Site icon Vistara News

Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆಯನ್ನು ಖಂಡಿಸಿ, ಹಿಂದೂ ಸಂಘಟನೆಗಳಿಂದ ಮನವಿ

memorandum from Hindu organizations to condemns the Neha murder case

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆಯನ್ನು (Neha Murder Case) ಖಂಡಿಸಿ, ಲವ್ ಜಿಹಾದ್ ಘಟನೆಗಳ ಮೇಲೆ ಗಂಭೀರ ಮತ್ತು ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಮತ್ತು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ, ಹಿಂದೂ ಸಂಘಟನೆಗಳಿಂದ ಸೋಮವಾರ ಬೆಂಗಳೂರಿನಲ್ಲಿ ರಾಜ್ಯಪಾಲರ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶರತ್ ಕುಮಾರ್ ಮಾತನಾಡಿ, ಈ ಹಿಂದೆ ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು ಇದೇ ರೀತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇಂದು ಲವ್ ಜಿಹಾದ್ ಹೆಸರಿನಲ್ಲಿ ಕಾಲೇಜು ಹಿಂದೂ ಯುವತಿಯರನ್ನು ನಕಲಿ ಪ್ರೇಮದ ಜಾಲದಲ್ಲಿ ಸಿಲುಕಿಸಿ, ಅವರನ್ನು ಇಸ್ಲಾಂಗೆ ಮತಾಂತರ ಮಾಡುವ ಅಥವಾ ಅವರನ್ನು ಬರ್ಬರವಾಗಿ ಹತ್ಯೆ ಮಾಡುವ ಘಟನೆಗಳು ಯಥೇಚ್ಚವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿದೆ. ಈ ಘಟನೆಗಳು ಅತ್ಯಂತ ಗಂಭೀರವಾಗಿವೆ. ಇದರ ಹಿಂದೆ ವ್ಯವಸ್ಥಿತ ಜಿಹಾದಿ ಮತಾಂಧರ ಗುಂಪು ಕೆಲಸ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ಇದು ದೇಶದ ಭದ್ರತೆಗೆ ಅತ್ಯಂತ ಅಪಾಯಕಾರಿಯಾಗಿದೆ.

ಇದನ್ನೂ ಓದಿ: Neha Murder Case: ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ: ಆರ್.ಅಶೋಕ್‌ ಕಿಡಿ

ಆದರೆ ರಾಜ್ಯ ಸರ್ಕಾರವು ಇದನ್ನು ವೈಯಕ್ತಿಕ ಕಾರಣದ ನೆಪವೊಡ್ಡಿ ಪ್ರಕರಣವನ್ನು ನಿರ್ಲಕ್ಷ್ಯ ಮಾಡುತ್ತಿದೆ, ಇದರಿಂದ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಲವ್ ಜಿಹಾದ್ ಘಟನೆಯಲ್ಲಿ ಭಾಗಿಯಾದ ಅಪರಾಧಿಗಳು, ಅದಕ್ಕೆ ಕುಮ್ಮಕ್ಕು ನೀಡುವವರು ಹಾಗೂ ಆರ್ಥಿಕ ಸಹಾಯ ಮಾಡುವವರ ಕೂಲಂಕುಷವಾದ ತನಿಖೆಯನ್ನು ಮಾಡಬೇಕು, ಲವ್ ಜಿಹಾದ್ ಘಟನೆಗಳಲ್ಲಿ ಸಿಲುಕಿಕೊಂಡ ಯುವತಿಯರಿಗೆ ಆ ಪ್ರಸಂಗದಿಂದ ಹೊರಬರಲು ಸರ್ಕಾರವು ವಿಶೇಷ ಪೊಲೀಸ್ ಸಹಾಯ ಕೊಠಡಿಯನ್ನು ತೆರೆಯಬೇಕು ಮತ್ತು ಈ ಎಲ್ಲ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ದಳವನ್ನು ಸ್ಥಾಪನೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮತಾಂಧ ಜಿಹಾದಿಗಳಿಂದ ಅಮಾಯಕ ಹಿಂದೂಗಳ ಮೇಲೆ ಆಕ್ರಮಣಗಳು ಹೆಚ್ಚಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಾಶವಾಗುತ್ತಿದೆ. ಹೀಗಾಗಿ ಈ ಎಲ್ಲ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಮತ್ತು ಹಿಂದೂಗಳಿಗೆ ಸುರಕ್ಷತೆಯನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Health Tips: ಒಂದೇ ಕಡೆ ಕೂತಿರುತ್ತೀರಾ? ಸಮಸ್ಯೆಗಳು ಒಂದೆರಡಲ್ಲ!

ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದೂ ಪರಿಷತ್‌ನ ರಾಜ್ಯಾಧ್ಯಕ್ಷ ಸುರೇಶ್ ಗೌಡ, ದುರ್ಗಾ ಸೇನೆಯ ಭವ್ಯ, ಶ್ರೀರಾಮ ಸೇನೆಯ ಎಸ್. ಭಾಸ್ಕರನ್, ಹಿಂದೂ ಮುಖಂಡ ಅಮರನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version