ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗಲಾಗಿರುವ ಸಿಟಿ ಮಂದಿಗೆ ಮತ್ತೊಂದು ಬರೆ ಬೀಳಲಿದೆ. ಬೆಂಗಳೂರಿನಲ್ಲಿ ಶೀಘ್ರದಲ್ಲೇ ನಮ್ಮ ಮೆಟ್ರೋ (Namma Metro) ಟಿಕೆಟ್ ದರ ಶೇ.15-20ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ. 2017ರ ನಂತರ ಇದೀಗ ಮೆಟ್ರೋ ದರ ಏರಿಕೆಗೆ ತೀರ್ಮಾನ ಮಾಡಲಾಗಿದೆ.
ಎಷ್ಟು ದರ ಏರಿಕೆ ಮಾಡಬೇಕೆಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಸಾರ್ವಜನಿಕರನೊಳಗೊಂಡ ಕಮಿಟಿ ರಚನೆ ಮಾಡಲಾಗಿದೆ. ಅಧಿಕೃತವಾಗಿ ಬಿಎಂಆರ್‌ಸಿಎಲ್ ಜಾಹೀರಾತು ನೀಡಿದೆ. ಮೆಟ್ರೋ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.
ಹಾಲಿ ನಮ್ಮ ಮೆಟ್ರೋದ ಟಿಕೆಟ್ ದರ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಆಗಿದೆ. ಈಗ 15 ರಿಂದ 20 ರಷ್ಟು ಟಿಕೆಟ್ ದರ ಏರಿಕೆ ಆಗಿದೆ. ಮುಂದಿನ ತಿಂಗಳಿಂದ ಹೊಸ ದರ ಜಾರಿ ಆಗಲಿದೆ. ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಪ್ರತಿಕ್ರಿಯಿಸಿದ್ದಾರೆ.
ದರ ಏರಿಕೆ ಬಗ್ಗೆ ಕಮಿಟಿ ಆಗಿದ್ದು, ಒಂದು ಸಭೆ ಕೂಡಾ ಆಗಿದೆ. ಕಮಿಟಿ ಶೀಘ್ರದಲ್ಲೇ ವರದಿ ನೀಡಲಿದ್ದು, ವರದಿ ಆಧಾರದ ಮೇಲೆ ದರ ಏರಿಕೆ ಮಾಡಲಾಗುತ್ತದೆ. ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಕಮಿಟಿ ಇದಾಗಿದೆ. ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಿದೆ. ನಮ್ಮ ಖರ್ಚು- ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ