Site icon Vistara News

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Murder case in Bengaluru

ಬೆಂಗಳೂರು: ಬೆಂಗಳೂರಿನ (Bengaluru News) ಕೋರಮಂಗಲ ಪೊಲೀಸ್ ಠಾಣಾ (Kormangala police station) ವ್ಯಾಪ್ತಿಯಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಕೊಲೆಯಾಗಿದೆ. ಸೆಲ್ವಿನ್ ಪ್ರಾನ್ಸಿಸ್ ಎಂಬಾತ ಪತ್ನಿಯನ್ನು ನಡುರಸ್ತೆಯಲ್ಲೆ ಚಾಕುವಿನಿಂದ ಇರಿದು (Murder Case) ಕೊಂದಿದ್ದಾನೆ. ಗುರುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಸೆಲ್ವಿನ್ ಪ್ರಾನ್ಸಿಸ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು. ಹೀಗಾಗಿ ಪತಿಯಿಂದ 6 ತಿಂಗಳ ಹಿಂದೆ ದೂರಾಗಿದ್ದಳು. ವೆಂಕಟಾಪುರದ ತಾಯಿ ಮನೆಯಲ್ಲಿ ವಾಸವಿದ್ದಳು. ಇಂದು ಗುರುವಾರ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಪತ್ನಿ ಜತೆಗೆ ಸೆಲ್ವಿನ್‌ ಪ್ರಾನ್ಸಿಸ್‌ ಗಲಾಟೆ ಮಾಡಿಕೊಂಡಿದ್ದ. ಈ ಮೊದಲೇ ಪ್ರಿಪ್ಲಾನ್‌ ಮಾಡಿಕೊಂಡು ಪತ್ನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸೆಂಜ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೃತ್ಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:Crime News : 6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ; ಹಿಟ್‌ ಆ್ಯಂಡ್‌ ರನ್‌ ಮಾಡಿ ಚಾಲಕರಿಬ್ಬರು ಎಸ್ಕೇಪ್‌

ವಿವಾಹಿತೆ ಹಿಂದೆ ಬಿದ್ದ ಪಾಗಲ್‌ ಪ್ರೇಮಿ; ಮದುವೆ ನಿರಾಕರಿಸಿದ್ದಕ್ಕೆ ಮನೆಗೆ ಇಟ್ಟ ಬೆಂಕಿ

ಬೆಂಗಳೂರು: ವಿವಾಹಿತ ಮಹಿಳೆಯ (Assault Case) ಹಿಂದೆ ಬಿದ್ದ ಪಾಗಲ್‌ ಪ್ರೇಮಿಯೊಬ್ಬ, ಮದುವೆ ಆಗುವಂತೆ ಪೀಡಿಸುತ್ತಿದ್ದ. ಮದುವೆಗೆ ಮಹಿಳೆ ನಿರಾಕರಿಸಿದ್ದಕ್ಕೆ ಆಕೆ ಮನೆಗೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ಘಟನೆ ನಡೆದಿದೆ.

ಅರ್ಬಾಜ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಮಹಿಳೆಗೆ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಇತ್ತೀಚೆಗೆ ತನ್ನ ವಾರಸೆ ಬದಲಾಯಿಸಿಕೊಂಡಿದ್ದ. ಮಹಿಳೆಗೆ ಮದುವೆ ಆಗಿದ್ದರೂ, ತನ್ನನ್ನು ಮದುವೆ ಆಗು ಎಂದು ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಮನೆಯವರಿಗೆ ವಿಚಾರ ತಿಳಿಸಿದ್ದಳು. ಹೀಗಾಗಿ 2 ಕುಟುಂಬದ ಹಿರಿಯರು ಅರ್ಬಾಜ್‌ಗೆ ಬುದ್ಧಿವಾದ ಹೇಳಿದ್ದರು.

ಆದರೂ ಮಹಿಳೆಗೆ ಆಗಾಗ ಫೋನ್‌ ಮಾಡಿ ಗಲಾಟೆ ಮಾಡುತ್ತಿದ್ದ. ಹೀಗಿರುವಾಗ ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆ ಬಳಿ ಬಂದವನೇ ಬೆಂಕಿ ಇಟ್ಟಿದ್ದಾನೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಬೆಂಕಿ ಬಿದ್ದಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ಬೆಂಕಿಗಾಹುತಿ ಆಗಿವೆ.

ಸದ್ಯ ಈ ಬಗ್ಗೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅರ್ಬಾಜ್‌ನನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version