ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಬಾಗಿಲ ಬಳಿ ಬಿಗಿದಪ್ಪಿ ನಿಂತಿದ್ದ ಯುವಕ- ಯುವತಿಯ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ದೆಹಲಿ ಮೆಟ್ರೋದಂತೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಪರಿವರ್ತನೆ ಆಗುತ್ತಿದೆ ಎಂದು ಅಸಮಾಧಾನ (Namma Metro) ತೋರಿದ್ದಾರೆ.
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್ (Sam459om) ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
ಕೆಲವರು ಪ್ರೀತಿ-ಪ್ರೇಮ, ಪ್ರಣಯವೆಲ್ಲ ಮನೆಯಲ್ಲಿದ್ದರೆ ಚೆನ್ನ ಎಂದಿದ್ದಾರೆ. ಹಾಗೇ, ಸಾರ್ವಜನಿಕ ಪ್ರದೇಶದಲ್ಲಿ ಹೀಗೆ ಮಾಡುವುದರಿಂದ ಉಳಿದವರಿಗೆ ಮುಜುಗರ ಆಗುತ್ತದೆ ಎಂದೂ ಹೇಳಿದ್ದಾರೆ. ಆದರೆ ಇನ್ನೂ ಕೆಲವರು. ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ