Site icon Vistara News

Namma Metro: ಇಂದೂ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಇಲ್ಲ, ಪ್ರಯಾಣಿಕರೇ ಗಮನಿಸಿ

Namma Metro green Line

ಬೆಂಗಳೂರು: ಇಂದು ಕೂಡಾ ರಾಜಧಾನಿಯಲ್ಲಿ ಮೆಟ್ರೋ ಸಂಚಾರದಲ್ಲಿ (Namma metro) ವ್ಯತ್ಯಯವಾಗುತ್ತಿದೆ. ಪೀಣ್ಯ ಇಂಡಸ್ಟ್ರಿಯಿಂದ (Peenya industry) ನಾಗಸಂದ್ರ (Nagasandra) ನಿಲ್ದಾಣದವರೆಗಿನ ಹಸಿರು ಮಾರ್ಗದಲ್ಲಿ (Green line) ಮೆಟ್ರೋ ರೈಲು ಸಂಚಾರವನ್ನು ಇಂದು ಸ್ಥಗಿತಗೊಳಿಸಲಾಗಿದೆ.

ನಾಗಸಂದ್ರ ಮತ್ತು ಮಾದಾವರ ನಡುವಿನ ಸಿಗ್ನಲಿಂಗ್ ಟೆಸ್ಟಿಂಗ್ ನಡೆಯುತ್ತಿರುವ ಹಿನ್ನಲೆಯಲ್ಲಿ ಮೆಟ್ರೋ ಸಂಚಾರವನ್ನು ಬಿಎಂಆರ್‌ಸಿಎಲ್ ಸ್ಥಗಿತಗೊಳಿಸಿದೆ. ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಇಂದು ಸ್ಥಗಿತಗೊಂಡಿದೆ. ಪೀಣ್ಯ ಇಂಡಸ್ಟ್ರಿಯಿಂದ ಮೆಜೆಸ್ಟಿಕ್‌ನತ್ತ ಸಾಗುವ ಮೆಟ್ರೋ ಸಂಚಾರ ಯಥಾಸ್ಥಿತಿಯಲ್ಲಿದೆ.

ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೀಣ್ಯ ಹಾಗೂ ನಾಗಸಂದ್ರದ ನಡುವೆ ಆಗಸ್ಟ್ 20, 23, 30ರಂದು ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಒಂದು ವಾರದ ಹಿಂದೆಯೇ ಬಿಎಂಆರ್‌ಸಿಎಲ್‌ ಸೂಚನೆ ನೀಡಿತ್ತು. ಆದರೂ ಮೊನ್ನೆ ಹಲವಾರು ಪ್ರಯಾಣಿಕರು ತಮಗೆ ನಿಲ್ದಾಣಗಳಿಗೆ ಆಗಮಿಸಿ ನಂತರ ತಮಗೆ ಇದು ಗೊತ್ತೇ ಇರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಸೆಪ್ಟೆಂಬರ್‌ 11ರವರೆಗೆ ರೈಲು ಓಡಾಟ ಬಂದ್‌

ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಆಗಸ್ಟ್‌ 20, 23, 30 ರಂದು ಹಾಗೂ ಸೆಪ್ಟೆಂಬರ್ 6 ಮತ್ತು 11ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇನ್ನೂ ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ. ಇನ್ನೂ 25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5ರ ಬದಲಾಗಿ 06.00 ಕ್ಕೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ ಆಗಸ್ಟ್‌ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಕ್ಕೆ ಪ್ರಾರಂಭವಾಗಲಿದೆ. 25 ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 05.00 ಕ್ಕೆ ಪ್ರಾರಂಭವಾಗಲಿದೆ. ಇನ್ನೂ ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ನಾಗಸಂದ್ರ-ಮಾದಾವರ ನಡುವಿನ ಮೂರು ಕಿ.ಮೀ. ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನದಲ್ಲಿ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಗುತ್ತಲೇ ಸಾಗಿತು. ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ನಮ್ಮ ಮೆಟ್ರೋ (Namma Metro)ದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ (Assistant Security Officer) ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (Bangalore Metro Rail Corporation Limited) ಅರ್ಜಿ ಆಹ್ವಾನಿಸಿದೆ (BMRCL Recruitment 2024). ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 9 (Job Alert).

ಹುದ್ದೆಗಳ ವಿವರ ಮತ್ತು ಅರ್ಹತೆ

ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್ / ಸುಬೇದಾರ್ / ಮಾಸ್ಟರ್ ಚೀಫ್ ಪೆಟ್ಟಿ, ಆಫೀಸರ್ / ಮಾಸ್ಟರ್ ವಾರಂಟ್ ಆಫೀಸರ್ / ವಾರಂಟ್ ಆಫೀಸರ್ ಅಥವಾ ತತ್ಸಮಾನ, ರಕ್ಷಣಾ ಸೇವೆಯಲ್ಲಿ ಇದ್ದವರು, ಇನ್ಸ್‌ಪೆಕ್ಟರ್‌ / ಸಬ್ ಇನ್ಸ್‌ಪೆಕ್ಟರ್‌ / ಎಎಸ್ಐ ಅಥವಾ ತತ್ಸಮಾನ ಶ್ರೇಣಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Namma Metro : ಮೆಟ್ರೋ ಹಳಿ ಮೇಲೆ ಬಿದ್ದ ವ್ಯಕ್ತಿ; ಹಸಿರು ಮಾರ್ಗದ ರೈಲು ಸಂಚಾರ ಸ್ಥಗಿತ

Exit mobile version