ಬೆಂಗಳೂರು: ಕಳೆದ ಫೆ.20 ರಂದು ಪಾಳು ಬಿದ್ದ ಕಟ್ಟಡದಲ್ಲಿ ಮಹಿಳೆಯೊಬ್ಬರ ಶವ (Women Dead Body Found) ಪತ್ತೆಯಾಗಿತ್ತು. ಬೆಂಗಳೂರಿನ ಶಾಂತಿನಗರ ಡಬ್ಬಲ್ ರೋಡ್ನ ಜನತಾ ಕೋ-ಆಪರೇಟಿವ್ ಬ್ಯಾಂಕ್ ಕಟ್ಟಡ ಸಮೀಪದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಶವ (Murder case) ಸಿಕ್ಕಿತ್ತು.
ಅನುಮಾನಾಸ್ಪದ ಸಾವು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ, ಮಹಿಳೆಯನ್ನು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯನ್ನು ಆಟೋದಲ್ಲಿ ಬೆಳಗಿನ ಜಾವ ಕರೆದೊಯ್ದು ಅತ್ಯಾಚಾರ ಎಸಲಾಗಿದೆ. ನಂತರ ಕೊಲೆ ಮಾಡುವ ಉದ್ದೇಶದಿಂದಲೇ ಕಟ್ಟಡದಿಂದ ತಳ್ಳಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಬಳಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು ಸಾಬೀತಾಗಿದೆ.
ಶವ ಸಿಕ್ಕಿದ್ದು ಹೇಗೆ?
ಪಾಳು ಬಿದ್ದ ಕಟ್ಟಡದಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣಕ್ಕೆ ಸ್ಥಳೀಯರು ಒಳಹೊಕ್ಕು ನೋಡಿದಾಗ ಮಹಿಳೆಯ ಮೃತದೇಹವು ಕಂಡಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಎಸ್ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.
ಮೃತಳು ಯಾರು, ಯಾಕಾಗಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬುದರ ತಿಳಿದಿರಲಿಲ್ಲ. ಹೀಗಾಗಿ ಡಬಲ್ ರೋಡ್ ಸುತ್ತಮುತ್ತ ಇರುವ ಸಿಸಿಟಿವಿ ಪರಿಶೀಲನೆ ನಡೆಸಿದ್ದರು. ಇದೀಗ ಪ್ರಕರಣ ಸಂಬಂಧ ಮುಭಾರಕ್ (38) ಎಂಬಾತನನ್ನು ಬಂಧಿಸಿದ್ದು, ತನಿಖೆಗೆ ಒಳಪಡಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ