Site icon Vistara News

Murder Case: ಮುಂದಿನ ತಿಂಗಳು ಮದುವೆಯಾಗಲಿ‌ದ್ದ ಆಟೋ ಚಾಲಕನ ಬರ್ಬರ ಹತ್ಯೆ

arun murderd

ಬೆಂಗಳೂರು: ರಾಜಧಾನಿಯಲ್ಲಿ ಯುವಕನೊಬ್ಬನನ್ನು ಹತ್ತಕ್ಕೂ ಅಧಿಕ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ (Murder Case) ಮಾಡಿದ್ದಾರೆ. ಅರುಣ್ (24) ಕೊಲೆಯಾದ ಆಟೋ ಚಾಲಕ. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಅರುಣ್‌ನ ಮದುವೆ ಸಹ ಮುಂದಿನ ತಿಂಗಳು ಫಿಕ್ಸ್ ಆಗಿತ್ತು. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿರುವ ರೀತಿ ನೋಡಿದರೆ ಹಳೆಯ ದ್ವೇಷ ತೀರಿಸಿಕೊಳ್ಳಲು ನಡೆದ ಕೃತ್ಯದಂತೆ ಕಾಣಿಸುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಮಚ್ಚಿನಿಂದ ಕೊಚ್ಚಿ ಮಗನನ್ನೇ ಕೊಂದ ತಂದೆ

ಆನೇಕಲ್: ಮಚ್ಚಿನಿಂದ ಕೊಚ್ಚಿ ಮಗನನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್‌ ಸಮೀಪದ ನಾರಾಯಣಪುರದಲ್ಲಿ ನಡೆದಿದೆ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದಾಗ ಮಗನನ್ನು ತಂದೆಯೇ ಹತ್ಯೆ (Murder Case) ಮಾಡಿದ್ದಾರೆ.

ಸುರೇಶ್ (35) ಕೊಲೆಯಾದ ವ್ಯಕ್ತಿ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಮಂಗಳವಾರವೂ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನ ಹಿಡಿದು ಹೊಡೆಯುತ್ತಿದ್ದ ಹಿನ್ನೆಲೆಯಲ್ಲಿ ಗಲಾಟೆ ಬಿಡಿಸಲು ತಂದೆ ಮುಂದಾಗಿದ್ದಾರೆ. ಆದರೆ, ಗಲಾಟೆ ವಿಕೋಪಕ್ಕೆ ತಿರುಗಿದಾಗ ತಂದೆ ಮಚ್ಚಿನಿಂದ ಸುರೇಶ್‌ಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಆನೇಕಲ್ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು, ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Sukhdev Singh Gogamedi: ರಜಪೂತ್ ಕರ್ಣಿ ಸೇನಾ ಮುಖಂಡ ಸುಖ್​ದೇವ್​​ ಗೋಗಮೇಡಿ ಗುಂಡಿಟ್ಟು ಹತ್ಯೆ

Exit mobile version