ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್.ಹೆಗಡೆ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್ ಮ್ಯೂಸಿಕ್ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.
ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ