ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಹೆಚ್ಚಿನ ಸಂಖ್ಯೆಯ ಜನರು, ೨೦೨೩ರ ಹೊಸ ವರ್ಷಾಚರಣೆಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ (New Year 2023) ಸಂಭ್ರಮದಿಂದ ಮಾಡುತ್ತಾರೆ. ಹೀಗಾಗಿ ಡಿಸೆಂಬರ್ ೩೧ ಮತ್ತು ಜನವರಿ ೧ ರಂದು ರಾತ್ರಿ ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಸೇರಿ ವಿವಿಧೆಡೆ ವಾಹನಗಳ ಸಂಚಾರ, ನಿಲುಗಡೆಯನ್ನು ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಆದೇಶ ಹೊರಡಿಸಿದೆ.
೧. ಡಿ.31 ರಂದು ರಾತ್ರಿ 8 ಗಂಟೆಯಿಂದ ಜ.1 ರಂದು ತಡರಾತ್ರಿ 1 ಗಂಟೆಯವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಎ) ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್‌ವರೆಗೆ
ಬಿ) ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಒಪೇರಾ ಜಂಕ್ಷನ್‌ವರೆಗೆ
ಸಿ) ಚರ್ಚ್ ಸ್ಟ್ರೀಟ್‌ನಲ್ಲಿ ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ
ಡಿ) ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್.ಬಿ.ಐ.) ವೃತ್ತದ ವರೆಗೆ
ಇ) ರೆಸ್ಟ್ ಹೌಸ್ ರಸ್ತೆಯಲ್ಲಿ ಮ್ಯೂಸಿಯಂ ರಸ್ತೆ ಜಂಕ್ಷನ್‌ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್‌ವರೆಗೆ
ಜಿ) ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ.ರಸ್ತೆ ಜಂಕ್ಷನ್‌ವರೆಗೆ (ಶಂಕರ್‌ನಾಗ್ ಚಿತ್ರ ಮಂದಿರ)
೨. ಡಿ.31 ರಂದು ಸಂಜೆ ೪ ಗಂಟೆಯಿಂದ ಜ.1ರಂದು ತಡರಾತ್ರಿ 3 ಗಂಟೆ ವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಎ) ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದ ವರೆಗೆ
ಬಿ) ಬ್ರಿಗೇಡ್ ರಸ್ತೆಯಲ್ಲಿ, ಆರ್ಟ್ಸ್ ಮತ್ತು ಕ್ರಾಫ್ಟ್ ಜಂಕ್ಷನ್‌ನಿಂದ ಒಪೇರಾ ಜಂಕ್ಷನ್ ವರೆಗೆ
ಸಿ) ಚರ್ಚ್ ಸ್ಟ್ರೀಟ್‌ನಲ್ಲಿ ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಸೆಂಟ್ ಮಾರ್ಕ್ಸ್ ರಸ್ತೆ ಜಂಕ್ಷನ್‌ವರೆಗೆ
ಡಿ) ರೆಸ್ಟ್ ಹೌಸ್ ರಸ್ತೆಯಲ್ಲಿ ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ
ಇ) ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್‌ಬಿಐ) ವೃತ್ತದ ವರೆಗೆ
೩. ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರಸ್ಟ್ ಹೌಸ್ ರಸ್ತೆ, ಚರ್ಚ್ ಸ್ಟ್ರೀರ್ಟ್, ರೆಸಿಡೆನ್ಸಿ ರಸ್ತೆ ಮತ್ತು ಸೆಂಟ್ ಮಾರ್ಕ್ಸ್ ರಸ್ತೆಗಳಲ್ಲಿ ನಿಲ್ಲಿಸಿದಂತಹ ವಾಹನಗಳ ಚಾಲಕರು, ಮಾಲೀಕರು ತಮ್ಮ ವಾಹನಗಳನ್ನು ಡಿ.31 ರಂದು ಸಂಜೆ ೪ ಗಂಟೆಯೊಳಗೆ ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಪೊಲೀಸರು ದಂಡ ವಿಧಿಸುತ್ತಾರೆ.
೪. ಡಿ.31ರಂದು ರಾತ್ರಿ ೮ ಗಂಟೆ ನಂತರ ಎಂ.ಜಿ.ರಸ್ತೆಯಲ್ಲಿ, ಕ್ವೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಇನ್ನೂ ಮುಂದಕ್ಕೆ ಹೋಗುವಂತಹ ವಾಹನ ಚಾಲಕರು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು, ಸೆಂಟ್ರಲ್ ಸ್ಟ್ರೀಟ್-ಬಿ.ಆರ್.ವಿ. ಜಂಕ್ಷನ್-ಬಲ ತಿರುವು-ಕಬ್ಬನ್ ರಸ್ತೆ ಮೂಲಕ ಸಂಚರಿಸಿ ವೆಬ್ ಜಂಕ್ಷನ್ ಬಳಿ ಎಂ.ಜಿ.ರಸ್ತೆಯನ್ನು ಸೇರಿ ಮುಂದೆ ಸಾಗಬಹುದಾಗಿದೆ.
ಎ) ಹಲಸೂರು ಕಡೆಯಿಂದ ಕಂಟೋನ್ಮೆಂಟ್ ಕಡೆಗಳಿಗೆ ಹೋಗುವಂತಹ ವಾಹನಗಳು, ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದುಕೊಂಡು ಹಲಸೂರು ರಸ್ತೆ – ಡಿಕೆನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆ ಸೇರಿ ಮುಂದೆ ಸಾಗುವುದು.
ಬಿ) ಕಾಮರಾಜ ರಸ್ತೆಯಲ್ಲಿ, ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್‌ವರೆಗೆ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಸಿ) ಸಾರ್ವಜನಿಕರು ತಮ್ಮ ವಾಹನಗಳನ್ನು ಶಿವಾಜಿನಗರ ಬಿ.ಎಂ.ಟಿ.ಸಿ. ಶಾಪಿಂಗ್ ಕಾಂಪ್ಲೆಕ್ಸ್‌ನ 1ನೇ ಮಹಡಿಯ ವಾಹನ ನಿಲುಗಡೆ ಸ್ಥಳದಲ್ಲಿ ಸಹ ನಿಲುಗಡೆ ಮಾಡಬಹುದಾಗಿದೆ.
೫. ಪಾದಚಾರಿಗಳು ಬ್ರಿಗೇಡ್ ರಸ್ತೆಯಲ್ಲಿ ಎಂ.ಜಿ.ರಸ್ತೆ ಜಂಕ್ಷನ್‌ನಿಂದ ಒಪೇರಾ ಜಂಕ್ಷನ್‌ಕಡೆಗೆ ಕಾಲ್ನಡಿಗೆಯಲ್ಲಿ ಮಾತ್ರ ಹೋಗುವುದು. ವಿರುದ್ಧ ದಿಕ್ಕಿನಲ್ಲಿ ಹೋಗುವುದನ್ನು ನಿಷೇಧಿಸಲಾಗಿದೆ. ಪುನಃ ಎಂ.ಜಿ.ರಸ್ತೆಗೆ ಬರಬೇಕಾದಲ್ಲಿ ರೆಸಿಡೆನ್ಸಿ ರಸ್ತೆ, ರೆಸಿಡೆನ್ಸಿ ರಸ್ತೆ ಕ್ರಾಸ್ (ಶಂಕರ್ ನಾಗ್ ಚಿತ್ರಮಂದಿರ) ಮಾರ್ಗವಾಗಿ ಬರಬಹುದಾಗಿದೆ.
೬. ಡಿ.31ರಂದು ರಾತ್ರಿ ೯ ಗಂಟೆಯಿಂದ ಜ.1 ರಂದು ಬೆಳಗಿನ ಜಾವ 6 ಗಂಟೆಯವರೆಗೆ ಮೇಲ್ಸೇತುವೆಗಳ ಮೇಲೆ ಅಪಘಾತಗಳು, ಬೀಳುವುದು ಇತ್ಯಾದಿ ಅನಾಹುತಗಳನ್ನು ತಡೆಗಟ್ಟಲು ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
೭. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆಯ ರಾತ್ರಿಯಾದ್ಯಂತ ನಡೆಯುತ್ತದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಮಾಹಿತಿ ನೀಡಿದೆ.
ಇದನ್ನೂ ಓದಿ | New Year 2023 | ಹೊಸ ವರ್ಷದಲ್ಲಿ ಯಾವ ರಾಜ್ಯಗಳಲ್ಲಿ ಚುನಾವಣೆ? ಹೇಗಿದೆ ಪಕ್ಷಗಳ ರಣತಂತ್ರ?