Site icon Vistara News

Murder | ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಶಿಕ್ಷಕಿಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Murder

ಬೆಂಗಳೂರು: ನಗರದ ವಿದ್ಯಾರಣ್ಯಪುರ ಅಂಬಾ ಭವಾನಿ ದೇವಸ್ಥಾನದ ಬಳಿ ಸೆಪ್ಟೆಂಬರ್‌ 8ರಂದು ಒಂಟಿ ಮಹಿಳೆಯೊಬ್ಬರ ಹತ್ಯೆ(Murder) ನಡೆದಿತ್ತು. ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ಹೊತ್ತೊಯ್ದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಸನ್ನ ಕುಮಾರಿ (೬೦) ಎಂಬವರೇ ಕೊಲೆಯಾದ ನಿವೃತ್ತ ಶಿಕ್ಷಕಿ. ನಾಗೇಂದ್ರ, ರಾಮರಾಜು ಬಂಧಿತ ಆರೋಪಿಗಳಾಗಿದ್ದಾರೆ. ಇದೀಗ ಆರೋಪಿಗಳು ಸಿಕ್ಕಿ ಬಿದ್ದಿದ್ದು ಮಹಿಳೆಯನ್ನು ಕೈಕಾಲು ಕಟ್ಟಿ ,ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. 1 ಲಕ್ಷ 90 ಸಾವಿರ ರೂ. ಮೌಲ್ಯದ 68 ಗ್ರಾಂ ಚಿನ್ನಾಭರಣಗಳನ್ನು ಮಹಿಳೆಯಿಂದ ಆರೋಪಿಗಳು ದೋಚಿದ್ದರು. ನಂತರ ಹತ್ಯೆ ನಡೆಸಿ ಆಂಧ್ರದ ಮುತ್ತೂಟ್ ಫೈನಾನ್ಸ್ ನಲ್ಲಿ ಅಡ ಇಟ್ಟು ಹಣವನ್ನು ಹಂಚಿಕೊಂಡಿದ್ದರು.

ಕೊಲೆಯಾದ ಶಿಕ್ಷಕಿ ಪ್ರಸನ್ನ ಕುಮಾರಿ

ಕೊಲೆಯಾದ ಪ್ರಸನ್ನ ಕುಮಾರಿ ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಇತ್ತೀಚೆಗೆ ನಿವೃತ್ತಿಯಾಗಿದ್ದರು. ಮೂಲತಃ ವಿಜಯವಾಡದವರಾದ ಇವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಇವರು ಒಂಟಿಯಾಗಿರುವುದನ್ನು ಗಮನಿಸಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ವಿದ್ಯಾರಣ್ಯಪುರ ಪೊಲೀಸರು ಸಿಸಿ ಟಿವಿ ಆಧರಿಸಿ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದರು.

ಇದನ್ನೂ ಓದಿ | murder | ಒಂಟಿಯಾಗಿ ವಾಸಿಸುತ್ತಿದ್ದ ನಿವೃತ್ತ ಶಿಕ್ಷಕಿಯ ಕೊಲೆ, ಚಿನ್ನಾಭರಣದೊಂದಿಗೆ ಪರಾರಿಯಾದ ದುಷ್ಕರ್ಮಿಗಳು

Exit mobile version