ಬೆಂಗಳೂರು: ನಮ್ಮ ಮೆಟ್ರೋ (Namma Metro) ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ (Self harming) ಮಾಡಿಕೊಂಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮಾ.21ರ ಮಧ್ಯಾಹ್ನ 2:10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ (Athiguppe Metro) ಟ್ರೈನ್ ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಗಿದೆ ಎನ್ನಲಾಗಿದೆ.
ಯುವಕ ಯಾರು? ಯಾಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬುದು ತಿಳಿದು ಬಂದಿಲ್ಲ. ಸದ್ಯ ರೈಲಿನಡಿ ಸಿಲುಕಿರುವ ಶವವನ್ನು ಹೊರತೆಗೆಯಲು ಬಿಎಂಆರ್‌ಸಿಎಲ್ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಅವಘಡದಿಂದಾಗಿ 15 ನಿಮಿಷಕ್ಕೂ ಹೆಚ್ಚು ಸಮಯ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸದ್ಯ ಮೆಟ್ರೋ ಓಡಾಟವನ್ನು ಬಂದ್ ಮಾಡಿ ನಿಲ್ದಾಣದಲ್ಲಿದ್ದ ಹಾಗೂ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಇಳಿಸಿ ಹೊರಕಳಿಸಿದ್ದಾರೆ.
ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ