ಬೆಂಗಳೂರು: ವಾರಗಳ ಹಿಂದೆ ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ (Nigama Mandali) ಮಾಡಿದ ಎಡವಟ್ಟನ್ನು ಸರ್ಕಾರ ಸರಿಪಡಿಸಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರ (Sports Authority) ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ (Vijayananda Kashappanavar) ಅವರನ್ನು ನೇಮಿಸಿದ್ದ ಸರಕಾರ ಇದೀಗ ಈ ಆದೇಶವನ್ನು ಹಿಂದಕ್ಕೆ ಪಡೆದು ಅವರನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva lingayat development Corporation) ಅಧ್ಯಕ್ಷರಾಗಿ ನೇಮಿಸಿದೆ. ವಿಜಯಾನಂದ ಕಾಶಪ್ಪನವರ್ ನೇಮಕಕ್ಕೆ ಶಿಫಾರಸು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಕಳೆದ ಜನವರಿ 27ರಂದು ರಾಜ್ಯ ಸರ್ಕಾರವು 35 ಮಂದಿ ಶಾಸಕರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನರನ್ನಾಗಿ ಮಾಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಈಗ ಕ್ರೀಡಾ ಸಚಿವರಾಗಿರುವ ನಾಗೇಂದ್ರ ಅವರೇ ಅಧ್ಯಕ್ಷರು. ಬೇಕಿದ್ದರೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು.
ಈ ಎಡವಟ್ಟನ್ನು ಅರ್ಥ ಮಾಡಿಕೊಂಡ ಸರ್ಕಾರ ವಿಜಯಾನಂದ ಕಾಶಪ್ಪನವರ್ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ನೇಮಕ ಮಾಡಿದೆ. ಕಾಶಪ್ಪನವರ್ ಅವರು ಲಿಂಗಾಯತ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು.
ಇದನ್ನೂ ಓದಿ: Karnataka Congress : ಡಿಸಿಎಂಗೂ ರಾಜಕೀಯ ಸಲಹೆಗಾರರ ನೇಮಕ; ಇತಿಹಾಸದಲ್ಲೇ ಮೊದಲು; ಮಾನೆಗೆ ಮಣೆ
Nigama Mandali : ಬದಲಾದ ನಿಗಮ ಮಂಡಳಿ ಪಟ್ಟಿ ಇಲ್ಲಿದೆ
- ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
- ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿಎಸ್ ನಾಡಗೌಡ -ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
- ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ -ಹುಬ್ಬಳ್ಳಿ ಸಾರಿಗೆ ನಿಮಗ (ವಾಯುವ್ಯ ಸಾರಿಗೆ)
- ಬಾಗಲಕೋಟೆ ಶಾಸಕ ಯಮುನಪ್ಪ ವೈ ಮೇಟಿ -ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
- ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ -ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
- ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
- ಹೊಸದುರ್ಗ ಶಾಸಕ ಬಿಜಿ ಗೋವಿಂದಪ್ಪ- ಆಹಾರ ಮತ್ತು ನಾಗರಿಕ ಸರಬಾರಜು ನಿಗಮ
- ಮಾಗಡಿ ಶಾಸಕ ಎಚ್ಸಿ ಬಾಲಕೃಷ್ಣ -ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
- ರೋಣ ಶಾಸಕ ಜಿಎಸ್ ಪಾಟೀಲ್ -ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಗಮ ನಿಯಮಿತ
- ಶಾಂತಿ ನಗರ ಶಾಸಕ ಎನ್ಎ ಹ್ಯಾರೀಸ್ -ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
- ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ -ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
- ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ -ಮೈಸೂರ್ ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
- ಬೀಳಗಿ ಶಾಸಕ ಜೆಟಿ ಪಾಟೀಲ್ -ಹಟ್ಟಿ ಚಿನ್ನದ ಗಣಿ
- ಸುರಪುರ ಶಾಸಕ ರಾಜಾ ವೆಂಕಟ್ಟಪ್ಪ ನಾಯಕ -ಕರ್ನಾಟಕ ರಾಜ್ಯ ಉಗ್ರಾಣ ನಿಗಮ
- ಭದ್ರಾವತಿ ಶಾಸಕ ಬಿಕೆ ಸಂಗಮೇಶ್ವರ್ -ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಮಗ/ಲ್ಯಾಂಡ್ ಆರ್ಮಿ
- ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ -ಕರ್ನಾಟಕ ಗೃಹ ಮಂಡಳಿ
- ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ -ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
- ಸಾಗರ ಶಾಸಕ ಬಿಕೆ ಗೋಪಾಲಕೃಷ್ಣ ಬೇಳೂರು -ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
- ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ – ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ
- ಮಳವಳ್ಳಿ ಶಾಸಕ ಪಿಎಂ ನರೇಂದ್ರಸ್ವಾಮಿ -ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
- ಚಳ್ಳಕೆರೆ ಶಾಸಕ ಟಿ ರಘುಮೂರ್ತಿ -ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
- ಶ್ರೀರಂಗಪಟ್ಟಣ ಶಾಸಕ ಎಬಿ ರಮೇಶ್ ಬಂಡಿ ಸಿದ್ದೇಗೌಡ -ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
- ಆನೇಕಲ್ ಶಾಸಕ ಬಿ ಶಿವಣ್ಣ -ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
- ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ -ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
- ಧಾರವಾಡ ಶಾಸಕ ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
- ಹೆಗ್ಗಡ ದೇವನಕೋಟೆ ಶಾಸಕ ಅನಿಲ್ ಚಿಕ್ಕಮಾದು -ಜಂಗಲ್ ಲಾಡ್ಜಸ್
- ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ -ಕರ್ನಾಟಕ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮ
- ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ -ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
- ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ – ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಹಾನಗಲ್ ಶಾಸಕ ಶ್ರೀನಿವಾಸ ಮಾನೆ -ಮಾನ್ಯ ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
- ಶೃಂಗೇರಿ ಶಾಸಕ ಟಿಡಿ ರಾಜೇಗೌಡ -ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
- ಕೆಜಿಎಫ್ ಶಾಸಕಿ ರೂಪಕಲಾ – ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ
- ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ -ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್
- ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ -ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ
- ಕಂಪ್ಲಿ ಶಾಸಕ ಜೆಎನ್ ಗಣೇಶ್ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ