Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು - Vistara News

ಬೆಂಗಳೂರು

Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

Murder case : ಮಿಷನ್ ರಸ್ತೆಯ ಕಟ್ಟಡದ ನೆಲ ಮಹಡಿಯಲ್ಲಿ ಯುವಕನ ಶವವೊಂದು (Dead Body Found) ಪತ್ತೆಯಾಗಿತ್ತು. ಮೊದಮೊದಲು ಇದೊಂದು ಕೊಲೆ ಎಂದು ಭಾವಿಸಲಾಗಿತ್ತು. ಆದರೆ ಅಸಲಿ ಸಂಗತಿಯನ್ನು ಪೊಲೀಸರು ಹೊರಗೆಳೆದಿದ್ದಾರೆ. ಪ್ರೀತಿ ವಿಷಯಕ್ಕೆ ಬಲಿಯಾದ ಎಂದವರಿಗೆ ಯುವಕನ ಸಾವಿನ ರಹಸ್ಯವನ್ನು ಬಯಲು (Secret revealed) ಮಾಡಿದ್ದಾರೆ.

VISTARANEWS.COM


on

Murder case In Bengaluru
ಬಂಧಿತ ಆರೋಪಿಗಳು ಹಾಗೂ ಮೃತಪಟ್ಟಿದ್ದ ಯುವಕ ಸತ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ಮೇ 9 ರಂದು ಬೆಂಗಳೂರಿನ ಎಸ್‌ಆರ್‌ ನಗರ ಠಾಣಾ ವ್ಯಾಪ್ತಿಯಲ್ಲಿರುವ ಮಿಷನ್ ರೋಡ್‌ನ ಪಿ.ಸಿ.ಮೋಹನ್ ಆ್ಯಂಡ್‌ ಕೊ ಕಾಂಪ್ಲೆಕ್ಸ್‌ನ ಗ್ರೌಂಡ್ ಫ್ಲೋರ್‌ನಲ್ಲಿ ಯುವಕನೊಬ್ಬನ ಶವ (Dead Body Found) ಪತ್ತೆಯಾಗಿತ್ತು. ಕೆ.ಎಸ್. ಗಾರ್ಡನ್ ನಿವಾಸಿ ಸತ್ಯ (22) ಎಂಬಾತ ಸ್ನೇಹಿತರ ಜತೆ ಹೊರಹೋದವನು (Murder Case) ಬೀದಿ ಹೆಣವಾಗಿದ್ದ. ಮೊದಮೊದಲು ಇದು ಪ್ರೀತಿ ವಿಚಾರಕ್ಕೆ ಕೊಲೆ ಆಗಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಯುವಕನ ಸಾವಿನ ಸಿಕ್ರೇಟ್‌ (Secret revealed) ಅನ್ನು ಎಸ್‌.ಆರ್ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಕಳೆದ ಮೇ 9ರಂದು ರಾತ್ರಿ ಕಾಂಪ್ಲೆಕ್ಸ್‌ನ ಪಕ್ಕದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲೆ ಸತ್ಯ ತೆರಳಿದ್ದ. ಈ ವೇಳೆ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್‌ಗಳು ಸತ್ಯನನ್ನು ಕಳ್ಳ ಎಂದು ಭಾವಿಸಿ ಹಿಡಿಯಲು ಹೋಗಿದ್ದಾರೆ. ಈ ತಳ್ಳಾಟ ನೂಕಾಟದಲ್ಲಿ ಸತ್ಯ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದಿದ್ದ. ಆಗ ವಿದ್ಯುತ್ ತಂತಿ ಸ್ಪರ್ಶದಿಂದ ಮೃತ ಪಟ್ಟಿದ್ದ.

ಅನಂತರ ಸತ್ಯ ಸಾವಿನ ವಿಚಾರ ತಿಳಿದ ಸೆಕ್ಯೂರಿಟಿ ಗಾರ್ಡ್‌ ರಂಜಿತ್ ಪ್ರದಾನ್, ರಮೇಶ್ ರಾತ್ರೋರಾತ್ರಿ ಸತ್ಯನ ಮೃತದೇಹವನ್ನು ಪಕ್ಕದ ಕಟ್ಟಡಕ್ಕೆ ರವಾನಿಸಿದರು. ಮರುದಿನ ಮೇ 10ರಂದು ನೆಲಮಹಡಿಯಲ್ಲಿ ಶವ ಪತ್ತೆಯಾಗಿತ್ತು. ಆದರೆ ಪೊಲೀಸರ ತನಿಖೆ ವೇಳೆ ಸತ್ಯನ ಸಾವಿನ ಸಿಕ್ರೇಟ್ ಬಯಲಾಗಿದೆ. ಸದ್ಯ ಎಸ್‌ಆರ್ ನಗರ ಪೊಲೀಸರು ಐಪಿಸಿ 304ರ ಅಡಿ ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನೂ ಕೆಎಸ್ ಗಾರ್ಡನ್ ನಿವಾಸಿಯಾದ ಸತ್ಯ ಪ್ಲಂಬರ್ ಕೆಲಸ ಮಾಡಿಕೊಂಡಿದ್ದ. ಈ ಹಿಂದೆ ಪ್ರಕರಣವೊಂದರಲ್ಲಿ ಬಂಧಿತನಾಗಿ ಜೈಲು ಸೇರಿದ್ದ. ಅದೇ ವಿಚಾರವಾಗಿ ಸತ್ಯನ ಕೊಲೆಯಾಗಿದೆ ಎಂದು ಆರೋಪಿಸಿಸಲಾಗಿತ್ತು‌.ಆದರೆ ತನಿಖೆ ಕೈಗೊಂಡಾಗ ಅಸಲಿ ಸತ್ಯ ತಿಳಿದುಬಂದಿದೆ.

ಇದನ್ನೂ ಓದಿ: Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು. ಸಚಿವೆ ಮಾಡಿರುವ ಮನವಿಯ ವಿವರ ಇಲ್ಲಿದೆ.

VISTARANEWS.COM


on

Minister Lakshmi Hebbalkar has submitted various proposals to the Union Minister seeking grant for the strengthening of the department
Koo

ನವದೆಹಲಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ (Lakshmi Hebbalkar), ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಸೋಮವಾರ ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು.

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ. ಹಾಗಾಗಿ, ಜರೂರಾಗಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜನೆಗೊಂಡ ತಾಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಕೂಡಲೇ ಮಂಜೂರು ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಕೇಂದ್ರ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಹಲವು ಬೇಡಿಕೆಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲ ಮಾಹಿತಿಗಳನ್ನು ಅತ್ಯಂತ ತಾಳ್ಮೆಯಿಂದ ಪಡೆದುಕೊಂಡಿರುವ ಕೇಂದ್ರ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
-ಲಕ್ಷ್ಮೀ ಹೆಬ್ಬಾಳಕರ್, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

Continue Reading

ಕರ್ನಾಟಕ

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

KMF Milk Production: ಕೆಎಂಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಕೆಎಂಎಫ್‌ ಸಾಧನೆ ಬಗ್ಗೆ ಮುಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

KMF Milk Production
Koo

ಬೆಂಗಳೂರು: ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್‌ನಲ್ಲಿ ದಿನವೊಂದಕ್ಕೆ 90 ಲಕ್ಷ ಲೀಟರ್ ಇತ್ತು. ಸದ್ಯ ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದು ಕೆಎಂಎಫ್ (KMF Milk Production) ಇತಿಹಾಸದಲ್ಲಿಯೇ ಮೈಲುಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಕೆಎಂಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ

ಈ ಹಿಂದೆ ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೇರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅಲ್ಲಿಯವರೆಗೂ ಡೇರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು

ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೇರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2 ರೂಪಾಯಿ ಹೆಚ್ಚಿಸಲಾಗಿದೆ ಎಂದರು.

ವಿಪಕ್ಷದ ಅಪಪ್ರಚಾರ

ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.

2 ರೂ. ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆ ಎಂದರು.

ಇದನ್ನೂ ಓದಿ | Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರಇದನ್ನೂ ಓದಿ |

ಹಾಲಿನ ದರ ಹೆಚ್ಚಳವಾಗಿಲ್ಲ

ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿಗಳು .
ಗ್ರಾಹಕರಿಗೆ ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ಕರ್ನಾಟಕ ಮಾತ್ರ ಎಂದರು.

Continue Reading

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

R Ashok: ಲೂಟಿಯಾದ ದಲಿತರ ಹಣವನ್ನು ಸಿದ್ದರಾಮಯ್ಯ ಜೇಬಿನಿಂದ ಕೊಡ್ತಾರಾ? ಆರ್‌. ಅಶೋಕ್‌ ಪ್ರಶ್ನೆ

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Valmiki Development Corporation Scam Opposition party leader R Ashok has demanded that CM Siddaramaiah should resign
Koo

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok), ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಈ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರಬಂದಿದೆ. ಈಗ ಇದನ್ನು ಮುಚ್ಚಿಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಸಿಎಂ ಸಿದ್ದರಾಮಯ್ಯ ಈ ಹಗರಣ ಮಾಡಿಯೇ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳಲು ನೋಡಿದ್ದರು. ಹೈಕಮಾಂಡ್‌ಗೆ ಕಪ್ಪ ಸಲ್ಲಿಸದೇ ಇದ್ದಲ್ಲಿ ಸಿಎಂ ಸ್ಥಾನ ಕಳೆದುಕೊಂಡು ಅದನ್ನು ಡಿ.ಕೆ. ಶಿವಕುಮಾರ್‌ಗೆ ಬಿಟ್ಟುಕೊಡಬೇಕಾಗಿತ್ತು. ಅದನ್ನು ತಪ್ಪಿಸಲು ದಲಿತರ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಸಚಿವ ಬಿ.ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ತಮ್ಮ ತಲೆಯನ್ನು ಉಳಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.

ದಲಿತರ ಹಣ ಯಾರು ಕೊಡುತ್ತಾರೆ?

ದಲಿತರಿಗೆ ಸೇರಿದ ಒಟ್ಟು 187 ಕೋಟಿ ರೂಪಾಯಿಯನ್ನು ಬೇನಾಮಿ ಐಟಿ ಕಂಪನಿಗಳ ಖಾತೆಗೆ ವರ್ಗಾಯಿಸಲಾಗಿದೆ. ಈವರೆಗೆ ಆರೋಪಿಗಳಿಂದ 14 ಕೋಟಿ ರೂ, ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಉಳಿದ ಹಣವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ ಅಥವಾ ಕೆಪಿಸಿಸಿ ಬ್ಯಾಂಕ್‌ ಖಾತೆಯಿಂದ ಪಡೆಯಲಾಗುವುದೇ ಎಂಬ ಬಗ್ಗೆ ಮಾಹಿತಿ ಇಲ್ಲ. ನಷ್ಟವಾದ ಈ ಹಣ ದಲಿತರಿಗೆ ಸೇರಿದ್ದು, ಇದನ್ನು ವಾಪಸ್‌ ಪಡೆಯಲು ಏನು ಮಾಡುತ್ತಾರೆ ಎಂದು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕಿದೆ ಎಂದು ಆರ್‌.ಅಶೋಕ ಒತ್ತಾಯಿಸಿದ್ದಾರೆ.

ಬಾಕಿ ಹಣ ಎಲ್ಲಿ ಹೋಯಿತು? ಅಂದರೆ ಅದನ್ನು ಗುಳುಂ ಮಾಡಲಾಗಿದೆಯೇ? ನಿಗಮದ ಹಣ ಪಕ್ಕದ ತೆಲಂಗಾಣ ರಾಜ್ಯದ ಚಿನ್ನಾಭರಣ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ನೂರಾರು ಖಾತೆಗಳಿಗೆ ವರ್ಗಾವಣೆ ಆಗಿದೆ. ಅದು ಸಹ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆದಿದೆ. ಅಂತರರಾಜ್ಯ ವಹಿವಾಟು ಆಗಿರುವ ಇಷ್ಟೊಂದು ದೊಡ್ಡ ಬಹುಕೋಟಿ ಹಗರಣವನ್ನು ಸಿಬಿಐಗೆ ಕೊಡಲು ಹಿಂದೇಟು ಯಾಕೆ? ಈ ಹಗರಣಕ್ಕೂ ತೆಲಂಗಾಣ ಚುನಾವಣೆಗೂ ಇರುವ ನಂಟು ಹೊರಬರಬಹುದು ಎಂಬ ಭಯವೇ? ಎಂದು ಅವರು ಮುಖ್ಯಮಂತ್ರಿಯವರನ್ನು ಪ್ರಶ್ನೆ ಮಾಡಿದ್ದಾರೆ.

ವಿಶೇಷ ತನಿಖಾ ದಳ ಯಾರು ಯಾರನ್ನೋ ವಿಚಾರಣೆ ಮಾಡುತ್ತಿದೆ. ಆದರೆ ಈವರೆಗೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಿಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬಳಿ ಪೊಲೀಸರು ಯಾವುದೇ ಪ್ರಶ್ನೆಗಳನ್ನು ಕೇಳಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೆ ಇದು ನಡೆದಿಲ್ಲ ಎಂದಾದ ಮೇಲೆ ಸಿದ್ದರಾಮಯ್ಯ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

ಸಿಎಂ ನಿವಾಸಕ್ಕೆ ಮುತ್ತಿಗೆ

ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜುಲೈ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬುಧವಾರ ಬೆಳಗ್ಗೆ 9.30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆರ್‌.ಅಶೋಕ್‌ ತಿಳಿಸಿದ್ದಾರೆ.

Continue Reading
Advertisement
MLA Shivaram Hebbar spoke in Taluk level janaspandana programme yallapur
ಉತ್ತರ ಕನ್ನಡ2 mins ago

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Advocate G Devarajegowda
ಕರ್ನಾಟಕ3 mins ago

Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

Uttara Kannada News Meeting by DC Gangubai Manakar in Karwar
ಉತ್ತರ ಕನ್ನಡ4 mins ago

Uttara Kannada News: ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಚುರುಕುಗೊಳಿಸಲು ಡಿಸಿ ಸೂಚನೆ

Minister Lakshmi Hebbalkar has submitted various proposals to the Union Minister seeking grant for the strengthening of the department
ಕರ್ನಾಟಕ6 mins ago

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Hathras Stampede
ದೇಶ13 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Krishna River Tragedy
ಕರ್ನಾಟಕ29 mins ago

Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

Stampedes in India
ದೇಶ37 mins ago

Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Agniveer
ರಾಜಕೀಯ45 mins ago

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

Hathras Stampede
ಪ್ರಮುಖ ಸುದ್ದಿ48 mins ago

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

KMF Milk Production
ಕರ್ನಾಟಕ1 hour ago

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌