ಸಾತನೂರಿನಲ್ಲಿ ಅ.15 ರಿಂದ 24ರವರೆಗೆ ನವರಾತ್ರಿ ಮಹೋತ್ಸವ, ಲಕ್ಷ್ಮೀ ಕಾಳಿ ಸರಸ್ವತಿ, ನವದುರ್ಗಾ ಉತ್ಸವ - Vistara News

ನೋಟಿಸ್ ಬೋರ್ಡ

ಸಾತನೂರಿನಲ್ಲಿ ಅ.15 ರಿಂದ 24ರವರೆಗೆ ನವರಾತ್ರಿ ಮಹೋತ್ಸವ, ಲಕ್ಷ್ಮೀ ಕಾಳಿ ಸರಸ್ವತಿ, ನವದುರ್ಗಾ ಉತ್ಸವ

ತ್ರಿಕೋನ ಶಕ್ತಿ ಪೀಠದಿಂದ ಅ.15 ರಿಂದ 24ರವರೆಗೆ ಯಲಹಂಕ ತಾಲೂಕಿನ ಸಾತನೂರಿನಲ್ಲಿ ನವರಾತ್ರಿ ಮಹೋತ್ಸವ, ಲಕ್ಷ್ಮೀ ಕಾಳಿ ಸರಸ್ವತಿ ಉತ್ಸವ ಹಾಗೂ ನವದುರ್ಗಾ ಉತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Navratri Mahotsava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತ್ರಿಕೋನ ಶಕ್ತಿ ಪೀಠದಿಂದ (TriKona Shakti Peetha) ಅ.15 ರಿಂದ 24ರವರೆಗೆ ನವರಾತ್ರಿ ಮಹೋತ್ಸವ, ಲಕ್ಷ್ಮೀ ಕಾಳಿ ಸರಸ್ವತಿ ಉತ್ಸವ ಹಾಗೂ ನವದುರ್ಗಾ ಉತ್ಸವವನ್ನು ನಗರದ ಯಲಹಂಕ ತಾಲೂಕಿನ ಬಾಗಲೂರು ಮುಖ್ಯರಸ್ತೆಯ ಸಾತನೂರಿನ ಕಂಟ್ರಿ ಕ್ಲಬ್‌ ಬಳಿ ಆಯೋಜಿಸಲಾಗಿದೆ.

ನವರಾತ್ರಿ ಹಿನ್ನೆಲೆಯಲ್ಲಿ (Navaratri Mahotsava) ಶ್ರೀ ತ್ರಿಕೋನ ಶಕ್ತಿ ಹಾಗೂ ನವದುರ್ಗಿ ಅಮ್ಮನವರನ್ನು ಪಟ್ಟಕ್ಕೆ ಕೂರಿಸಲಾಗುತ್ತಿದೆ. ತ್ರಿಕೋನ ಶಕ್ತಿ ಪೀಠದ ಸಂಸ್ಥಾಪಕರಾದ ಶ್ರೀ ಶ್ರೀ ಶ್ರೀ ರಜನಿ ಮಾತಾಜೀ, ಶ್ರೀ ಡಿ. ತಿಪ್ಪೇಸ್ವಾಮಿ ಅವರ ದಿವ್ಯ ಸಾನ್ನಿಧ್ಯದಲ್ಲಿ ದುರ್ಗಾ ದೇವಿಯ 9 ರೂಪಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಗುತ್ತದೆ.

ಅ.15ರಂದು ಬೆಳಗ್ಗೆ 9 ಗಂಟೆಗೆ ದೇವಿಯ ಆವಾಹನೆ, ಗಣಪತಿ ಪೂಜೆ, ನವದುರ್ಗಿ ಆವಾಹನೆ, ತ್ರಿದೇವತೆ, ತ್ರಿಮೂರ್ತಿಗಳ ಆವಾಹನೆ, ಗಣ ಹೋಮ, ಕುಂಕುಮಾರ್ಚನೆ, ಪುಷ್ಪಾರ್ಚನೆ, 108 ಜಪ ಪಾರಾಯಣ, ಚಂಡಿ ಪಾರಾಯಣ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಲಘು ಪೂರ್ಣಾಹುತಿ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತದೆ. ಮಧ್ಯಾಹ್ನ 1.30 ರಿಂದ 3ಗಂಟೆವರೆಗೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಸಂಜೆ 6.30ಕ್ಕೆ ಅಮ್ಮನವರಿಗೆ ಪುಷ್ಪಾರ್ಚನೆ, ಆರತಿ, ರಾತ್ರಿ 9 ಗಂಟೆಗೆ ಮಹಾ ಮಂಗಳಾರತಿ ನಡೆಯುತ್ತದೆ.

ನವರಾತ್ರಿ ಕಾರ್ಯಕ್ರಮಗಳು

ನವರಾತ್ರಿಯಲ್ಲಿ ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ದೇವಿಯ ಆವಾಹನೆ, ಕುಂಕುಮಾರ್ಚನೆ, ಪುಷ್ಪಾರ್ಚನೆ, ಹೋಮ, 108 ಜಪ, ಚಂಡಿ ಪಾರಾಯಣ, ಮಧ್ಯಾಹ್ನ 12 ಗಂಟೆಗೆ ಲಘು ಪೂರ್ಣಾಹುತಿ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ. ಸಂಜೆ 6.30ಕ್ಕೆ ಪುಷ್ಪಾರ್ಚನೆ, ಆರತಿ, ರಾತ್ರಿ 9 ಗಂಟೆಗೆ ಮಹಾ ಮಂಗಳಾರತಿ ನಡೆಯುತ್ತದೆ.

ಮೊದಲ ದಿನ ಅ.15 ರಂದು ಶೈಲ ಪುತ್ರಿ ದೇವಿ ಪೂಜೆ, ಅ. 16ರಂದು ಬ್ರಹ್ಮಚಾರಿಣಿ ದೇವಿ, ಅ. 17ರಂದು ಚಂದ್ರಘಟ್ಟ ದೇವಿ, ಅ. 18ರಂದು ಕೂಷ್ಮಾಂಡ ದೇವಿ, ಅ.19ರಂದು ಸ್ಕಂದಮಾತಾ ದೇವಿ, ಅ.20ರಂದು ಕಾತ್ಯಾಯಿನಿ ದೇವಿ, ಅ.21ರಂದು ಕಾಳರಾತ್ರಿ ದೇವಿ, ಅ.22ರಂದು ಮಹಾಗೌರಿ, ಅ.23ರಂದು ಸಿದ್ಧಿದಾತ್ರಿ ದೇವಿ ಪೂಜೆ ನಡೆಯುತ್ತದೆ.

ಹತ್ತನೇ ದಿನವಾದ ಅ.24ರಂದು ಬೆಳಗ್ಗೆ 10.45ಕ್ಕೆ ಗಣೇಶ, ನವದುರ್ಗೆ, ತ್ರಿದೇವತೆಯ ಮೂರ್ತಿಗಳನ್ನು ಸಾಂಸ್ಕೃತಿಕ ಮತ್ತು ಜಾನಪದ ಕಲಾ ತಂಡಗಳೊಂದಿಗೆ ಬೃಹತ್‌ ಮೆರವಣಿಗೆ ನಡೆಸಲಾಗುತ್ತದೆ.

ಶ್ರೀ ರಜನಿ ಮಾತಾಜೀ ಮೇಲೆ ದೇವಿ ಆವಾಹನೆ

ನವರಾತ್ರಿ ಒಂಬತ್ತು ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆವರೆಗೆ ತ್ರಿಕೋನ ಶಕ್ತಿ ಪೀಠ ಸಂಸ್ಥಾಪಕರಾದ ಶ್ರೀ ಶ್ರೀ ಶ್ರೀ ರಜನಿ ಮಾತಾಜೀ ಅವರ ಮೇಲೆ ಅಮ್ಮನವರು ಆವಾಹನೆ ಆಗಲಿದ್ದು, ಭಕ್ತರು ದರ್ಶನ ಪಡೆಯಬಹುದು.

ಇದನ್ನೂ ಓದಿ | ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಅ.15-26ರವರೆಗೆ ಶರನ್ನವರಾತ್ರಿ ಉತ್ಸವ, ಮಹಾಚಂಡಿಕಾ ಹೋಮ, ಶ್ರೀ ಮಾತಾ ಪ್ರಶಸ್ತಿ ಪ್ರದಾನ

ಸಾಂಸ್ಕೃತಿಕ ಕಾರ್ಯಕ್ರಮಗಳು

ನವರಾತ್ರಿಯಲ್ಲಿ ಪ್ರತಿದಿನ ಸಂಜೆ 6.30 ರಿಂದ ಭವ್ಯ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಾಡಿನ ಖ್ಯಾತ ಕಲಾವಿದರಿಂದ ಜಾನಪದ ಕಲೆ ಸಂಸ್ಕೃತಿ ಸಾರುವ ತೊಗಲು ಗೊಂಬೆ ಆಟ, ಯಕ್ಷಗಾನ. ಭಾರತನಾಟ್ಯ ಮುಂತಾದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

  • ಅಕ್ಟೋಬರ್ 15: ʼಆಲಾಪ್‌ ಎಂಟರ್ ಟ್ರೈನರ್ಸ್‌ʼ ವತಿಯಿಂದ ನವರಾತ್ರಿಯ ವಿಶೇಷ ಭಕ್ತಿಗೀತೆಗಳು, ಚಲನಚಿತ್ರ ಗೀತೆಗಳು ಹಾಗೂ ನೃತ್ಯ ಕಲಾವಿದರಿಂದ ನೃತ್ಯ ಪ್ರದರ್ಶನ (ಜೀ ಟಿವಿ, ಕಲರ್ಸ್‌ ಕನ್ನಡ) ಹಾಗೂ ಹಲವಾರು ರಿಯಾಲಿಟಿ ಶೋಗಳಲ್ಲಿ ಛಾಪು ಮೂಡಿಸಿರುವ ಗಾಯಕರಾದ ವಿನಯ್‌ ಆಲಾಪ್‌, ಮುಖೇಶ್‌ ಮಡಿಕೇರಿ, ರಶ್ಮಿ, ಶ್ರೀನಿವಾಸ್‌, ನಾಗಮಂಗಲ ಶ್ರೀನಿವಾಸ್ ಅವರಿಂದ ಗಾಯನ ಮತ್ತು ನೋಬೆಲ್ ಸ್ಕೂಲ್ ಆಫ್ ಆರ್ಟ್ಸ್‌ ತಂಡದಿಂದ ನೃತ್ಯ ಪ್ರದರ್ಶನ.
  • ಅಕ್ಟೋಬರ್ 16‌: ಹೆಸರಾಂತ ಕಲಾವಿದರಾದ ಉಮೇಶ್ ಮತ್ತು ತಂಡ ಜನರೊಂದಿಗೆ ಸೇರಿ ದಾಂಡಿಯಾ ನೃತ್ಯ ಸಂಯೋಜನೆ ಮತ್ತು ಸಾಮೂಹಿಕ ನೃತ್ಯ.
  • ಅಕ್ಟೋಬರ್ 17: ಹಾಸ್ಯ ದಿಗ್ಗಜರಾದ ʼಮಿಮಿಕ್ರಿ ಗೋಪಿʼ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಬರ್ಕತ್ ಅಲಿ, ಅಂತಾರಾಷ್ಟ್ರೀಯ ಕಲಾವಿದರಾದ ಕೋಗ್ಲಿ ಕೊಟ್ರೇಶ್ ಮತ್ತು ಜೀವನ್ ಸಾಬ್ ಬಿನ್ನಾಳ್ ಅವರಿಂದ ʼನಗೆ ಹಬ್ಬ.
  • ಅಕ್ಟೋಬರ್ 18: ನೋಬೆಲ್ ಸ್ಕೂಲ್ ಆಫ್ ಡಾನ್ಸ್ ತಂಡದಿಂದ ವೈವಿದ್ಯಮಯ ನೃತ್ಯ ಪ್ರಕಾರಗಳಾದ ಹಿಪ್ ಹಾಪ್, ವೆಸ್ಟರ್ನ್ ಡಾನ್ಸ್, ಮೋಹಿಣಿ ಅಟ್ಟಂ, ಭರತನಾಟ್ಯ ಮತ್ತು ಜನಪದ ನೃತ್ಯ ಪ್ರದರ್ಶನ.
  • ಅಕ್ಟೋಬರ್ 19: ಶ್ರೀ ಕುಂದೇಶ್ವರ ಪ್ರತಿಷ್ಠಾನದ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಸಂಯೋಜನೆಯಲ್ಲಿ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಯಕ್ಷಕೂಟ ಕದ್ರಿ ತಂಡದಿಂದ ʼಮಹಿಷ ಮರ್ದಿನಿ ಯಕ್ಷಗಾನʼ ಪ್ರದರ್ಶನ.
  • ಅಕ್ಟೋಬರ್ 20: ವಿವಿಧತೆ ಮತ್ತು ಆಕರ್ಷಣೀಯ ಆಫ್ರಿಕನ್ ಜಂಬೆ, ಟಾಲ್‌ ಮ್ಯಾನ್, ಚೈನೀಸ್‌, ಲಯನ್, ಜಗ್ಲರ್ಸ್‌, ಮ್ಯಾಜಿಕ್‌ ಷೋ, ಫೈರ್‌ ಡಾನ್ಸ್ ಪ್ರದರ್ಶನ.
  • ಅಕ್ಟೋಬರ್ 21: ಪ್ರಖ್ಯಾತ ಚಲನಚಿತ್ರ ನೃತ್ಯ ಸಂಯೋಜಕರಾದ ಚಾಮರಾಜ್ ಮಾಸ್ಟರ್ ಅವರ ಗರಡಿಯಲ್ಲಿ ಕಲಿತ ಮತ್ತು ನುರಿತ ನೃತ್ಯ ಕಲಾವಿದರಿಂದ ಜಿಮ್ನಾಸ್ಟಿಕ್ಸ್‌, ವೈವಿದ್ಯಮಯ ವೇಷಗಳನ್ನು ಧರಿಸಿದ ಪುಟಾಣಿ ಮಕ್ಕಳ ನೃತ್ಯ ಪ್ರದರ್ಶನ ಮತ್ತು ವಿವಿಧ ಶೈಲಿಯ ನೃತ್ಯ ಪ್ರಕಾರಗಳು.
  • ಅಕ್ಟೋಬರ್ 22: ಸ್ಥಳೀಯ ಪ್ರತಿಭೆಗಳು ಮತ್ತು ಕಲಾವಿದರಿಗೆ ಪ್ರೋತ್ಸಾಹ ಮತ್ತು ಅವರ ಕಲೆಗೆ ಉತ್ತೇಜನ ನೀಡುವ ಉದ್ದೇಶದಿಂದ ʼಸ್ಥಳೀಯ ಪ್ರತಿಭಾ ಕಾರಂಜಿʼ ಕಾರ್ಯಕ್ರಮ.
  • ಅಕ್ಟೋಬರ್ 23: ಅಂತಾರಾಷ್ಟ್ರೀಯ ವೈವಿದ್ಯಮಯ ಮತ್ತು ವಿಶೇಷ ಕಲಾವಿದರಾದ ಮಂಗಳೂರಿನ ಅಶೋಕ್‌ ಪೊಳಲಿ ಅವರಿಂದ ಅದ್ಭುತ ಕಲಾ ಪ್ರದರ್ಶನ ಮತ್ತು ಖ್ಯಾತ ಕಲಾವಿದರಾದ ಯಶೋಧ ಮತ್ತು ತಂಡದಿಂದ ಜನಪದ ಕಲೆಯಾದ ʼತೊಗಲು ಗೊಂಬೆಯಾಟʼ ಪ್ರದರ್ಶನ.
  • ಅಕ್ಟೋಬರ್ 24: ನವದುರ್ಗೆಯರು ಮತ್ತು ಪ್ರತಿಷ್ಠಾಪನೆಗೊಂಡ ದೇವರ ಮೂರ್ತಿಗಳೊಂದಿಗೆ ಸಾಂಸ್ಕೃತಿಕ ಮತ್ತು ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ.

ಇದನ್ನೂ ಓದಿ | Yuva Dasara: ಜಯನಗರದಲ್ಲಿ ಅ.15 ರಿಂದ 24 ರವರೆಗೆ ʼಯುವ ದಸರಾʼ

ವಿವಿಧ ಸ್ಪರ್ಧೆಗಳ ಆಯೋಜನೆ

ರಂಗೋಲಿ, ಮ್ಯೂಸಿಕಲ್‌ ಚೇರ್‌, ಮಕ್ಕಳ ಫ್ಯಾನ್ಸಿ ಡ್ರೆಸ್‌ ಮತ್ತು ವಿವಿಧ ಗೇಮ್ಸ್‌, ಹಳ್ಳಿ ಆಟ, ವಾಲಿಬಾಲ್, ಮಡಿಕೆ ಹೊಡೆಯುವುದು, ಊಟದ ಸ್ಪರ್ಧೆ ನಡೆಯಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಕರ್ನಾಟಕ

SSLC Exam Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೀಘ್ರ; ಇಲ್ಲಿದೆ ಮಹತ್ವದ ಮಾಹಿತಿ

SSLC Exam Result 2024: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ ಪರೀಕ್ಷೆ- 1ರ ಫಲಿತಾಂಶದ ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ.

VISTARANEWS.COM


on

SSLC exam results to be announced soon
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam Result 2024) ಬರೆದಿದ್ದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾದುನೋಡುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿತ್ತು, ಆದರೆ, ರಾಜ್ಯದಲ್ಲಿ ಮಂಗಳವಾರ ಎರಡನೇ ಹಂತದ ಮತದಾನವೂ ಮುಗಿಲಿರುವ ಹಿನ್ನೆಲೆಯಲ್ಲಿ ಇನ್ನೊಂದು ವಾರದೊಳಗೆ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮೇ 7 ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿರುವುದರಿಂದ ಮೇ 9 ಮತ್ತು 10ರಂದು ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಸಜ್ಜಾಗಿದೆ ಎನ್ನಲಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ.

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Continue Reading

ಮೈಸೂರು

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Book Release: ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Ithichanda Ramesh Uthappaʼs Four books to be released in Mysore on May 9
Koo

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನ ಹಾಗೂ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ (Ithichanda Ramesh Uthappa) ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು (Book Release) ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಉದ್ಘಾಟಿಸಲಿದ್ದು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಹಾಗೂ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಭಾಗವಹಿಸಲಿದ್ದಾರೆ.

ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್. ಸಪ್ನ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಹಾಜರಿರಲಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಸಹ ಪ್ರಾಧ್ಯಾಪಕರಾದ ಪ್ರೊ. ಎನ್. ಮಮತ, ಪುಸ್ತಕಗಳ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪ್ರಕಾಶಕ ಚೇತನ್ ಕಣಬೂರು, ಮೈಸೂರು ಕಲ್ಬರಲ್ ಅಸೋಸಿಯೇಷನ್‌ನ ಎ.ಪಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.

ಬಿಡುಗಡೆಯಾಗಲಿರುವ ಕೃತಿಗಳು

  • ಕಾಡು ಹೇಳಿದ ಕಥೆ: ವೈಲ್ಡ್‌ ಲೈಫ್ ರಿಪೋರ್ಟಿಂಗ್
  • ಹಾವು: ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ
  • ಆನೆ: ಬದಲಾದ ವರ್ತನೆ
  • ಅರ್ಜುನ ನಿನ್ನ ಮರೆಯಲೆಂತು ನಾ..!
Continue Reading

ಪ್ರಮುಖ ಸುದ್ದಿ

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕೆಇಎ ವಿಸ್ತರಿಸಿದೆ.

VISTARANEWS.COM


on

Village Administrative Officer
Koo

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆ (Village Administrative Officer) ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೆ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಕೆಗೆ ಮೇ 5 ಕೊನೆಯ ದಿನವಾಗಿತ್ತು. ಆದರೆ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಹುದ್ದೆ ಆಕಾಂಕ್ಷಿಗಳು ಕೋರಿದ್ದರು. ಹೀಗಾಗಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ (Job News) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examinations Authority) ಫೆ.20ರಂದು ಅಧಿಸೂಚನೆ (VAO Recruitment 2024) ಪ್ರಕಟಿಸಿತ್ತು. ಅದರಂತೆ ಮಾರ್ಚ್‌ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ಮೇ 4 ವರೆಗೆ ಅರ್ಜಿ ಸಲ್ಲಿಸಲು ಹಾಗೂ ಮೇ 7 ರ ರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಗಿತ್ತು. ಹೀಗಿದ್ದರೂ ಮತ್ತೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಬಾರಿ ಅರ್ಜಿ ಸಲ್ಲಿಕೆ ಅವಧಿ (ಮೇ 15ರವರೆಗೆ) ವಿಸ್ತರಿಸಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ: ಮೇ 15
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ (ಬ್ಯಾಂಕ್ ಕೆಲಸದ ವೇಳೆ ವರೆಗೆ): ಮೇ 18

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ.20ರಂದು ಅಧಿಸೂಚನೆ ಹೊರಡಿಸಿತ್ತು. ಆಸಕ್ತ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಗೆ ತಿದ್ದುಪಡಿ; ಹೊಸ ಅಧಿಸೂಚನೆಯಲ್ಲಿ ಏನಿದೆ?

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.
Continue Reading
Advertisement
Manali Tour
ಪ್ರವಾಸ7 mins ago

Manali Tour: ಭೂಲೋಕದ ಸ್ವರ್ಗ ಮನಾಲಿಗೆ ಪ್ರವಾಸ ಮಾಡಲು ಯಾವ ಸಮಯ ಸೂಕ್ತ?

Akshaya Tritiya 2024
ಧಾರ್ಮಿಕ7 mins ago

Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Prajwal Revanna Case HD Revanna bail plea to be heard tomorrow Jail or Bela
ಕ್ರೈಂ17 mins ago

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

woman murder case divya
ಕ್ರೈಂ28 mins ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Uttarakhand Wildfire
ದೇಶ33 mins ago

Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

nanna desha nanna dani column
ಅಂಕಣ58 mins ago

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

Ghee Testing Method
ಆಹಾರ/ಅಡುಗೆ1 hour ago

Ghee Testing Method: ನಾವು ತಿನ್ನುವ ತುಪ್ಪ ಶುದ್ಧವಾಗಿದೆಯೇ ಎಂದು ಪರೀಕ್ಷಿಸುವುದು ಹೇಗೆ? ಇಲ್ಲಿದೆ ವಿಧಾನ

karnataka weather Forecast
ಮಳೆ2 hours ago

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Food Safety
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

Juices Side Effect
ಆರೋಗ್ಯ2 hours ago

Juices Side Effect: ಅಂಗಡಿಯಲ್ಲಿ ಸಿಗುವ ಜ್ಯೂಸ್‌ ಕುಡಿದರೆ ಏನಾಗುತ್ತದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ11 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ14 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ16 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌