ಬೆಂಗಳೂರು: ಡ್ಯಾನ್ಸ್ ಮಾಡುವವಾಗ ಜಸ್ಟ್ ಟಚ್ ಆಗಿದ್ದಕ್ಕೆ ಯುವಕನೊಬ್ಬನ ಕೊಲೆ (Murder Case) ನಡೆದಿದೆ. ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯೋಗೇಶ್ (23) ಹತ್ಯೆಯಾದವನು.
ಯೋಗೇಶ್ ಬೈಕ್ ಸರ್ವೀಸ್ ಸೆಂಟರ್ನಲ್ಲಿ ವಾಷಿಂಗ್ ಕೆಲಸ ಮಾಡುತ್ತಿದ್ದ. ನಿನ್ನೆ ದೇವಸ್ಥಾನದ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗ ಟಚ್ ಆಗಿದ್ದಕ್ಕೆ ಸಣ್ಣದಾಗಿ ಗಲಾಟೆಯಾಗಿತ್ತು. ಅನಂತರ ಸ್ಥಳೀಯರ ಮಧ್ಯಸ್ಥಿಕೆಯಿಂದ ಗಲಾಟೆ ತಣ್ಣಾಗಾಗಿತ್ತು. ಆದರೆ ಕಾರ್ಯಕ್ರಮ ಮುಗಿದ ಮೇಲೆ ಯೋಗೇಶ್ನನ್ನು ನಾಲ್ವರು ಹಿಂಬಾಲಿಸಿಕೊಂಡು ಬಂದಿದ್ದರು.
ಈ ವೇಳೆ ನಾಲ್ವರು ಏಕಾಏಕಿ ದಾಳಿ ಮಾಡಿ ಚಾಕುವಿನಿಂದ ಯೋಗೀಶ್ಗೆ ಚುಚ್ಚಿದ್ದರು. ಆದರೂ ಯೋಗೇಶ್ ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮನೆಯೊಂದರ ಕಾಂಪೌಂಡ್ ಹಾರಿದ್ದ. ಆದರೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದ. ಮೊದಮೊದಲು ಕಾಂಪೌಂಡ್ನಲ್ಲಿಟ್ಟಿದ್ದ ಗ್ಲಾಸ್ ಚುರು ಚುಚ್ಚಿದ್ದರಿಂದಲೇ ಮೃತಪಟ್ಟಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದರು.
ಆದರೆ ಸ್ಥಳಕ್ಕಾಗಮಿಸಿ ಪೊಲೀಸರು ತನಿಖೆ ನಡೆಸಿದಾಗ ಇದು ಆಕಸ್ಮಿಕ ಸಾವು ಅಲ್ಲ, ಬದಲಿಗೆ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿಲ್ಲ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಯಾವುದೇ ಹಳೆ ದ್ವೇಷ ಕಂಡು ಬಂದಿಲ್ಲ. ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ: Elephant attack : ಪೆಟ್ರೋಲ್ ಬಂಕ್ಗೆ ಮರಿ ಕಾಡಾನೆ ಎಂಟ್ರಿ; ಕೆಫೆಯಲ್ಲಿ ಹೆಣ್ಣಾನೆಯ ಬಿಂದಾಸ್ ಓಡಾಟ
ಪತ್ನಿಗೆ ಚಾಕುವಿನಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ನೀಚ
ಚಿಕ್ಕಬಳ್ಳಾಪುರ: ಶಿವರಾತ್ರಿ ಜಾಗರಣೆ ವೇಳೆ ಹುಲ್ಲು ತರಲು ಪತ್ನಿಯನ್ನು ಕರೆದೊಯ್ದ ಪತಿಗೆ ಅದ್ಯಾವ ಭೂತ ಒಳಹೊಕ್ಕಿತ್ತೋ ಏನೋ ಪತ್ನಿಯನ್ನು ಬರ್ಬರವಾಗಿ ಹತ್ಯೆ (Murder Case) ಮಾಡಿದ್ದಾನೆ.
ನರಸಮ್ಮ (45) ಎಂಬಾಕೆ ಪತಿಯಿಂದಲೇ ಕೊಲೆಯಾದ ದುರ್ದೈವಿ. ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರಸಮ್ಮ ಪತಿ ಗಂಗುಲಪ್ಪ ಎಂಬಾತ ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದು ಹಾಕಿದ್ದಾನೆ.
ಕೊಲೆಯಾದ ಸ್ಥಿತಿಯಲ್ಲಿ ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾತಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದಿಲ್ಲ. ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ