ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Murder case) ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪತಿಯಿಂದಲೇ ಪತ್ನಿಯ ಕೊಲೆಯಾಗಿದೆ. ಫಾತಿಮಾ (34) ಕೊಲೆಯಾದವರು. ಪತಿ ತಬ್ರೇಜ್ ಪಾಷಾ ಆರೋಪಿಯಾಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಲವು ದಿನಗಳಿಂದ ಇಬ್ಬರ ಮಧ್ಯೆ ಜಗಳ ಆಗಿತ್ತು. ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಲೇ ಇತ್ತು. ಅದೇ ರೀತಿ ಇಂದು ಬೆಳಗ್ಗೆ ಕೂಡ ಇಬ್ಬರ ಮಧ್ಯೆ ಜಗಳ ಶುರುವಾಗಿತ್ತು. ಶುಕ್ರವಾರ ಮನೆಗೆ ನುಗ್ಗಿದ ತಬ್ರೇಜ್, ಏಕಾಏಕಿ ಫಾತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಬೆಳಗ್ಗೆ 8.30ರ ಸುಮಾರಿಗೆ ಪತ್ನಿ ಫಾತಿಮಾಗೆ ಚಾಕು ಇರಿದು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
ಸಿಸಿಟಿವಿಯಲ್ಲಿ ಸೆರೆಯಾದ ಹಂತಕನ ಓಡಾಟ
ಪತ್ನಿಯನ್ನು ಕೊಲ್ಲಲು ಮನೆಗೆ ಬಂದಿದ್ದ ತಬರೇಜ್‌ನಾ ಓಡಾಟವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಮಾಯಕನಂತೆ ಮನೆಗೆ ಬರುವ ತಬರೇಜ್ ಯಾರಿಗೂ ಡೌಟ್ ಬಾರದಂತೆ ರಸ್ತೆಯಲ್ಲಿ ಬೈಕ್ ಬಿಟ್ಟು ಸೈಲೆಂಟ್ ಆಗಿ ಒಳಗೆ ನುಗ್ಗಿದ್ದ. ಬಳಿಕ ಚಾಕು ತೆಗೆದು ಹತ್ಯೆ ಮಾಡಿ, ಚಾಕುವನ್ನು ಕೈನಲ್ಲಿಯೇ ಹಿಡಿದು ಹೊರ ಬಂದಿದ್ದಾನೆ. ಬಳಿಕ ಬೈಕ್ ಏರಿ ಎಸ್ಕೇಪ್ ಆಗಿದ್ದಾನೆ.
ಅಂಗವಿಕಲ ತಾಯಿ ಮುಂದೆಯೇ ಮಗಳ ಬರ್ಬರ ಹತ್ಯೆ
ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಜ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಇತ್ತೀಚೆಗೆ ರಸ್ತೆಯೊಂದರ ಬಳಿ ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಜ್, ಕೊಲೆ ಮಾಡುತ್ತಿನಿ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಜ್ ಏನಾದರೂ ಮಾಡುತ್ತಾನೆ ಎಂದೇ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಇಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.
ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!
ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ
ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್ (25) ಕೊಲೆಯಾದವನು.
ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.
ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್
ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್ ಅಟ್ಯಾಕ್ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ