯ್ಕೆ

ತಮ್ಮನಿಗೆ ಕಾರು ಕೊಡಿಸಲು ಹೆಂಡ್ತಿ ಒಡವೆ ಅಡವಿಟ್ಟ

ಇನ್ನು ಸುಬ್ರಮಣಿ ತನ್ನ ತಮ್ಮನಿಗೆ ಕಾರು ಕೊಡಿಸುವ ಸಲುವಾಗಿ ಪತ್ನಿ ಸರಸ್ವತಿಯ ಒಡವೆಗಳನ್ನೆಲ್ಲ ಅಡವಿಟ್ಟಿದ್ದಾನೆ. ಚಿನ್ನಾಭರಣವನ್ನು ಬಿಡಿಸಿಕೊಡಿ‌ ಎಂದರೆ ಜಗಳ ತೆಗೆದು ಹೊಡೆದು ಬಡಿದು ಮಾಡಿದ್ದಾನೆ.

ಈ ಗಲಾಟೆ ವಿಚಾರವನ್ನು ಪೋಷಕರಿಗೆ ಹಾಗೂ ಸಂಬಂಧಿಕರಿಗೆ ಹೇಳಿದರೆ ಕೊಲ್ಲುವುದಾಗಿ ಸುಬ್ರಮಣಿ ಬೆದರಿಕೆ ಹಾಕಿದ್ದಾನೆ. ಸದ್ಯ ಈತನ ಕಾಟಕ್ಕೆ ಬೇಸತ್ತಿರುವ ಸರಸ್ವತಿ ಸಂಜಯನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Kodagu News : ಮಸೀದಿಯಲ್ಲಿ ನಮಾಜ್‌ ಮಾಡಿದ ಮಹಿಳೆಗೆ ಗ್ರಾಮದಿಂದಲೇ ಬಹಿಷ್ಕಾರ; ಪತಿ ಅಂತ್ಯಕ್ರಿಯೆಗೂ ನಕಾರ

Inhuman Behaviour: ಮಹಿಳೆಯೊಬ್ಬರು ಮಸೀದಿಗೆ ಹೋಗಿ ನಮಾಜ್‌ ಮಾಡಿದ್ದಕ್ಕೆ ಇಡೀ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಪತಿಯ ಅಂತ್ಯಕ್ರಿಯೆಗೂ ಭಾಗವಹಿಸಿಲು ಬಿಟ್ಟಿಲ್ಲ ಎಂಬ ಆರೋಪ ಕೇಳಿ (Kodagu News) ಬಂದಿದೆ.

VISTARANEWS.COM


on

By

Woman offers namaz inside mosque boycott from the village
Koo

ಕೊಡಗು: ಮಸೀದಿಗೆ ಹೋಗಿ ಮಹಿಳೆಯೊಬ್ಬರು ನಮಾಜ್ ಮಾಡಿದ್ದಕ್ಕೆ ಇಡೀ ಕುಟುಂಬಕ್ಕೆ ಕಳೆದ 25 ವರ್ಷದಿಂದ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ. ಕೊಡಗಿನ (Kodagu News) ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಈ ಅಮಾನವೀಯ (Inhuman Behaviour) ಘಟನೆ ನಡೆದಿದೆ.

ಕೇರಳದ ಕೋಜಿಕೋಡಿನ ಜುಭೇದಾ ಅವರು 30 ವರ್ಷದ ಹಿಂದೆ ಅಹಮ್ಮದ್ ಎಂಬುವರನ್ನು ವಿವಾಹವಾಗಿದ್ದರು. ಒಮ್ಮೆ ಜುಭೇದಾ ವಿರಾಜಪೇಟೆಯಲ್ಲಿ ಮಸೀದಿಗೆ ಹೋಗಿ ನಮಾಜ್ ಮಾಡಿದ್ದರು. ಇಷ್ಟಕ್ಕೆ ಜುಭೇದಾ ಮತ್ತು ಅಹಮ್ಮದ್ ಕುಟುಂಬಕ್ಕೆ ಗ್ರಾಮದಿಂದಲೇ ಬಹಿಷ್ಕಾರವನ್ನು ಹಾಕಿದ್ದರು.

ಜುಭೇದಾ ಕುಟುಂಬಸ್ಥರು ಗ್ರಾಮದಲ್ಲಿ ಯಾರನ್ನು ಮಾತನಾಡಿಸುವಂತಿಲ್ಲ. ಯಾರ ಮನೆಗೂ ಇವರ ಕುಟುಂಬ ಹೋಗುವಂತಿಲ್ಲ. ಯಾರೂ ಇವರ ಮನೆಗೆ ಬರುವಂತಿಲ್ಲ. ಒಂದು ವೇಳೆ ಯಾರಾದರೂ ಇವರನ್ನು ಮಾತನಾಡಿಸಿದರೆ 5,000 ರೂ. ದಂಡ ಕಟ್ಟಬೇಕು. ಮಾತ್ರವಲ್ಲ ಗ್ರಾಮದಲ್ಲಿರುವ ಅಂಗಡಿಗೆ ಹೋಗಿ ಕನಿಷ್ಠ ಒಂದು ಬೆಂಕಿ ಪೊಟ್ಟಣ ಕೂಡ ತರುವಂತಿಲ್ಲ. ಈ ಕುಟುಂಬ ಕಳೆದ 25 ವರ್ಷಗಳಿಂದ ಈ ಚಿತ್ರಹಿಂಸೆಯನ್ನು ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: Murder Case : ಅಳಿಯನಿಗೆ ಅನೈತಿಕ ಸಂಬಂಧ; ಬಿಯರ್‌ ಕುಡಿಸಿ ಚಾಕುವಿನಿಂದ ಇರಿದು ಕೊಂದ ಮಾವ

ಅನಾರೋಗ್ಯದಿಂದ ಮೃತಪಟ್ಟ ಅಹಮ್ಮದ್‌

ಇದೆಲ್ಲವನ್ನೂ ಸಹಿಸಿಕೊಂಡು ಬಂದಿದ್ದ ಈ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿತ್ತು. ಜುಬೇದಾ ಅವರ ಪತಿ ಅಹಮ್ಮದ್‌ ನಿನ್ನೆ ಶುಕ್ರವಾರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತಿ ಕಳೆದುಕೊಂಡ ದುಃಖದಲ್ಲಿದ್ದ ಜುಬೇದಾ ಕುಟುಂಬಕ್ಕೆ, ಪತಿ ಅಂತ್ಯಕ್ರಿಯೆಗೆ ಭಾಗವಹಿಸಲು ಗುಂಡಿಗೆರೆ ಶಾಫಿ ಜುಮ್ಮಾ ಮಸೀದಿ ಆಡಳಿತ ಮಂಡಳಿ ಮತ್ತು ಅಧ್ಯಕ್ಷರು ಬಿಟ್ಟಿಲ್ಲ .

ಕಳೆದ 30 ವರ್ಷದಿಂದ ಅಹಮ್ಮದ್‌ ಅವರು ನಮ್ಮೊಂದಿಗೆ ಇದ್ದರು. ಮೊನ್ನೆ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮಡಿಕೇರಿ ಆಸ್ಪತ್ರೆಗೆ ಕರೆದೊಯ್ದಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಮ್ಮ ತಂದೆ ಅಹಮ್ಮದ್‌ ಮೃತಪಟ್ಟಿದ್ದರು. ಶಾಫಿ ಮಸೀದಿ ಜಮಾಹತ್ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಬಿಟ್ಟಿಲ್ಲ ಎಂದು ಮಗ ರಶೀದ್ ಆರೋಪಿಸಿದ್ದಾರೆ.

ತಂದೆಯವರ ಮೃತದೇಹವನ್ನು ಒತ್ತಾಯ ಪೂರ್ವಕವಾಗಿ ಅಹಮ್ಮದ್ ಅವರ ಹಿರಿಯ ಹೆಂಡತಿ ಮನೆಗೆ ಕೊಂಡೊಯ್ದಿದ್ದಾರೆ. ಹಿರಿ ಹೆಂಡತಿ, ಮಕ್ಕಳಿಂದಲೇ ಅಂತ್ಯಕ್ರಿಯೆ ಮಾಡಿಸಿದ್ದಾರೆ. ಕಿರಿಯ ಹೆಂಡತಿ ಜುಭೇದಾ ಮತ್ತು ಮಕ್ಕಳಿಗೆ ಮೃತದೇಹವನ್ನು ನೋಡಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವಿದೆ.

ಮಸೀದಿಗೆ ಹೋಗಿ ತಂದೆಯ ಶವದ ಮುಂದೆ ಪ್ರಾರ್ಥನೆ ಮಾಡಲು ಹೋದರೆ, ಮಸೀದಿ ಆಡಳಿತ ಮಂಡಳಿ ಅವರು ನಿಮಗೆ ಬಹಿಷ್ಕಾರ ಹಾಕಿದ್ದೇವೆ ನೀವು ಬರುವಂತಿಲ್ಲ ಎಂದು ಬೈದು ಕಳುಹಿಸಿದ್ದಾರೆ. ಇದರಿಂದ ಮನನೊಂದು ಅಲ್ಲಿಂದ ವಾಪಸ್ ಬಂದಿದ್ದೇವೆ. ಗ್ರಾಮದಿಂದ ಬಹಿಷ್ಕಾರ ಹಾಕಿರುವ ಬಗ್ಗೆ ಹಲವು ಬಾರಿ ಪೊಲೀಸ್ ಠಾಣೆಗೆ ಹಾಗೂ ಜಿಲ್ಲಾ ವಕ್ಫ್ ಬೋರ್ಡಿಗೂ ದೂರು ನೀಡಿದ್ದೇವೆ. ಆದರೆ ಯಾರಿಂದಲೂ ಇದುವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಅಹಮ್ಮದ್ ಅವರ ಮಗ ರಶೀದ್ ತಿಳಿಸಿದ್ದಾರೆ.

ತಂದೆ ಅಂತ್ಯಕ್ರಿಯೆಗೆ ಬಿಡದ ಹಿನ್ನೆಲೆಯಲ್ಲಿ ರಶೀದ್ ಮತ್ತೊಮ್ಮೆ ವಿರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಿರಿಯ ಹೆಂಡತಿ ಮಕ್ಕಳು ಪೂರ್ಣ ಆಸ್ತಿಗಾಗಿ ಈ ರೀತಿ ಮಾಡುತ್ತಿದ್ದಾರೆ. ಮಸೀದಿ ಜಮಾಹತ್ ಮಂಡಳಿಯಲ್ಲಿ ಹಿರಿಯ ಹೆಂಡತಿಯ ಕುಟುಂಬದವರೇ ಇದ್ದಾರೆ. ಹೀಗಾಗಿ ಮಸೀದಿ ಮತ್ತು ಜಮಾಹತ್ ಮೂಲಕ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನೂ ಅಹಮ್ಮದ್ ಮತ್ತು ರಶೀದ್ ಕಳೆದ ನಾಲ್ಕು ವರ್ಷಗಳ ಹಿಂದೆ 78 ಸಾವಿರ ರೂಪಾಯಿ ದಂಡ ಕಟ್ಟಿ ಮಸೀದಿ ಸದಸ್ಯತ್ವ ಪಡೆದಿದ್ದರು. ಆದರೆ ಎರಡು ವರ್ಷಗಳ ಹಿಂದೆ ಯಾವುದೇ ಮಾಹಿತಿ ನೀಡದೆ ಮಸೀದಿಯ ಸದಸ್ಯತ್ವ ರದ್ದು ಮಾಡಿದ್ದಾರೆ. ಆ ಮೂಲಕ ಶಾಫಿ ಜುಮ್ಮಾ ಮಸೀದಿ ಜಮಾಹತ್ ಮತ್ತೆ ಗ್ರಾಮದಿಂದ ಬಹಿಷ್ಕಾರ ಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾವೇರಿ

Murder Case : ಅಳಿಯನಿಗೆ ಅನೈತಿಕ ಸಂಬಂಧ; ಬಿಯರ್‌ ಕುಡಿಸಿ ಚಾಕುವಿನಿಂದ ಇರಿದು ಕೊಂದ ಮಾವ

Murder Case : ಚಾಮರಾಜನಗರದಲ್ಲಿ ಮಗಳಿಗೆ ಕಾಟ ಕೊಡುತ್ತಿದ್ದ ಕುಡುಕ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಹಾವೇರಿಯಲ್ಲಿ ಅಳಿಯನಿಗೆ ಅನೈತಿಕ ಸಂಬಂಧವಿತ್ತು ಎಂದು ಮಾವನೇ ಚಾಕುವಿನಿಂದ ಇರಿದು ಕೊಂದಿದ್ದಾನೆ.

VISTARANEWS.COM


on

By

illicit relationship Father in law murdered son in law
ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಬಿಸಾಡಿದ್ದ ಆರೋಪಿ
Koo

ಹಾವೇರಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಘಟನೆ ನಡೆದಿದೆ. ಸಲೀಂ ದಾದಾಫೀರ್ ಒಲೆಕಾರ್ (29) ಕೊಲೆಯಾದ ವ್ಯಕ್ತಿ.

ಹೈದರ ಚಮನಸಾಬ್ ಹಲಗೇರಿ ಎಂಬುವವನು ಕೊಲೆ ಆರೋಪಿ ಆಗಿದ್ದಾನೆ. ನಗರದ ಹೊರವಲಯಕ್ಕೆ ಸಲೀಂ ಕರೆದು ಹೋದ ಹೈದರ್‌ ಚೆನ್ನಾಗಿ ಬಿಯರ್ ಕುಡಿಸಿದ್ದಾನೆ. ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿ ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದರು. ಆರೋಪಿ ಹಾಗೂ ಕೊಲೆಯಾದ ವ್ಯಕ್ತಿ ಇಬ್ಬರು ಮಾಗೋಡ ಗ್ರಾಮದವರು ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

ಕುಡುಕ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಮಾವ

ಚಾಮರಾಜನಗರ: ಮಾವನೊಬ್ಬ ಅಳಿಯನನ್ನೇ ಕೊಚ್ಚಿ ಕೊಲೆಗೈದಿರುವ ಘಟನೆ ಚಾಮರಾಜನಗರದ‌ ಜನ್ನೂರು ಗ್ರಾಮದಲ್ಲಿ (Murder Case) ನಡೆದಿದೆ. ಉಮೇಶ್ (28) ಹತ್ಯೆಯಾದವನು. ಮಾವ ನಂಜುಂಡಯ್ಯ ಆರೋಪಿ ಆಗಿದ್ದಾರೆ.

ಹುಬ್ಬಳ್ಳಿ ಮೂಲದ ಉಮೇಶ್ (28) ನಿತ್ಯ ಕುಡಿದು ಬಂದು ನಂಜುಂಡಯ್ಯರ ಮಗಳಿಗೆ ತೊಂದರೆ ಕೊಡುತ್ತಿದ್ದ. ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಉಮೇಶ್ ಕುಡಿತವನ್ನೇ ಚಟವನ್ನಾಗಿಸಿಕೊಂಡಿದ್ದ. ದುಡಿದ ದುಡ್ಡನ್ನೆಲ್ಲ ಕುಡಿತಕ್ಕೆ ಹಾಕುತ್ತಿದ್ದ. ಮಾತ್ರವಲ್ಲ ಕುಡಿದು ಬಂದು ಪತ್ನಿಗೆ ಹೊಡೆದು ಬಡಿದು ಮಾಡುತ್ತಿದ್ದ.

ಹೀಗೆ ನಿನ್ನೆ ಗುರುವಾರ ರಾತ್ರಿಯೂ ಕುಡಿದು ಬಂದು ಗಲಾಟೆ ಮಾಡಿದ್ದ. ಇದರಿಂದ ರೋಸಿ ಹೋಗಿ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ನಂಜುಂಡಯ್ಯ ಕೊಲೆ ಮಾಡಿದ್ದಾರೆ. ಉಮೇಶ್‌ ಮುಖಕ್ಕೆ ಕೊಡಲಿಯಿಂದ ಹೊಡೆದು ಛಿದ್ರ ಮಾಡಲಾಗಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುದೇರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕುದೇರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾವ ನಂಜುಂಡಯ್ಯನನ್ನು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Physical Assault : ಪ್ರಿಯಕರನ ಕಣ್ಮುಂದೆಯೇ ಯುವತಿಯ ಮೈ ಮುಟ್ಟಿ ಕಾಮುಕರ ವಿಕೃತಿ!

Assault case : ಕಸ ಹಾಕಲು ಹೋಗಿದ್ದ ಯುವತಿಗೆ ಅಪ್ರಾಪ್ತ ಪುಂಡ ಹುಡುಗರು ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾರೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮರದ ತುಂಡಿನಿಂದ ಹಲ್ಲೆ (Physical Assault) ನಡೆಸಿದ್ದಾರೆ.

VISTARANEWS.COM


on

By

Woman sexually assaulted in Bengaluru
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸಾರ್ವಜನಿಕ ಜಾಗದಲ್ಲೇ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಅದರಲ್ಲೂ ಸೇಫ್‌ ಸಿಟಿ ಬೆಂಗಳೂರಲ್ಲೇ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯಕ್ಕೆ (Assault case) ಒಳಗಾಗಿದ್ದಾಳೆ. ಗೆಳೆಯನೊಂದಿಗೆ ಯುವತಿಯೊಬ್ಬಳು ಕಸ ಬಿಸಾಡಲು ಹೋದಾಗ, ನಾಲ್ವರು ಹುಡುಗರು ಮೈ-ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕೋರಮಂಗಲ ಪಾಸ್ ಪೋರ್ಟ್ ಕಚೇರಿ ಸಮೀಪದಲ್ಲಿ (Physical Assault) ಈ ಘಟನೆ ನಡೆದಿದೆ.

ಯುವಕ-ಯುವತಿಯನ್ನು ಕಂಡ ನಾಲ್ವರು ಪುಂಡರು ರೇಗಿಸಲು ಶುರು ಮಾಡಿದ್ದಾರೆ. ನಂತರ ಏಕಾಏಕಿ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆಯ ಮುಖಕ್ಕೆ ಪಂಚ್ ಮಾಡಿದ್ದಾರೆ. ಇದನ್ನೂ ತಡೆಯಲು ಹೋದ ಪ್ರಿಯಕರನ ಮೇಲೆ ಮರದ ತುಂಡಿನಿಂದ ಹಲ್ಲೆ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿ ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಂಧಿತರೆಲ್ಲರೂ ಅಪ್ರಾಪ್ತರೆಂದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Road Accident : ಅತಿ ವೇಗ ತಂದ ಆಪತ್ತು; ಬೆಂಗಳೂರಲ್ಲಿ ಬಸ್‌ ಹರಿದು ಬೈಕ್‌ ಸವಾರ ಸಾವು

ಎಚ್‌ಒಡಿಗೇ ಲೈಂಗಿಕ ಕಿರುಕುಳ ನೀಡ್ತಿದ್ದಾನೆ ಈ ಡಾಕ್ಟರ್‌

ಬೆಂಗಳೂರು: ಸಾಮಾನ್ಯವಾಗಿ ಸೀನಿಯರ್‌ ಅಧಿಕಾರಿಗಳು ಹೊಸದಾಗಿ ಕೆಲಸಕ್ಕೆ ಸೇರಿದ ಹೆಣ್ಮಕ್ಕಳನ್ನು ಪುಸಲಾಯಿಸುವುದು, ಬಳಸಿಕೊಳ್ಳಲು ಯತ್ನಿಸುವುದು, ಲೈಂಗಿಕ ಕಿರುಕುಳ ನೀಡುವುದರ ಬಗ್ಗೆ ದೂರುಗಳು ದಾಖಲಾಗುತ್ತವೆ. ಆದರೆ, ಇನ್ನೊಬ್ಬ ಜೂನಿಯರ್‌ ಸಿಬ್ಬಂದಿ (Junior Doctor Harass Senior) ತನ್ನ ವಿಭಾಗದ ಮುಖ್ಯಸ್ಥರಾಗಿರುವ ಮಹಿಳೆಗೇ ಲೈಂಗಿಕ ಕಿರುಕುಳ (Physical Abuse) ನೀಡುತ್ತಿದ್ದಾನಂತೆ.

ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜು (Kempegowda Institute of Medical sciences-KIMS) ನಲ್ಲಿ ಇಂಥ ಘಟನೆಯೊಂದು ನಡೆದಿರುವ ಗಂಭೀರ ಆಪಾದನೆ ಕೇಳಿಬಂದಿದೆ. ಫಾರ್ಮಾ ಕಾಗ್ನಸಿ ವಿಭಾಗದ ಮುಖ್ಯಸ್ಥೆಯಾಗಿರುವ ಮಹಿಳಾ ಡಾಕ್ಟರ್‌ಗೆ (Woman Doctor) ಅದೇ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಡಾ. ರಾಜು ಎಂಬುವವರು ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ದಾಖಲಾಗಿದೆ.

Physical Abuse

ನನ್ನ ಜೂನಿಯರ್‌ ಆಗಿರುವ ಡಾ. ರಾಜು ನನ್ನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿಕೊಂಡು ಬರುತ್ತಿದ್ದಾನೆ. ನನ್ನನ್ನು ಫಾಲೋ ಮಾಡ್ತಾನೆ, ಮೈಕೈ ಮುಟ್ಟಿ ಕಿರುಕುಳ ನೀಡುತ್ತಾನೆ ಎಂದು ಕಿಮ್ಸ್‌ ವೈದ್ಯೆ ಬನಶಂಕರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಒಬ್ಬ ಜೂನಿಯರ್‌ ಡಾಕ್ಟರ್‌ ನಿಜಕ್ಕೂ ಹಿರಿಯ ಮಹಿಳಾ ವೈದ್ಯೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎನ್ನುವುದು ಭಯಾನಕ ವಿಚಾರವಾಗಿದೆ. ಇಂಥ ಪವರ್‌ ಫುಲ್‌ ಹುದ್ದೆಗಳಲ್ಲಿ ಇರುವ ಮಹಿಳೆಯರೇ ಈ ರೀತಿ ಹಿಂಸೆಗೆ ಒಳಗಾದರೆ ಉಳಿದವರ ಪಾಡೇನು ಎಂಬ ಪ್ರಶ್ನೆ ಇದೆ. ಅದೇ ಹೊತ್ತಿಗೆ ಇದು ನಿಜವಾದ ಪ್ರಕರಣವೋ ಅಥವಾ ತಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂಬ ಕಾರಣಕ್ಕೆ ನೀಡಿದ ದೂರಾಗಿರಬಹುದಾ ಎಂಬ ಸಂಶಯವೂ ಇದೆ. ಹೀಗಾಗಿ ಪೊಲೀಸರು ಎರಡೂ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Google Pay
ದೇಶ7 mins ago

Google Pay: ಇಲ್ಲಿದೆ ಬ್ಯಾಡ್‌ನ್ಯೂಸ್; ಈ ದಿನದಿಂದ ಗೂಗಲ್‌ ಪೇ ಆ್ಯಪ್ ಸ್ಥಗಿತ!

icc test batting rankings
ಕ್ರೀಡೆ11 mins ago

Yashasvi Jaiswal : ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್​

Star travel Fashion mokshith pai
ಫ್ಯಾಷನ್15 mins ago

Star travel Fashion: ಪಾರು ಖ್ಯಾತಿಯ ಮೋಕ್ಷಿತಾ ಪೈ ದುಬೈ ಟ್ರಾವೆಲ್‌ ಫ್ಯಾಷನ್‌ ವಿಶೇಷ ಇದು!

Girish Kasaravalli first film Ghatashraddha is another feather
ಸ್ಯಾಂಡಲ್ ವುಡ್16 mins ago

Ghatashraddha Movie: ಗಿರೀಶ್ ಕಾಸರವಳ್ಳಿಯವರ ಮೊದಲ ಚಿತ್ರ ‘ಘಟಶ್ರಾದ್ಧ ಚಿತ್ರಕ್ಕೆ ಇನ್ನೊಂದು ಪ್ರಶಸ್ತಿ!

Boy dies after being hit by a roll while playing jokali in Davangere
ಕರ್ನಾಟಕ22 mins ago

Davanagere News : ಕುತ್ತಿಗೆಗೆ ಬಿಗಿದ ಜೋಕಾಲಿ ಹಗ್ಗ; 4ನೇ ಕ್ಲಾಸ್‌ ಹುಡುಗ ದುರ್ಮರಣ

Drunk husband assaults wife
ಬೆಂಗಳೂರು56 mins ago

Assault Case :‌ ಹೊಡಿತಾನೆ ಬಡಿತಾನೆ ನನ್ನ ಗಂಡ; ಅನುಮಾನ ಪಿಶಾಚಿ ಕಾಟಕ್ಕೆ ಬೇಸತ್ತಳು ಹೆಂಡತಿ

indian penal code
ದೇಶ59 mins ago

New Laws: ಐಪಿಸಿ ಮೂಲೆಗೆ; ಜುಲೈ 1ರಿಂದಲೇ ಹೊಸ ಕಾನೂನು ಜಾರಿ, ಏನೆಲ್ಲ ಬದಲು?

bankok
ವೈರಲ್ ನ್ಯೂಸ್1 hour ago

Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

Amazon Sweets
ವಾಣಿಜ್ಯ1 hour ago

Empower HER Exhibition : ಎಫ್‌ಕೆಸಿಸಿಐ ಆವರಣದಲ್ಲಿ ಮಹಿಳಾ ಉದ್ದಿಮೆದಾರರಿಂದ ಯಶಸ್ವಿ ವಸ್ತು ಪ್ರದರ್ಶನ ಮತ್ತು ಮಾರಾಟ

Actor Manoj Rajput Arrested On Allegations Of Raping
ಸಿನಿಮಾ1 hour ago

Actor Manoj Rajput: ಅತ್ಯಾಚಾರ ಎಸಗಿದ ಆರೋಪದ ಮೇಲೆ ನಟ ಮನೋಜ್ ರಜಪೂತ್ ಬಂಧನ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Varthur Santhosh
ಮಂಡ್ಯ4 hours ago

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

read your daily horoscope predictions for february 24 2024
ಭವಿಷ್ಯ11 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಸಿಗಲಿದೆ ಸಂಗಾತಿ ಸಾಥ್‌

Staff nurses attempt to convert at health centre in Ratagal village
ಕಲಬುರಗಿ23 hours ago

Forced Conversion : ಆಪರೇಶನ್‌ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್‌ ವಾಶ್‌

Fire breaks out in auto shed Burnt autos
ಬೆಂಗಳೂರು1 day ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

He sent a private photo video of his girlfriend
ಬೆಳಗಾವಿ1 day ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

read your daily horoscope predictions for february 23 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು2 days ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ2 days ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ4 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

ಟ್ರೆಂಡಿಂಗ್‌