Namma Metro : ಹಳಿಯಲ್ಲಿ ಯುವಕನ ಹುಚ್ಚಾಟ; 27 ನಿಮಿಷ ಮೆಟ್ರೋ ಸಂಚಾರ ಸ್ಥಗಿತ - Vistara News

ಬೆಂಗಳೂರು

Namma Metro : ಹಳಿಯಲ್ಲಿ ಯುವಕನ ಹುಚ್ಚಾಟ; 27 ನಿಮಿಷ ಮೆಟ್ರೋ ಸಂಚಾರ ಸ್ಥಗಿತ

Namma Metro : ಯುವಕನೊಬ್ಬ ಮೆಟ್ರೋ ಹಳಿಗಳ ಮೇಲೆ ನಡೆದುಕೊಂಡು ಹೋದ ಹಿನ್ನೆಲೆಯಲ್ಲಿ ನೇರಳೆ ಮಾರ್ಗದಲ್ಲಿ 27 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಬೇಕಾಯಿತು.

VISTARANEWS.COM


on

Namma Metro Purple Line Man jumps into track
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜನರ ಹುಚ್ಚಾಟಗಳಿಂದ ಮೆಟ್ರೋ ರೈಲು (Namma Metro) ಸಂಚಾರಕ್ಕೆ ಅಡಚಣೆಯಾದ (Train operation Stopped) ಮತ್ತೊಂದು ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಯುವಕನೊಬ್ಬ ರೈಲ್ವೆ ಹಳಿಗೆ ಇಳಿದು ಹುಚ್ಚಾಟವಾಡಿದ (Man walks in metro track) ಕಾರಣ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Namma Metro Purple Line) ಸುಮಾರು 27 ನಿಮಿಷಗಳ ಕಾಲ ಸಂಚಾರ ಸ್ಥಗಿತಗೊಳಿಸಬೇಕಾಯಿತು.

ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಿಂದ ಕೆಂಗೇರಿ ಚಲ್ಲಘಟ್ಟ ಕಡೆಗೆ ಹೋಗುವ ಮಾರ್ಗದಲ್ಲಿ ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಗೆ ಯುವಕನೊಬ್ಬ ಇಳಿದಿದ್ದ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ಸಕಾಲಿಕವಾಗಿ ಕ್ರಮ ಕೈಗೊಂಡು ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಿದರು.

ಹಳಿ ಮೇಲೆ ಯುವಕನ ಓಡಾಟವನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮೆಟ್ರೋ ಸೇವೆ ನಿಲ್ಲಿಸಿದರು. ಮೆಟ್ರೋ ಹಳಿಗಳಲ್ಲಿ ಹೈವೊಲ್ಟೇಜ್ ವಿದ್ಯುತ್ ಇರುತ್ತದೆ. ಹೀಗಾಗಿ ವಿದ್ಯುತ್‌ ಪವರ್‌ ಆಫ್‌ ಮಾಡಿಸಲಾಯಿತು. ಕೂಡಲೇ ಯುವಕನನ್ನು ಹಳಿಗಳಿಂದ ಹಿಡಿದು ತರಲಾಯಿತು. ಮತ್ತೆ ವಿದ್ಯುತ್‌ ಪವರ್‌ ಆನ್‌ ಮಾಡಲಾಯಿತು. ಆದರೆ, ಒಮ್ಮೆ ವಿದ್ಯುತ್‌ ಆಫ್‌ ಮಾಡಿ ಆನ್‌ ಮಾಡಿ ಸಂಚಾರ ಆರಂಭವಾಗಲು 27 ನಿಮಿಷ ಬೇಕಾಯಿತು. ಮಧ್ಯಾಹ್ನ 3 ಗಂಟೆಯಿಂದ 3.27 ರವರೆಗೆ ಮೆಟ್ರೋ ಸೇವೆ ಇರಲಿಲ್ಲ.

ಇದನ್ನೂ ಓದಿ : Namma Metro: ಗಮನಿಸಿ; ಭಾನುವಾರ ಎಂದಿಗಿಂತ 1 ತಾಸು ಮೊದಲೇ ಮೆಟ್ರೋ ಸೇವೆ ಆರಂಭ

ಯುವಕನ ತೀವ್ರ ವಿಚಾರಣೆ

ಮೆಟ್ರೋ ಸಿಬ್ಬಂದಿ ಹಳಿಗಳಿಗೆ ಇಳಿದ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತ ಎಲ್ಲಿ ಹಳಿಗಳ ಮೇಲೆ ಇಳಿದಿದ್ದಾನೆ. ಅವನ ಉದ್ದೇಶವೇನಾಗಿತ್ತು ಎಂಬುದರ ವಿಚಾರಣೆ ನಡೆಯುತ್ತಿದೆ.

ಈ ಹಿಂದೆಯೂ ಹಲವು ಬಾರಿ ಹುಚ್ಚಾಟ ನಡೆದಿವೆ.

  1. ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಳಿಗೆ ಜಿಗಿದು ಅಲ್ಲೋಲ ಕಲ್ಲೋಲ ಆಗಿತ್ತು. ಹಳಿ ಮೇಲೆ ಬಿದ್ದ ತನ್ನ ಮೊಬೈಲ್ ತೆಗೆಯಲು ಹಳಿಗೆ ಜಿಗಿದಿದ್ದರು.
  2. ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ರೈಲು ಹಳಿಗೆ ಜಿಗಿದಿದ್ದ. ಆತನನ್ನು ರಕ್ಷಿಸಲಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಭಾರಿ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಭಾರೀ ಮಳೆ ಸುರಿದಿದ್ದು, ಕಿನ್ನಾಳ ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ರಾಜಕಾಲುವೆ ನೀರು ರಸ್ತೆ ಮೇಲೆ ಹರಿದಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಜೂನ್‌ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಜೂನ್‌ 16ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ: ಮೂಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಗೆ ಹೈ ವೇವ್ ಅಲರ್ಟ್‌ ಇದೆ. . ಜೂನ್ 12‌ರಿಂದ 13ರ ಬೆಳಗ್ಗೆ 11:30 ಗಂಟೆಗಳವರೆಗೆ 1.9 – 2.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉಡುಪಿ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಹೈ ವೇವ್ ಅಲರ್ಟ್‌ ಇದೆ. ಜೂನ್‌ 12ರಿಂದ 13ರ ಬೆಳಗ್ಗೆ 11:30ರವರೆಗೆ 1.9- 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉತ್ತರ ಕನ್ನಡ: ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ಅಲರ್ಟ್‌ ನೀಡಲಾಗಿದೆ. ಜೂನ್‌ 12ರಿಂದ 13ರ ರಾತ್ರಿ 11.30ರವರೆ 2.0 – 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29ನೇC ಮತ್ತು 21c ಆಗಿರಬಹುದು.

Continue Reading

ಬೆಂಗಳೂರು

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

TA Sharavana: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಅಭಿನಂದಿಸಿದ್ದಾರೆ.

VISTARANEWS.COM


on

chandrababu naidu takes oath as andhra chief minister mlc TA Sharavana Congratulated
Koo

ಬೆಂಗಳೂರು: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (Chandrababu Naidu) ಅವರಿಗೆ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ (TA Sharavana) ಅಭಿನಂದಿಸಿದ್ದಾರೆ.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ಆಂಧ್ರ ಪ್ರದೇಶವು ಆಮೂಲಾಗ್ರವಾಗಿ ಅಭಿವೃದ್ಧಿ ಕಾಣಲಿ ಹಾಗೂ ಜನತೆಗೆ ತಮ್ಮಿಂದ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಟಿ.ಎ. ಶರವಣ ಹಾರೈಸಿದ್ದಾರೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪದಗ್ರಹಣ

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್.​ ಚಂದ್ರಬಾಬು ನಾಯ್ಡು (Chandrababu Naidu) ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬುಧವಾರ (ಜೂನ್‌ 12) ರಾಜ್ಯಪಾಲ ಅಬ್ದುಲ್ ನಜೀರ್ ಅವರು ಪ್ರಮಾಣ ವಚನ ಬೋಧಿಸಿದರು. ಜನಸೇನಾ ಪಾರ್ಟಿಯ ಪವನ್‌ ಕಲ್ಯಾಣ್‌ ಕೂಡ ಈ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಜಯವಾಡದ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಎನ್‌ಡಿಎ ಒಕ್ಕೂಟದ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಚಂದ್ರಬಾಬು ನಾಯ್ಡು ಅವರ ಪುತ್ರ ಮತ್ತು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್, ಟಿಡಿಪಿಯ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಕೆ.ಅಚ್ಚಣ್ಣ ನಾಯ್ಡು ಮತ್ತು ಜನಸೇನಾ ಪಾರ್ಟಿಯ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ನಾದೆಂಡ್ಲಾ ಮನೋಹರ್ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು.‌

ಇದನ್ನೂ ಒದಿ: IND vs USA: ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಉಭಯ ತಂಡಗಳು ಸೂಪರ್​-8 ಪ್ರವೇಶ

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಜೆ.ಪಿ.ನಡ್ಡಾ, ನಿತಿನ್‌ ಗಡ್ಕರಿ, ರಾಮ್‌ದಾಸ್‌ ಅಥವಾಳೆ, ಅನುಪ್ರಿಯಾ ಪಟೇಲ್‌, ಚಿರಾಗ್‌ ಪಾಸ್ವಾನ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂದೆ, ಎನ್‌ಚಿಪಿ ನಾಯಕರಾದ ಪ್ರಫುಲ್‌ ಪಟೇಲ್‌, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತಿತರರು ಪಾಲ್ಗೊಂಡಿದ್ದರು.

ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ಮಂಗಳವಾರ ತಡರಾತ್ರಿ ಅಮರಾವತಿಯ ತಮ್ಮ ನಿವಾಸದಲ್ಲಿ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರೊಂದಿಗೆ ಸಭೆ ನಡೆಸಿದ ನಂತರ ಚಂದ್ರಬಾಬು ನಾಯ್ಡು ತಮ್ಮ ಸಚಿವರ ತಂಡವನ್ನು ಅಂತಿಮಗೊಳಿಸಿದ್ದರು. ಸತ್ಯ ಕುಮಾರ್ ಯಾದವ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿಯ ಏಕೈಕ ಶಾಸಕ. ಜನಸೇನಾ ಪಾರ್ಟಿಯಿಂದ ಪವನ್ ಕಲ್ಯಾಣ್, ನಾದೆಂಡ್ಲಾ ಮನೋಹರ್ ಮತ್ತು ಕಂದುಲಾ ದುರ್ಗೇಶ್ ಮೂವರು ಸಚಿವರಾಗಿ ಆಯ್ಕೆಯಾಗಿದ್ದಾರೆ. ಈ ಸಚಿವ ಸಂಪುಟದಲ್ಲಿ 17 ಹೊಸ ಮುಖಗಳಿವೆ. ಸಂಪುಟದಲ್ಲಿ ಮೂವರು ಮಹಿಳೆಯರಿದ್ದಾರೆ.

ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

ಚಂದ್ರಬಾಬು ನಾಯ್ಡು 2014ರಲ್ಲಿ ವಿಭಜಿತ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು. ಅವರು 2019ರ ಚುನಾವಣೆಯಲ್ಲಿ ಸೋತು 2024ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. ಇದೀಗ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಮರಳಿದ್ದಾರೆ. ಮಂಗಳವಾರ ವಿಜಯವಾಡದ ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿ(JSP)ಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದ್ದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Continue Reading

ಕರ್ನಾಟಕ

Bengaluru News: ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌ ಪಾಟೀಲ್‌

Bengaluru News: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Minister Dr.Sharanaprakash patil spoke in World Homeopathy Day Celebration and Seminar Programme in Bengaluru
Koo

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ (Bengaluru News) ನೀಡಿದ್ದಾರೆ.

ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್‌.ಅಂಬೇಡ್ಕರ್‌ ಭವನದಲ್ಲಿ ಬುಧವಾರ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್‌ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.

ಇದನ್ನೂ ಓದಿ: Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಿಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು.

ಇದನ್ನೂ ಓದಿ: Benefits Of Eating Guava: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್‌ ವೈದ್ಯಕೀಯ ಮಹಾವಿದ್ಯಾಲಯಗಳ ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ತಿಳಿಸಿದ ಸಚಿವರು, ಹೋಮಿಯೋಪತಿ ವೈದ್ಯರು ನಮ್ಮ ಜತೆ ಕೈ ಜೋಡಿಸಿದರೆ ಇಂಥ ದಂಧೆಯನ್ನು ತಡೆಗಟ್ಟಬಹುದು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.‌

ಹೋಮಿಯೋಪತಿ ಹಾಗೂ ಅಲೋಪತಿ ಬ್ರಿಜ್ ಕೋರ್ಸ್ (bridge course) ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಸಂಘದ ವತಿಯಿಂದ ಮನವಿ ಮಾಡಲಾಯಿತು. ಇದಕ್ಕೆ ಸಚಿವರು, ಈ ಸಮಸ್ಯೆ ಇತ್ಯರ್ಥವಾಗಬೇಕಾದರೆ ಹೋಮಿಯೋಪತಿ ವೈದ್ಯರ ಸಂಘದವರು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗು ಕೇಂದ್ರ ಸರ್ಕಾರಕ್ಕೆ ಮನವಿ ಕೊಡಬೇಕು ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದನ್ನು ಕೇಂದ್ರವೇ ನಿರ್ಧರಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಪಾತ್ರ ಇದರಲ್ಲಿ ಏನೂ ಇಲ್ಲ ಎಂದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಶರಣಪ್ರಕಾಶ್‌ ಪಾಟೀಲ್‌, ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

ಇದನ್ನೂ ಓದಿ: Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌, ಹೋಮಿಯೋಪಥಿಕ್‌ ವೈದ್ಯಕೀಯ ಮಹಾವಿದ್ಯಾಲಯಗಳ ಆಡಳಿತ ಸಂಘದ ಪ್ರಮುಖರಾದ ವಿನೋದ್‌ ದೊಡ್ಡಣ್ಣನವರ್‌, ಕೆ.ಚಂದ್ರಶೇಖರ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

Prajwal Revanna Case: ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಹೀಗಾಗಿ ತನಿಖಾಧಿಕಾರಿಗಳ ಮನವಿಯನ್ನು ಕೋರ್ಟ್‌ ಪುರಸ್ಕರಿಸಿ, ಮಾಜಿ ಸಂಸದನನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಆತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಮತ್ತೆ 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಮನವಿಯನ್ನು ಪುರಸ್ಕರಿಸಿರುವ ಕೋರ್ಟ್, ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಸೂಚಿಸಿದೆ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಇದೀಗ ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲಿನಲ್ಲಿ ಎರಡು ದಿನ ಕಾಲ ಕಳೆದಿದ್ದರು. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು. ಮಂಗಳವಾರ ರಾತ್ರಿ ಜೈಲಿನಲ್ಲಿ ನೀಡಿದ್ದ ಮುದ್ದೆ, ಚಪಾತಿ, ಅನ್ನ, ಸಾಂಬರ್‌, ಊಟ ಮಾಡಿದ್ದ ಪ್ರಜ್ವಲ್, ಬೇಗನೇ ನಿದ್ರೆಗೆ ಜಾರಿದ್ದರು. ಇಂದು ಬೆಳಗ್ಗೆ 5 ಗಂಟೆಗೆ ನಿದ್ದೆಯಿಂದ ಎದ್ದು ವಾಕಿಂಗ್ ಮಾಡಿದ್ದರು.

ಕೆಲ ಹೊತ್ತು ವಾಕಿಂಗ್ ಮಾಡಿ ಜೈಲ್ ಸಿಬ್ಬಂದಿ ಕೊಟ್ಟ ಕಾಫಿ ಕುಡಿದ ಬಳಿಕ ದಿನ ಪತ್ರಿಕೆಗಳನ್ನು ಓದಿ ಹೊರಗಿನ ವಿದ್ಯಮಾನಗಳ ಕಡೆ ಕಣ್ಣಾಡಿಸಿದರು. ಮತ್ತೆ ಜೈಲಿನ ಮೆನುವಿನಂತೆ ಪ್ರಜ್ವಲ್‌ಗೆ ಅವಲಕ್ಕಿ ಉಪ್ಪಿಟ್ಟು ನೀಡಲಾಗಿದೆ. ಹೊರಗೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದ ಮಾಜಿ ಸಂಸದನಿಗೆ ಜೈಲುವಾಸದಲ್ಲಿ ಚಡಪಡಿಸುತ್ತಿರರುವುದು ಕಂಡುಬಂದಿದೆ.

ಇದನ್ನೂ ಓದಿ | Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಜಾಮೀನು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ತೆಲುಗು ನಟಿ ಹೇಮಾಗೆ (Telugu actress Hema) ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ತೆಲುಗು ನಟಿ ಹೇಮಾಗೆ ಬೇಲ್ ಸಿಕ್ಕಿದೂ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಇದನ್ನೂ ಓದಿ | Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

Continue Reading
Advertisement
Rain News
ಕರ್ನಾಟಕ10 mins ago

Karnataka Weather: ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

Tips For Rainy Season
ಆರೋಗ್ಯ40 mins ago

Tips For Rainy Season: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

Alcohal
ಪ್ರಮುಖ ಸುದ್ದಿ2 hours ago

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

Dina Bhavishya
ಪ್ರಮುಖ ಸುದ್ದಿ2 hours ago

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Hassan Ali
ದೇಶ7 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ7 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ7 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ8 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ8 hours ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ9 hours ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌