Site icon Vistara News

New year 2023 | ಎಂಜಿ ರಸ್ತೆಯಲ್ಲಿ ಗಾಂಜಾ ಸೇದುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

New Year 2023

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ (New year 2023) ಸಾವಿರಾರು ಜನ ನಗರದ ಎಂಜಿ ರಸ್ತೆಗೆ ಆಗಮಿಸಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಈ ನಡುವೆ ಗಾಂಜಾ ಸೇದುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಠಾಣೆಗೆ ಕರೆದೊಯ್ದಿದ್ದಾರೆ.

ಕೆಲ ಯುವಕರು ಮದ್ಯ ಸೇವನೆ ಮಾಡಿ ರಂಪಾಟ ನಡೆಸುವ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಚರ್ಚ್‌ ಸ್ಟ್ರೀಟ್‌ ಸೇರಿ ಪ್ರಮುಖ ರಸ್ತೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ನೂರಾರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷದ ಸಂಭ್ರಮ, ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿದ ಜನ

Exit mobile version