ಗಲಭೆ ನಡೆಸಿ ಅಧಿಕಾರಕ್ಕೇರಲು ಕಾಂಗ್ರೆಸ್‌ ಪ್ರಯತ್ನ: ನಳಿನ್‌ ಕುಮಾರ್‌ ಕಟೀಲ್‌ ಆರೋಪ - Vistara News

ಬೆಂಗಳೂರು

ಗಲಭೆ ನಡೆಸಿ ಅಧಿಕಾರಕ್ಕೇರಲು ಕಾಂಗ್ರೆಸ್‌ ಪ್ರಯತ್ನ: ನಳಿನ್‌ ಕುಮಾರ್‌ ಕಟೀಲ್‌ ಆರೋಪ

ಗಲಭೆ ಸೃಷ್ಟಿಸುವುದು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಾಕುವುದು ಮತ್ತು ಪೊಲೀಸರ ಸ್ಥೈರ್ಯ ಕುಸಿತಕ್ಕೆ ಕಾರಣರಾಗುವುದು ಭಯೋತ್ಪಾದನೆಗೆ ಸಮ ಎಂದು ಕಟೀಲ್‌ ಹೇಳಿದ್ದಾರೆ.

VISTARANEWS.COM


on

ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಸುದ್ದಿಗೋಷ್ಠಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದ ವಿವಿಧೆಡೆ ಗಲಭೆಗಳನ್ನು ಸೃಷ್ಟಿಸಿ ಅಧಿಕಾರಕ್ಕೇರಲು ಪ್ರತಿಪಕ್ಷ ಕಾಂಗ್ರೆಸ್‌ ಪ್ರಯತ್ನ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದ್ದಾರೆ.

ಸಂಘಟನಾತ್ಮಕ ಪ್ರವಾಸದ ಭಾಗವಾಗಿ ಬೆಂಗಳೂರು ದಕ್ಷಿಣ ಬಿಜೆಪಿ ಪದಾಧಿಕಾರಿಗಳೊಂದಿಗೆ ಜಯನಗರದ ಪ್ರೆಸಿಡೆನ್ಸಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಪ್ಲಸ್ ಶಾಸಕ ಸ್ಥಾನ ಪಡೆಯಲು ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಮೂರು ತಂಡಗಳಲ್ಲಿ ಪಕ್ಷದ ಸಂಘಟನೆಗಾಗಿ ಪ್ರವಾಸವೂ ನಡೆಯುತ್ತಿದೆ.
ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯದಿಂದ ಬೂತ್ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ- ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ, ಪೇಜ್ ಕಮಿಟಿ ಹೆಚ್ಚು ಸದೃಢಗೊಳಿಸಲಾಗುತ್ತಿದೆ ಎಂದು ವಿವರಿಸಿದರು. ಪ್ರತಿ ಪೇಜ್‍ಗೆ ಆರು ಜನರ ಸಮಿತಿ ರಚಿಸಲಾಗಿದೆ. ಮಂಡಲಕ್ಕೆ ತೆರಳಿ ಪೇಜ್ ಕಮಿಟಿ ಕಾರ್ಯದ ಪರಿಶೀಲನೆ ನಡೆದಿದೆ. ಬೂತ್ ಅಧ್ಯಕ್ಷರ ನಾಮಫಲಕ ಜೋಡಣೆ ದೇಶದಲ್ಲೇ ಮೊದಲ ಬಾರಿಗೆ ನಡೆದಿದ್ದು, 90% ಕಾರ್ಯ ಮುಕ್ತಾಯವಾಗಿದೆ.
ಸರಕಾರದ ಹತ್ತಾರು ಸಾಧನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಲಾಗಿದೆ. ಕಾಂಗ್ರೆಸ್ ವಿರುದ್ಧ ಇನ್ನೊಂದು ನಿರ್ಣಯ ಅಂಗೀಕರಿಸಲಾಗಿದೆ. ಹಾಸನ, ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ಕುರಿತು ಚರ್ಚಿಸಲಾಗಿದೆ. ಆದರೆ ಕಾಂಗ್ರೆಸ್ ಮಾತ್ರ ಇತರರ ಕಾಲೆಳೆಯುವ, ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಗಲಭೆ ಮೂಲಕ ಅಧಿಕಾರ ಪಡೆಯಲು ಯತ್ನಿಸುತ್ತಿದೆ. ಮತೀಯವಾದದ ಹೆಸರಿನಲ್ಲಿ ಬೆಂಕಿ ಹಾಕುವ ಕೆಲಸವನ್ನು ಮಾಡುತ್ತಿದೆ. ಅಧಿಕಾರ ಪಡೆಯಲು ಅರಾಜಕತೆ ಸೃಷ್ಟಿಸುವ ಪ್ರವೃತ್ತಿ ಕಾಂಗ್ರೆಸ್ ಪಕ್ಷದ್ದು. ಡಿಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣ, ಹರ್ಷ ಕೊಲೆ ಪ್ರಕರಣ, ಹುಬ್ಬಳ್ಳಿ ಹಿಂಸಾಚಾರದ ಘಟನೆ ಇದಕ್ಕೆ ಉದಾಹರಣೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಕಾಣದ ಕೈಗಳ ಹಿಡಿತದಲ್ಲಿ ಬಿಜೆಪಿ ಸರ್ಕಾರ: ಇನ್ನೂ ಒಂದು ವರ್ಷ ಇದೇ ಸ್ಥಿತಿ ಎಂದ HDK

ಗಲಭೆಯಲ್ಲಿ ಭಾಗಿಯಾದವರ ಆಸ್ತಿಗಳ ಮೇಲೆ ಬುಲ್ಡೋಜರ್‌ ಪ್ರಯೋಗದ ಕುರಿತು ಪ್ರತಿಕ್ರಿಯಿಸಿ, ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಗಲಭೆ ನಿಯಂತ್ರಣಕ್ಕೆ ಜಾತಿ ಮತ ಪಂಥ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ. ಇಂಥ ಗಲಭೆ ಸೃಷ್ಟಿಸುವುದು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಾಕುವುದು ಮತ್ತು ಪೊಲೀಸರ ಸ್ಥೈರ್ಯ ಕುಸಿತಕ್ಕೆ ಕಾರಣರಾಗುವುದು ಭಯೋತ್ಪಾದನೆಗೆ ಸಮ. ಅಂಥ ಗಲಭೆಕೋರರ ವಿರುದ್ಧ ಸರ್ಕಾರ ದಿಟ್ಟ ಮತ್ತು ದೃಢವಾದ ಕ್ರಮ ತೆಗೆದುಕೊಳ್ಳಬೇಕು. ಇದು ಪಕ್ಷದ ನಿಲುವು ಎಂದರು.

ಹೆಚ್ಚಿನ ಓದಿಗಾಗಿ: Explainer: ಬುಲ್‌ಡೋಜರ್‌ಗೆ ಮತ್ತಷ್ಟು ಸದ್ದು

ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ವಿ. ಸೋಮಣ್ಣ, ಆರ್. ಅಶೋಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗರುಡಾಚಾರ್, ಎಲ್. ರವಿಸುಬ್ರಹ್ಮಣ್ಯ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

VISTARANEWS.COM


on

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಜಂಟಿಯಾಗಿ ಮೇ 16ರಂದು ನಗರದಲ್ಲಿ “ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಿವೆ.
“ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮ್ಮಿಟ್ ನಡೆಯಲಿದೆ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ, ವಿಶೇಷವಾಗಿ ಬೆಂಗಳೂರು, ಇಂದು ಭಾರತದ ತಂತ್ರಜ್ಞಾನ ಮಹತ್ವಾಕಾಂಕ್ಷೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ದೇಶದ ಪ್ರಮುಖ ಜಿಡಿಪಿ ಕೊಡುಗೆ ನೀಡುವ ನಗರಗಳಲ್ಲಿ ಬೆಂಗಳೂರು ಒಂದಾಗಿದೆ, ವೆಂಚರ್ ಕ್ಯಾಪಿಟಲ್ ಹೂಡಿಕೆಗಳ ಪ್ರಮುಖ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ.

Continue Reading
Advertisement
Latest20 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest21 hours ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest21 hours ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest22 hours ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest23 hours ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ1 day ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest2 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest3 days ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest3 days ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest4 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌