ಬೆಂಗಳೂರು: ಬೆಂಗಳೂರಿಗರ ನೆಚ್ಚಿನ ಟ್ರಾನ್‌ಪೋರ್ಟ್ ಸಿಸ್ಟಂನಲ್ಲಿ ನಮ್ಮ ಮೆಟ್ರೋ (Namma Metro) ಮೊದಲ ಸ್ಥಾನವನ್ನು ಗಳಿಸಿದೆ. ಆದರೆ ತಿಂಗಳಲ್ಲಿ ನಾಲ್ಕೈದು ಬಾರಿ ತಾಂತ್ರಿಕ ಸಮಸ್ಯೆಯಿಂದಾಗಿ ನಮ್ಮ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗುತ್ತಿದೆ.
ಜೂ.13ರಂದು ಬೆಳಗ್ಗೆ ಹಲವೆಡೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಎಂ.ಜಿ ರಸ್ತೆ ಸೇರಿದಂತೆ ಹಲವೆಡೆ ರೈಲು ಬರುವುದು ತಡವಾಗಿದೆ. ಎಂಜಿ ರಸ್ತೆ, ಟ್ರಿನಿಟಿ, ಹಲಸೂರು ಸೇರಿದಂತೆ ಹಲವೆಡೆ ಪ್ರಯಾಣಿಕರು ನಿಲ್ದಾಣಗಳಲ್ಲಿ ಕಾದು ನಿಂತಿದ್ದಾರೆ. ಸುಮಾರು 15 ನಿಮಿಷಕ್ಕೂ ಹೆಚ್ಚು ಸಮಯದಿಂದ ರೈಲು ಬಾರದೇ ಪ್ರಯಾಣಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ.
ಹೀಗಾಗಿ ಎಕ್ಸ್ ಮೂಲಕ ಬಿಎಂಆರ್‌ಸಿಎಲ್‌ಗೆ ಟ್ಯಾಗ್ ಮಾಡಿ ಮೆಟ್ರೋ ರೈಲು ವಿಳಂಬಕ್ಕೆ ಕಾರಣವೇನು? ಎಂದು ಪ್ರಶ್ನಿಸುತ್ತಿದ್ದಾರೆ. ಸದ್ಯ ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Murder Case : ಬೆಂಗಳೂರಿನಲ್ಲಿ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ರಕ್ತಕಾರಿದ ರೌಡಿಶೀಟರ್
ಮೆಟ್ರೋ ಸೇವೆಯಲ್ಲಿ ವ್ಯತ್ಯಯ ವಿಚಾರ ಕುರಿತು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ. ಗುರುವಾರ ಬೆಳಗ್ಗೆ 9.58 ಕ್ಕೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಮೆಜೆಸ್ಟಿಕ್‌ನಲ್ಲಿ ದೋಷಯುಕ್ತ ರೈಲನ್ನು ಪಾಕೆಟ್ ಟ್ರ್ಯಾಕ್ಗೆ ಸ್ಥಳಾಂತರಿಸಲಾಗಿದೆ. ರೈಲು ಸೇವೆಗಳನ್ನು ಪುನಃಸ್ಥಾಪಿಸಲಾಗಿದ್ದು, ಸಾಮಾನ್ಯ ಸ್ಥಿತಿಗೆ ಮರಳಲು ಕನಿಷ್ಠ ಒಂದು ಗಂಟೆ ತೆಗೆದುಕೊಳ್ಳಬಹುದು. ಆದ ಅನಾನುಕೂಲತೆಗೆ ವಿಷಾದಿಸುತ್ತೇವೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ