ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅವಘಡಗಳು (Namma Metro) ಮುಂದುವರಿದಿದೆ. ಆ.19ರ ಮಧ್ಯಾಹ್ನ 1:30ರ ಸುಮಾರಿಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿ ಮೇಲೆ ಬಿದ್ದಿದ್ದಾನೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆದಿದೆ. ವ್ಯಕ್ತಿ ಮೆಟ್ರೋ ಹಳಿ ಮೇಲೆ ಬಿದ್ದ ಪರಿಣಾಮ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಂಡಿತ್ತು.
ವ್ಯಕ್ತಿ ಹಸಿರು ಮಾರ್ಗದ ಮೆಟ್ರೋ ಹಳಿಯ ಮೇಲೆ ಬಿದ್ದ ಕೂಡಲೆ ಸೆಕ್ಯೂರಿಟಿ ತಕ್ಷಣ ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದಾರೆ. ಹಳಿ ಮೇಲೆ ಬಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆಕಸ್ಮಿಕವಾಗಿ ಬಿದ್ದಿದ್ದ ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ತಿಳಿದು ಬಂದಿಲ್ಲ.
ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್; ಬೈಕ್ ಸವಾರ ಬದುಕಿದ್ದೆ ಪವಾಡ
ದೇವನಹಳ್ಳಿಯಲ್ಲಿ ಬೈಕ್‌ಗೆ ಪೊಲೀಸ್ ಜೀಪ್ ಡಿಕ್ಕಿ
ಹೆದ್ದಾರಿಯಲ್ಲಿ ಬೈಕ್‌ಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಸವಾರನಿಗೆ ಕಾಲು ಮುರಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದಗುರ್ಕಿ ಗ್ರಾಮದ ಬಳಿ ಘಟನೆ ನಡೆದಿದೆ. ಬೈಕ್ ಯೂ ಟರ್ನ್ ಪಡೆಯುವ ವೇಳೆ ಬೈಕ್‌ಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದಿದೆ.
ಬಿಹಾರ ಮೂಲದ ಅಂಜಲಿ ( 17 ) ಮತ್ತು ಸನ್ನಿದೇವಲ್ ( 22 ) ಎಂಬುವವರು ಗಾಯಗೊಂಡಿದ್ದಾರೆ. ಅಪಘಾತ ಕಂಡು ಪೊಲೀಸ್ ಜೀಪ್ ಸಿಬ್ಬಂದಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಗಾಯಾಳುಗಳಿಗೆ ಬೆಂಗಳೂರಿನ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭೀಮಾ ನದಿಯಲ್ಲಿ ಕೊಚ್ಚಿ ಹೋದ ಯುವಕ
ಭೀಮಾ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ ಯುವಕನೊರ್ವ ನೀರುಪಾಲಾಗಿದ್ದಾನೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುದ ಬಳಿಯ ಸಂಗಮದಲ್ಲಿ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಎಂ.ಶ್ರವಣಕುಮಾರ್(30) ನೀರು ಪಾಲಾದವನು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಗಾಣಗಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಶ್ರವಣಗಾಗಿ ಹುಡುಕಾಟ ನಡೆಸಿದ್ದಾರೆ.
ಹಾವೇರಿಯಲ್ಲಿ ಕಾಲುವೆಗೆ ಬಿದ್ದ ಬಸ್
ಸಾರಿಗೆ ಬಸ್‌ವೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. 13 ಜನರಿಗೆ ಗಾಯವಾಗಿದ್ದು, ರಾಣೇಬೆನ್ನೂರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಹಾರಗೊಪ್ಪ ಬಳಿ ಅಪಘಾತ ನಡೆದಿದೆ. ಶಿಕಾರಿಪುರದಿಂದ ರಾಣೇಬೆನ್ನೂರಿಗೆ ಬರುತ್ತಿದ್ದ ಬಸ್‌ನ ಎಕ್ಸೇಲ್ ಕಟ್ ಆಗಿದೆ. ಈ ವೇಳೆ ಏಕಾಏಕಿ ಯುಟಿಪಿ ನೀರಾವರಿ ಕಾಲುವೆಗೆ ಬಿದ್ದಿದೆ. ಹಲಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ