ಬೆಂಗಳೂರು: ಕಳೆದ ಏ. 19ರಂದು ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ಮಹಿಳೆಯೊಬ್ಬರ ಬರ್ಬರ (Murder Case) ಹತ್ಯೆಯಾಗಿತ್ತು. ಶೋಭಾ (48) ಎಂಬಾಕೆಯ ಮೃತದೇಹವು ಬೆಡ್ ರೂಮಿನಲ್ಲಿ ನಗ್ನವಾಗಿ ಬಿದ್ದಿತ್ತು. ಇದೀಗ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿರುವ ಕೊಡಿಗೇಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹೇರೋಹಳ್ಳಿ ಮೂಲದ ನವೀನ್ ಬಂಧಿತ ಆರೋಪಿಯಾಗಿದ್ದಾನೆ. ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಕೊಟ್ಟಿದ್ದ ಶೋಭಾ, ಕೊಡಿಗೆಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದರು. ಈ ವೇಳೆ ಶೋಭಾಗೆ ಇನ್ಸ್ಟಾಗ್ರಾಂನಲ್ಲಿ ಆರೋಪಿ ನವೀನ್ ಪರಿಚಯವಾಗಿದ್ದ. ಪರಿಚಯವು ಸ್ನೇಹ, ಪ್ರೀತಿಗೆ ತಿರುಗಿ, ಮಗನ ವಯಸ್ಸಿನ ಯುವಕನೊಂದಿಗೆ ಶೋಭಾ ಅನೈತಿಕ ಸಂಬಂಧವನ್ನು ಹೊಂದಿದ್ದರು.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸುತ್ತಿದ್ದಳು. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲಿ ಜತೆಯಾಗಿ ಇದ್ದಾಗಲೇ ಬರ್ಬರವಾಗಿ ಕೊಂದು ಪರಾರಿ ಆಗಿದ್ದ.
ನಂತರ ಶೋಭಾ ಮಗಳು ತಾಯಿಗೆ ಎಷ್ಟು ಬಾರಿ ಫೋನ್ ಮಾಡಿದರೂ ಸ್ವೀಕರಿಸಿರಲಿಲ್ಲ. ಇದರಿಂದ ಆತಂಕಗೊಂಡು, ಮನೆಗೆ ಬಂದು ನೋಡಿದಾಗ ತಾಯಿ ನಗ್ನ ಸ್ಥಿತಿಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದು ಕಣ್ಣಿಗೆ ಬಿದ್ದಿತ್ತು. ಆ ಪ್ರಕರಣವು ಬೆಳಕಿಗೆ ಬಂದಿತ್ತು. ಸದ್ಯ ಆರೋಪಿಯನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
ಇನ್ನು ಶೋಭಾ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. 48ರ ಶೋಭಾಳಿಗೆ ಯುವಕರೆಂದರೆ ಹುಚ್ಚು ಜಾಸ್ತಿ ಅಂತೆ. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿರುವ ಶೋಭಾ, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು.
ಒಳ್ಳೆ ಕುಟುಂಬದಿಂದ ಬಂದಿದ್ದ ನವೀನ್‌ನ ಹಿಂದೆ ಬಿದ್ದು ಶೋಭಾ ಕಾಟ ಕೊಟ್ಟಿದ್ದಳು. ಮನೆಗೆ ಕರೆದಾಗ
ಬಂದಿಲ್ಲ ಎಂದರೆ ಬೆದರಿಕೆ ಹಾಕುತ್ತಿದ್ದಳು ಎನ್ನಲಾಗಿದೆ. ಆಕೆಗೆ ಹೆದರಿ ನವೀನ್ ಬಂದು ಹೋಗುತ್ತಿದ್ದ. ಇನ್ನೂ
ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
ಇದನ್ನೂ ಓದಿ: Love Case : ಪ್ರಿಯತಮೆಯ ಮದುವೆ ದಿನವೇ ಪ್ರಿಯತಮನ ರುಂಡ-ಮುಂಡ ಕಟ್; ಕೊಲೆಯೋ? ಆತ್ಮಹತ್ಯೆಯೋ?
ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಮುಸ್ಲಿಂ ಯುವಕನ ಕೊಂದ ಅರ್ಚಕ
ರಾಯಚೂರು: ರಾಯಚೂರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಹತ್ಯೆ (Murder Case) ನಡೆದಿದೆ. ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ಖಾದರ್ ಭಾಷಾ (28) ಕೊಲೆಯಾದವನು. ಮಾರುತಿ ಆರೋಪಿಯಾಗಿದ್ದಾನೆ.
ಪತ್ನಿ ಮೇಲೆ ಕಣ್ಣು ಹಾಕಿದ ಖಾದರ್ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಹನುಮ ಜಯಂತಿ ದಿನದಂದೆ ಬರ್ಬರವಾಗಿ ಕೊಲೆಗೈಯಲಾಗಿದೆ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಸುಮಾರಿಗೆ ತುಗ್ಗಲದಿನ್ನಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು
ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಕೇಶ್ (22) ಮೃತ ದುರ್ದೈವಿ.
ಭಾನುವಾರ ರಾತ್ರಿ ರಾಕೇಶ್ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.
ಸ್ವಲ್ಪ ಸಮಯದ ನಂತರ ರಾಕೇಶ್ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.
ಇನ್ನು ಹಿಂದು ಯುವಕನ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದು ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದರು.
ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿ, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ