Site icon Vistara News

NEP 2020: ಜೈನ್‌ ವಿವಿಯಲ್ಲಿ ಸೆ.28ರಂದು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾಗೃತಿಗಾಗಿ ವಿಚಾರಗೋಷ್ಠಿ

NEP 2020

ಬೆಂಗಳೂರು: ಪೀಪಲ್ಸ್‌ ಫೋರಂ ಫಾರ್‌ ಕರ್ನಾಟಕ ಎಜುಕೇಶನ್‌ ಬೆಂಗಳೂರು ದಕ್ಷಿಣ ವತಿಯಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 (NEP 2020) ಜಾರಿ ಅಗತ್ಯತೆ ಬಗ್ಗೆ ಜಾಗೃತಿ ಮೂಡಿಸಲು ಸೆಪ್ಟೆಂಬರ್‌ 28ರಂದು ಸಂಜೆ 5 ಗಂಟೆಗೆ ಜಯನಗರ 9ನೇ ಬ್ಲಾಕ್‌ನ ಜೈನ್‌ ಯನಿವರ್ಸಿಟಿ ಕ್ಯಾಂಪಸ್‌ನಲ್ಲಿ ವಿಚಾರಗೋಷ್ಠಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ನಿಕಟಪೂರ್ವ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ವಿಸ್ತಾರ ನ್ಯೂಸ್‌ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ವಿಚಾರಗೋಷ್ಠಿಯಲ್ಲಿ ಭಾಗವಹಿಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.

ವಿಚಾರಗೋಷ್ಠಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9945499923, 9986261639 ಸಂಪರ್ಕಿಸಬಹುದು.

ಇದನ್ನೂ ಓದಿ | SBI SO Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ

Exit mobile version