Namma Metro : ಮೆಟ್ರೋ ಪ್ರಯಾಣಿಕರಿಗೆ ‌Good News; ಈಗ 3 ನಿಮಿಷಕ್ಕೊಂದು ರೈಲು! - Vistara News

ಬೆಂಗಳೂರು

Namma Metro : ಮೆಟ್ರೋ ಪ್ರಯಾಣಿಕರಿಗೆ ‌Good News; ಈಗ 3 ನಿಮಿಷಕ್ಕೊಂದು ರೈಲು!

Namma Metro : ಬೆಂಗಳೂರಿನಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ಜನದಟ್ಟಣೆ ಇರುವ ಸಮಯದಲ್ಲಿ ಪ್ರತಿ ಮೂರು ನಿಮಿಷಕ್ಕೊಮ್ಮೆ ರೈಲು ಓಡಾಟ ಆರಂಭಗೊಂಡಿದೆ. ಈಗ ಪ್ರತಿ ಐದು ನಿಮಿಷಕ್ಕೊಂದು ರೈಲು ಓಡುತ್ತಿತ್ತು.

VISTARANEWS.COM


on

Namma Metro purple line
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಮೆಟ್ರೋ ಪ್ರಯಾಣಿಕರ (Namma Metro) ಕನಸು ನನಸಾಗಿದೆ. ಸಂಚಾರ ದಟ್ಟಣೆ (Heavy traffic) ಅವಧಿಯಲ್ಲಿ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆ ಈಡೇರಿದೆ. ಸೋಮವಾರದಿಂದ ನೇರಳೆ ಮಾರ್ಗದಲ್ಲಿ ಪೀಕ್‌ ಅವರ್‌ನಲ್ಲಿ (Peak Hour) ಪ್ರತಿ ಮೂರು ನಿಮಿಷಕ್ಕೊಂದು ರೈಲು ಓಡಾಟ (train in three minutes) ಆರಂಭವಾಗಿದೆ.

ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ ಕಾಡುಗೋಡಿವರೆಗೆ ಓಡುವ ನೇರಳೆ ಮಾರ್ಗದಲ್ಲಿ (Purple line) ಬೆಳಗ್ಗೆ ಮತ್ತು ಸಂಜೆ ಪ್ರಯಾಣಿಕರ ದಟ್ಟಣೆ ವಿಪರೀತವಾಗಿದೆ. ಮೆಟ್ರೋ ರೈಲಿಗಾಗಿ ತುಂಬ ಹೊತ್ತು ಕಾಯುವ ಪರಿಸ್ಥಿತಿ ಇದೆ. ರೈಲು ಹತ್ತಲು ದೊಡ್ಡ ಸಾಲುಗಳು ಕಂಡುಬರುತ್ತಿದ್ದು, ಒಂದೆರಡು ರೈಲು ಬಿಟ್ಟು ಮೂರನೇ ರೈಲು ಹಿಡಿಯಬೇಕಾದ ಸ್ಥಿತಿ ಇದೆ.‌ ಅದರಲ್ಲೂ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಂತೂ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಂಥ ವಾತಾವರಣ ಕಂಡುಬರುತ್ತಿದೆ. ಇಂಥ ‌ ಪರಿಸ್ಥಿತಿಯಿಂದ ಮುಕ್ತಿ ನೀಡಲು ನಮ್ಮ ಮೆಟ್ರೋ ಸೋಮವಾರದಿಂದ (ಫೆಬ್ರವರಿ 26) ಬೆಳಗ್ಗಿನ ಹೊತ್ತು ಪ್ರತಿ ಮೂರು ನಿಮಿಷಕ್ಕೊಂದು ರೈಲು ಓಡಾಟ ಆರಂಭ ಮಾಡಿದೆ. ಇನ್ನು ಸಂಜೆಯ ಹೊತ್ತು ಕೂಡಾ ಮೂರು ನಿಮಿಷಕ್ಕೊಂದು ರೈಲು ಓಡಾಡಲಿದೆ. ಇದುವರೆಗೆ ಬೆಳಗ್ಗೆ 8ರಿಂದ 11ರವರೆಗೆ ಐದು ನಿಮಿಷಕ್ಕೊಂದು ರೈಲು ಓಡುತ್ತಿತ್ತು.

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಪೀಕ್ ಹವರ್‌ನಲ್ಲಿ ಬೆಳಗ್ಗೆ ಮತ್ತು ಸಂಜೆ ಹೊತ್ತು ಹೆಚ್ಚುವರಿ ರೈಲು ಓಡಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶುಕ್ರವಾರವಷ್ಟೇ ತಿಳಿಸಿತ್ತು.

ಎರಡು ಹಾಲಿ ಮಾರ್ಗಗಳ ಪೈಕಿ ನೇರಳೆ (Namma Metro Purple Line) ಮಾರ್ಗದಲ್ಲಿ ಪೀಕ್‌ ಅವರ್‌ನಲ್ಲಿ ಪ್ರತಿ ಮೂರು ನಿಮಿಷಕ್ಕೆ ಒಂದರಂತೆ ರೈಲುಗಳು ಆವರ್ತನೆ ಆಗಲಿವೆ ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : Namma Metro : ಗುಡ್‌ ನ್ಯೂಸ್‌- ಫೆ.26 ರಿಂದ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಓಡಾಟ

ಯಾವ ಸಮಯದಲ್ಲಿ ಮೂರು ನಿಮಿಷಕ್ಕೊಂದು ರೈಲು?

ನೇರಳೆ ಮಾರ್ಗದ ಮೆಜೆಸ್ಟಿಕ್ ಮೆಟ್ರೋ ರೈಲು ನಿಲ್ದಾಣದಿಂದ ಗರುಡಾಚಾರ್‌ ಪಾಳ್ಯ ನಿಲ್ದಾಣದವರೆಗೆ ಬೆಳಗ್ಗೆ 8.45 ಗಂಟೆಯಿಂದ 10.20 (95 ನಿಮಿಷ) ಪ್ರತಿ ಮೂರು ನಿಮಿಷಕ್ಕೆ ಒಂದು ರೈಲುಗಳು ಕಾರ್ಯಾಚರಣೆ ಆರಂಭಗೊಂಡಿದೆ. ನೇರಳೆ ಮಾರ್ಗದ ನಿಲ್ದಾಣಗಳಾದ ಟ್ರಿನಿಟಿ, ಎಂಜಿ ರಸ್ತೆ, ಇಂದಿರಾ ನಗರ, ಬೆನ್ನಿಗಾನಹಳ್ಳಿ, ಕೃಷ್ಣರಾಜ ಪುರ (ಕೆಆರ್‌ ಪುರ) ಹಾಗೂ ಗರುಡಾಚಾರ್‌ ಪಾಳ್ಯ ನಿಲ್ದಾಣದ ಕಡೆಗೆ ಹೋಗುವ ಮೆಟ್ರೋ ಪ್ರಯಾಣಿಕರ ಅಗತ್ಯತೆ ನೋಡಿಕೊಂಡು ಹೆಚ್ಚುವರಿ ಮೆಟ್ರೋ ರೈಲು ಓಡಿಸಲು ನಿರ್ಧರಿಸಲಾಗಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

Namma Metro Train Timings

ಬೆಳಗ್ಗೆ ಐದರಿಂದಲೇ ಮೆಟ್ರೋ ಸಂಚಾರ ಆರಂಭ

ನಮ್ಮ ಮೆಟ್ರೋ ರೈಲುಗಳ ಸಂಚಾರ ಭಾನುವಾರ ಹೊರತುಪಡಿಸಿದ ಎಲ್ಲ ದಿನಗಳಲ್ಲಿ ಬೆಳಗ್ಗೆ ಐದು ಗಂಟೆಗೇ ಸಂಚಾರ ಆರಂಭವಾಗಲಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಸಂಚಾರ ಆರಂಭವಾಗಲಿದೆ. ಎಂದಿನಂತೆ ರಾತ್ರಿ 11 ಗಂಟೆಗೆ ಎಲ್ಲಾ ಕೊನೆಯ ನಿಲ್ದಾಣಗಳಿಂದ ರೈಲುಗಳ ಸಂಚಾರ ಆರಂಭವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Bank fraud: ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

VISTARANEWS.COM


on

Guru Raghavendra and Vasishta Co operative Bank fraud handed over to SIT says DK Shivakumar
Koo

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದಾರೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading

ಪ್ರಮುಖ ಸುದ್ದಿ

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Lok Sabha Election 2024: ಪಾರ್ವತಮ್ಮ ಅವರಿಂದ ಮತ ಹಾಕಿಸಿಕೊಳ್ಳಲು ಚುನಾವಣಾ ಅಧಿಕಾರಿಗಳು ಮತಪೆಟ್ಟಿಗೆ ಸಹಿತ ಅವರ ನಿವಾಸಕ್ಕೆ ಧಾವಿಸಿದ್ದರು. ಈ ವೇಳೆ ಅಧಿಕಾರಿಗಳು ಮತ ಚಲಾವಣೆ ಮಾಡಿಸಲು ತಯಾರಿ ನಡೆಸಿಕೊಳ್ಳುತ್ತಿದ್ದರು. ಆದರೆ, ಅಷ್ಟರಲ್ಲಿ ಪಾರ್ವತಮ್ಮ ಅವರು ವಯೋಸಹಜವಾಗಿ ನಿಧನರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬೇಕು ಎಂಬ ಅವರ ಕೊನೇ ಆಸೆ ಕೊನೆಗೂ ಈಡೇರಲೇ ಇಲ್ಲ.

VISTARANEWS.COM


on

Lok Sabha Election 2024 vote for better future and 98 year old woman dies when returning officer arrives at home to cast her vote
Koo

ಕೊಪ್ಪಳ: ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನಕ್ಕೆ (First phase of polling) ಕರ್ನಾಟಕವು ಸಜ್ಜಾಗಿದೆ. ಮತದಾರರು ಸಹ ತಮ್ಮ ನೆಚ್ಚಿನ ಅಭ್ಯರ್ಥಿ, ಪಕ್ಷವನ್ನು ಆಯ್ಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಇದೇ ರೀತಿ ಕೊಪ್ಪಳ ಜಿಲ್ಲೆಯಲ್ಲಿ ವೃದ್ಧೆಯೊಬ್ಬರು ಮತದಾನ ಮಾಡಲು ಕಾತರರಾಗಿದ್ದರು. ಈ ಸಂಬಂಧ ಮನೆಯಲ್ಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು. ವಿಪರ್ಯಾಸವೆಂದರೆ ಚುನಾವಣಾಧಿಕಾರಿಗಳು ಮತ ಹಾಕಿಸಿಕೊಳ್ಳಲು ಮನೆಗೆ ಬಂದಾಗಲೇ ಅವರು ಅಸುನೀಗಿದ್ದಾರೆ.

ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಪಾರ್ವತಮ್ಮ ಸಜ್ಜನ (98) ಮೃತ ವೃದ್ಧೆಯಾಗಿದ್ದಾರೆ. ಇವರು ಪ್ರತಿ ಚುನಾವಣೆಗೂ ತಪ್ಪದೇ ಮತ ಚಲಾವಣೆ ಮಾಡುತ್ತಿದ್ದರು. ಈ ಬಾರಿಯೂ ಮತ ಚಲಾಯಿಸಬೇಕು ಎಂದು ಉತ್ಸಾಹವನ್ನು ತೋರಿದ್ದರು. ಇದಕ್ಕಾಗಿಯೇ ಅವರು ಮನೆಯಲ್ಲಿ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು.

Lok Sabha Election 2024 98 year old woman dies when returning officer arrives at home to cast her vote

ಪಾರ್ವತಮ್ಮ ಅವರಿಂದ ಮತ ಹಾಕಿಸಿಕೊಳ್ಳಲು ಚುನಾವಣಾ ಅಧಿಕಾರಿಗಳು ಮತಪೆಟ್ಟಿಗೆ ಸಹಿತ ಅವರ ನಿವಾಸಕ್ಕೆ ಧಾವಿಸಿದ್ದರು. ಈ ವೇಳೆ ಅಧಿಕಾರಿಗಳು ಮತ ಚಲಾವಣೆ ಮಾಡಿಸಲು ತಯಾರಿ ನಡೆಸಿಕೊಳ್ಳುತ್ತಿದ್ದರು. ಆದರೆ, ಅಷ್ಟರಲ್ಲಿ ಪಾರ್ವತಮ್ಮ ಅವರು ವಯೋಸಹಜವಾಗಿ ನಿಧನರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾವಣೆ ಮಾಡಬೇಕು ಎಂಬ ಅವರ ಕೊನೇ ಆಸೆ ಕೊನೆಗೂ ಈಡೇರಲೇ ಇಲ್ಲ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading

ಚಿನ್ನದ ದರ

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Gold Rate Today: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹35 ಹಾಗೂ ₹38 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಕಳೆದ ವಾರದಿಂದ ತುಸು ಇಳಿಕೆ ಕಾಣುತ್ತಿದೆ.

VISTARANEWS.COM


on

gold rate today 34
Koo

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಗುರುವಾರ ತುಸು ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹35 ಹಾಗೂ ₹38 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಕಳೆದ ವಾರದಿಂದ ತುಸು ಇಳಿಕೆ ಕಾಣುತ್ತಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,625ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,250 ಮತ್ತು ₹6,62,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,227 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,816 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,270 ಮತ್ತು ₹7,22,700 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,40072,420
ಮುಂಬಯಿ66,250 72,270
ಬೆಂಗಳೂರು66,250 72,270
ಚೆನ್ನೈ67,10073,200

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ದೇಶ

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

Samsung: ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ್ಯ ಹೆಚ್ಚಿಸಲು ವಿನ್ಯಾಸ ಮಾಡಲಾದ ರಾಷ್ಟ್ರೀಯ ಕೌಶಲ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್ ನ ಎರಡನೇ ಆವೃತ್ತಿಯನ್ನು ಸ್ಯಾಮ್‌ಸಂಗ್ ಇಂಡಿಯಾ ಪ್ರಾರಂಭಿಸಿದೆ.

VISTARANEWS.COM


on

Samsung India launched the 2nd edition of Samsung Innovation Campus
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್ (Samsung) ಎಐ, ಐಒಟಿ, ಬಿಗ್ ಡೇಟಾ, ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಮುಂತಾದ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ ಹೆಚ್ಚಿಸಲು ವಿನ್ಯಾಸ ಮಾಡಲಾದ ತನ್ನ ರಾಷ್ಟ್ರೀಯ ಕೌಶಲ್ಯ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಕಾರ್ಯಕ್ರಮವು 18-25 ವರ್ಷ ವಯಸ್ಸಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ ಒದಗಿಸುವ ಮತ್ತು ಆ ಮೂಲಕ ಅವರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಯುವಜನತೆಗೆ ಸರಿಯಾದ ಅವಕಾಶಗಳನ್ನು ಸೃಷ್ಟಿ ಮಾಡಲು ರೂಪಿಸಲಾಗಿರುವ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳನ್ನು ಬೆಂಬಲಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಭಾರತದಾದ್ಯಂತ ಇರುವ 3,500 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ತಿಳುವಳಿಕೆ ಒಪ್ಪಂದಕ್ಕೆ ಈ ವಾರದ ಆರಂಭದಲ್ಲಿ ಸ್ಯಾಮ್‌ಸಂಗ್ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇಎಸ್‌ಎಸ್‌ಸಿಐ) ನಡುವೆ ಸಹಿ ಮಾಡಲಾಗಿದೆ.

ಈ ವರ್ಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ಒದಗಿಸುವುದರ ಜತೆಗೆ ಇನ್ನೂ ಹೆಚ್ಚಿನ ಆಸಕ್ತಿಕರ ಅಂಶಗಳು ಸೇರ್ಪಡೆಗೊಂಡಿವೆ. ಪ್ರತಿ ಕ್ಷೇತ್ರದಲ್ಲಿ ರಾಷ್ಟ್ರೀಯ ಟಾಪರ್‌ ಸ್ಥಾನ ಪಡೆಯುವವರು ದೆಹಲಿ/ಎನ್‌ಸಿಆರ್‌ನಲ್ಲಿರುವ ಸ್ಯಾಮ್‌ಸಂಗ್ ಘಟಕಗಳಿಗೆ ಭೇಟಿ ನೀಡುವ ಅವಕಾಶ ಪಡೆಯುತ್ತಾರೆ. ಜತೆಗೆ ರೂ. 1 ಲಕ್ಷದ ನಗದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಘಟಕಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ಸ್ಯಾಮ್‌ಸಂಗ್‌ನ ನಾಯಕತ್ವದ ತಂಡಗಳೊಂದಿಗೆ ಸಂವಹನ ನಡೆಸುವ ಮತ್ತು ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಹೊಂದಲಿದ್ದಾರೆ. ರಾಷ್ಟ್ರ ಮಟ್ಟದ ಕೋರ್ಸ್ ಟಾಪರ್‌ಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ವಾಚ್‌ಗಳಂತಹ ಅತ್ಯಾಕರ್ಷಕ ಸ್ಯಾಮ್‌ಸಂಗ್ ಉತ್ಪನ್ನಗಳನ್ನು ಸಹ ಪಡೆಯಲಿದ್ದಾರೆ.

ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಓ ಜೆಬಿ ಪಾರ್ಕ್, ಸ್ಯಾಮ್‌ಸಂಗ್ ಭಾರತದಲ್ಲಿ ಕಳೆದ 28 ವರ್ಷಗಳಿಂದ ತನ್ನ ಅಸ್ತಿತ್ವ ಹೊಂದಿದ್ದು, ಈ ಎಲ್ಲಾ ವರ್ಷಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಿದೆ. ನಮ್ಮ ದೃಷ್ಟಿಕೋನವು ಯುವಜನರಿಗೆ ಕೌಶಲ್ಯ ಒದಗಿಸುವ ಮತ್ತು ಅವರಿಗೆ ವೃತ್ತಿಪರ ಬೆಳವಣಿಗೆಯ ಅವಕಾಶಗಳನ್ನು ಒದಗಿಸಿ ಅವರನ್ನು ಸಬಲೀಕರಣಗೊಳಿಸುವ ಭಾರತ ಸರ್ಕಾರದ ಉದ್ದೇಶಗಳೊಂದಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಮೂಲಕ, ನಾವು ಯುವಜನತೆಯ ಕೌಶಲ್ಯವನ್ನು ವೃದ್ಧಿಸುವ ಕೌಶಲ್ಯ ಆಧಾರಿತ ಕಲಿಕೆಯ ವೇದಿಕೆಯನ್ನು ನಿರ್ಮಿಸುತ್ತಿದ್ದೇವೆ. ಅದರಿಂದ ಯುವಕರು ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ ಮತ್ತು ಅರ್ಥಪೂರ್ಣ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ಇಎಸ್‌ಎಸ್‌ಸಿಐ ಸಂಸ್ಥೆಯು ಕೌಶಲಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಉದ್ಯಮ ಸಂಘಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ಕೌಶಲ ಒದಗಿಸುವ ಸಂಸ್ಥೆಯಾಗಿದೆ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ಅಡಿಯಲ್ಲಿ ಸೆಕ್ಟರ್ ಸ್ಕಿಲ್ ಕೌನ್ಸಿಲ್ (ವಲಯ ಕೌಶಲ್ಯ ಮಂಡಳಿ) ಆಗಿ ಕಾರ್ಯನಿರ್ವಹಿಸುತ್ತದೆ. ಇದು ತನ್ನ ರಾಷ್ಟ್ರವ್ಯಾಪಿ ಇರುವ ಅನುಮೋದಿತ ತರಬೇತಿ ಮತ್ತು ಶಿಕ್ಷಣ ಪಾಲುದಾರರ ನೆಟ್‌ವರ್ಕ್ ಮೂಲಕ ಸ್ಥಳೀಯ ಮಟ್ಟದಲ್ಲಿ ತರಬೇತಿಯನ್ನು ನೀಡುತ್ತದೆ. ಇಎಸ್‌ಎಸ್‌ಸಿಐ ಸಂಸ್ಥೆಯು ಭಾರತದ ಸಣ್ಣ ಪಟ್ಟಣಗಳಲ್ಲಿ ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆ ಇಲ್ಲವೋ ಅಲ್ಲೆಲ್ಲಾ ಯುವಜನತೆಗೆ ಕೋರ್ಸ್‌ಗಳನ್ನು ಒದಗಿಸುವ ಅವಕಾಶಗಳನ್ನು ಕೂಡ ಎದುರು ನೋಡುತ್ತದೆ.

ಈ ಕುರಿತು ಇಎಸ್‌ಎಸ್‌ಸಿಐ ಚೀಫ್ ಆಫರೇಟಿಂಗ್ ಆಫೀಸರ್ (Officiating CEO) ಡಾ. ಅಭಿಲಾಷಾ ಗೌರ್ ಮಾತನಾಡಿ, ದೇಶದಲ್ಲಿ ಕೌಶಲ ಒದಗಿಸುವ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸಿಎಸ್‌ಆರ್‌ ಉಪಕ್ರಮಕ್ಕಾಗಿ ಸ್ಯಾಮ್‌ಸಂಗ್ ಜತೆಗೆ ಪಾಲುದಾರಿಕೆ ಹೊಂದಲು ಇಎಸ್‌ಎಸ್‌ಸಿಐ ಸಂತೋಷ ಪಡುತ್ತದೆ. ನಮ್ಮ ಉದ್ದೇಶಕ್ಕೆ ಅನುಗುಣವಾಗಿ ರಾಷ್ಟ್ರದ ಯುವಜನರಿಗೆ ಅದರಲ್ಲೂ ವಿಶೇಷವಾಗಿ ಕಡಿಮೆ ಸವಲತ್ತು ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಕೌಶಲ ಮತ್ತು ಅಗತ್ಯ ಜ್ಞಾನವನ್ನು ಒದಗಿಸಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಒದಗಿಸುತ್ತದೆ ಮತ್ತು ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಾಖಲಾದ ಯುವಜನತೆ ತರಗತಿ ಮೂಲಕ ಮತ್ತು ಆನ್‌ಲೈನ್ ತರಬೇತಿ ಪಡೆಯುತ್ತಾರೆ ಹಾಗೂ ಎಐ, ಐಒಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ಆಂಡ್ ಪ್ರೋಗ್ರಾಮಿಂಗ್‌ನಲ್ಲಿ ತಮ್ಮ ಆಯ್ದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸುತ್ತಾರೆ.

ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಸಾಫ್ಟ್ ಸ್ಕಿಲ್ಸ್ ತರಬೇತಿಯನ್ನೂ ನೀಡಲಾಗುವುದು. ಭಾಗವಹಿಸುವವರು ಭಾರತದಾದ್ಯಂತ ಇರುವ ಇಎಸ್‌ಎಸ್‌ಸಿಐಯ ತರಬೇತಿದಾರರು ಮತ್ತು ಶಿಕ್ಷಣ ಪಾಲುದಾರರ ಮೂಲಕ ಸಿದ್ಧಗೊಳಿಸಲಾಗುತ್ತದೆ. ಈ ಕಾರ್ಯಕ್ರಮವು ಆಫ್‌ಲೈನ್ ಮತ್ತು ಆನ್‌ಲೈನ್ ಕಲಿಕೆ, ಹ್ಯಾಕಥಾನ್‌ಗಳು ಮತ್ತು ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್‌ಗಳು ಮತ್ತು ಸ್ಯಾಮ್‌ಸಂಗ್ ಉದ್ಯೋಗಿಗಳು ಒದಗಿಸುವ ಪರಿಣಿತ ಮಾರ್ಗದರ್ಶನವನ್ನು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮವು ನಾಲ್ಕು ರಾಜ್ಯಗಳಲ್ಲಿ ಎಂಟು ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುತ್ತದೆ. ದೇಶದ ಉತ್ತರ ಭಾಗದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿರುವ ಎರಡು ಕೇಂದ್ರಗಳ ಜತೆಗೆ ಲಕ್ನೋ ಮತ್ತು ಗೋರಖ್‌ಪುರದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಭಾರತದಲ್ಲಿ, ತಮಿಳುನಾಡಿನ ಚೆನ್ನೈ ಮತ್ತು ಶ್ರೀಪೆರಂಬದೂರಿನಲ್ಲಿ 2 ಕೇಂದ್ರಗಳು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

ಕಾರ್ಯಕ್ರಮವು ಏಪ್ರಿಲ್ 2024 ರಲ್ಲಿ ಪ್ರಾರಂಭವಾಗಲಿದೆ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆರು ತಿಂಗಳ ಕೋರ್ಸ್ ಅಕ್ಟೋಬರ್ 2024ರಲ್ಲಿ ಕೊನೆಗೊಳ್ಳುತ್ತದೆ. ನವೆಂಬರ್ 2024ರಲ್ಲಿ ಕೋರ್ಸ್ ಟಾಪರ್‌ಗಳ ಹೆಸರನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Continue Reading
Advertisement
arunachal pradesh landslide
ವೈರಲ್ ನ್ಯೂಸ್10 mins ago

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Neha Murder case CID Officer
ಹುಬ್ಬಳ್ಳಿ18 mins ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Virender Sehwag
ಕ್ರೀಡೆ27 mins ago

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Guru Raghavendra and Vasishta Co operative Bank fraud handed over to SIT says DK Shivakumar
ಬೆಂಗಳೂರು29 mins ago

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Shakhahaari Movie In OTT amzon Prime
ಸ್ಯಾಂಡಲ್ ವುಡ್34 mins ago

Shakhahaari Movie: ಒಟಿಟಿಗೆ ಎಂಟ್ರಿ ಕೊಡ್ತಿದೆ ʻಶಾಖಾಹಾರಿʼ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Xiaomi EV
ಆಟೋಮೊಬೈಲ್36 mins ago

Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

Nilkrishna Gajare JEE main 2024 result AIR 1
ಅಂಕಣ44 mins ago

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

Aircraft Crash
ದೇಶ50 mins ago

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ1 hour ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Horlicks Label
ದೇಶ1 hour ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ18 mins ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌