Site icon Vistara News

NIA Chargesheet : ರಾಜ್ಯದಲ್ಲಿ ಮಾರಣಹೋಮಕ್ಕೆ ಸ್ಕೆಚ್;‌ ಎಂಟು LET‌ ಉಗ್ರರ ಮೇಲೆ ಚಾರ್ಜ್‌ಶೀಟ್‌

Terrorists in Bangalore NIA ChargeSheet

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಆತ್ಮಾಹುತಿ ದಾಳಿ (Fidayen Attack), ವಿಧ್ವಂಸಕ ಕೃತ್ಯ (Subversive activity) ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ (LET terror group) ಎಂದು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ (Natioanl Investigation Agency-NIA) ಶುಕ್ರವಾರ ದೋಷಾರೋಪ ಪಟ್ಟಿಯನ್ನು (NIA Charge Sheet) ಕೋರ್ಟ್‌ಗೆ ಸಲ್ಲಿಸಿದೆ.

ಕೇರಳದ ಕಣ್ಣೂರು ಮೂಲದ ನಸೀ‌ರ್‌ ನೇತೃತ್ವದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದುಕೊಂಡೇ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ ಪ್ರಕರಣ ಇದಾಗಿದೆ. ಈ ಪ್ರಕರಣದಲ್ಲಿ ಎಂಟು ಆರೋಪಿಗಳಿದ್ದು ಸದ್ಯಕ್ಕೆ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಇಬ್ಬರು ತಲೆಮರೆಸಿಕೊಂಡಿದ್ದಾರೆ. ಉಗ್ರವಾದಕ್ಕೆ ಸಂಚು, ಆತ್ಮಾಹುತಿ ದಾಳಿ ನಡೆಸಲು ಇವರು ಯೋಜನೆ ರೂಪಿಸಿದ್ದರು ಎಂದು ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಲಾಗಿದೆ.

2023ರ ಜುಲೈ 19ರಂದು ಬೆಂಗಳೂರಿನ ನಾನಾ ಕಡೆಗಳಲ್ಲಿ ಸಿಸಿಬಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಎಂಬುವವರನ್ನು ಬಂಧಿಸಿತ್ತು. ಈ ಐವರು ಮತ್ತು ಅವರಿಗೆ ಜೈಲಿನಲ್ಲಿದ್ದೇ ಸೂಚನೆ ನೀಡುತ್ತಿದ್ದ ನಸೀರ್‌ನ ಮೇಲೆ ಈಗ ಜಾರ್ಜ್‌ಶೀಟ್‌ ಆಗಿದೆ. ದುಷ್ಕರ್ಮಿಗಳ ವಿರುದ್ಧ ಐಪಿಸಿ, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ, ಸ್ಫೋಟಕಗಳ ಸಾಗಣೆಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿರುವ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.

ಏನಿದು ಭಯೋತ್ಪಾದನಾ ಸಂಚು?

ಬೆಂಗಳೂರಿನಲ್ಲಿ ಸ್ಫೋಟ ಕೃತ್ಯ ನಡೆಸಲು ಸಂಚು ರೂಪಿಸಲಾಗುತ್ತಿದೆ. ಅದಕ್ಕಾಗಿ ಕೆಲವೊಂದು ಯುವಕರನ್ನು ಸಿದ್ಧಪಡಿಸಲಾಗುತ್ತಿದೆ ಎಂಬ ಮಾಹಿತಿಯ ಅನ್ವಯ 2023ರ ಜು.18ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಜು.19ರಂದು ಬೆಂಗಳೂರಿನ ನಾನಾ ಕಡೆ ದಾಳಿ ನಡೆಸಿದ ಪೊಲೀಸರು ಐವರು ಲಷ್ಕರ್ ಉಗ್ರರನ್ನು ಬಂಧಿಸಿದ್ದರು. ಈ ವೇಳೆ ಇವರಿಂದ ಏಳು ನಾಡ ಪಿಸ್ತೂಲುಗಳು, 45 ಜೀವಂತ ಗುಂಡುಗಳು, ವಾಕಿಟಾಕಿಗಳು, ಡ್ರಾಗರ್‌ಗಳು ಮತ್ತು 12 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದರು. 2023ರ ಅಕ್ಟೋಬರ್‌ನಲ್ಲಿ ಎನ್‌ಐಎ ತನಿಖೆಗೆ ವಹಿಸಿಕೊಂಡಿತ್ತು.

ಇದನ್ನೂ ಓದಿ : Terrorists in Bengaluru : ಕಿರಾತಕರಿಗೆ ಲಷ್ಕರ್‌ ನಂಟು; ಇವರ ಹಿಂದಿದ್ದಾನೆ 2008ರ ‌Bangalore Blast ಕಿಂಗ್‌ಪಿನ್

ಬಂಧಿತ ಆರೋಪಿಗಳು ಬೇರೆ ಬೇರೆ ಪ್ರಕರಣದಲ್ಲಿ 2017ರಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಲ್ಲಿ ನಸೀರ್‌ನ ಸಂಪರ್ಕಕ್ಕೆ ಬಂದಿದ್ದರು. ಅಲ್ಲಿಂದ ಬಿಡುಗಡೆಯಾದ ಬಳಿಕ ಆತ ಹೇಳಿದ್ದ ಸಂಪರ್ಕಗಳನ್ನು ಆಧರಿಸಿ, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಪಡೆದು ಸಂಚು ನಡೆಸುತ್ತಿದ್ದರು.

ಈ ಆರೋಪಿಗಳು ಯುವಕರ ಬ್ರೇನ್‌ವಾಶ್ ಮಾಡಿ ಉಗ್ರ ಸಂಘಟನೆಗಳಿಗೆ ಸೇರಿಸುತ್ತಿದ್ದರು. ಅಕ್ರಮವಾಗಿ ಉಗ್ರ ಸಂಘಟನೆಗಳಿಗೆ ಹಣ ರವಾನೆ ಮಾಡುತ್ತಿದ್ದರು ಎಂಬುದು ದೃಢಪಟ್ಟಿತ್ತು. ಇದಕ್ಕೆ ಸಂಬಂಧಿಸಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚಿನ ತನಿಖೆಯನ್ನು ಮುಂದುವರಿಸಿದೆ.

Exit mobile version