Site icon Vistara News

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Murder case

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ‌ ನಡೆಸಿ ಯುವಕನೊಬ್ಬನ ಕೊಲೆ (Murder case) ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನೇಪಾಳಿ ಮೂಲದ ಬಾಲಾಜಿ ಮೃತ ದುರ್ದೈವಿ.

ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಾಲಾಜಿ ಸ್ನೇಹಿತರೊಂದಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಅಮಲಿನಲ್ಲಿ ಕ್ಯಾತೆ ತೆಗೆದು ಸ್ನೇಹಿತರೊಟ್ಟಿಗೆ ಜಗಳ ಶುರು ಮಾಡಿದ್ದ. ಜಗಳವು ವಿಕೋಪಕ್ಕೆ ತಿರುಗಿದ್ದು, ಬಾಲಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ.

ಕೋಣನಕುಂಟೆ ಸಮುದಾಯ ಭವನ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಹಾಗೂ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಕೋರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

ಹೊಸಕೋಟೆ: ಹಳೆ ವೈಷಮ್ಯದ (Old vengeance) ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು (Gram Panchayat Member) ಬರ್ಬರವಾಗಿ (Hacked to death) ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಹೊಸಕೋಟೆ (Hosakote News) ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಅಪಾಕ್ ಅಮೀರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ. ಕಳೆದ ರಾತ್ರಿ ಅಟ್ಯಾಕ್ ಮಾಡಿ ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಅಪಾಕ್‌ ಅಮೀರ್‌ ಖಾನ್‌ ಗ್ರಾಮ ಪಂಚಾಯತಿ ಮುಂದೆ ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಗ್ರಾಮದ ಮೆಹಬೂಬ್ ಎಂಬಾತ ನುಗ್ಗಿ ಬಂದು ಕೊಚ್ಚಿ ಕೊಂದು ಹಾಕಿದ್ದಾನೆ.

ಕೊಲೆ ನಂತರ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version