Site icon Vistara News

B.Dhananjay | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇನ್ಸ್‌ಪೆಕ್ಟರ್‌ ಬಿ.ಧನಂಜಯ್‌ ಸಾವು

B.Dhananjay

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿಧಾನಸೌಧದ ಭದ್ರತಾ ವಿಭಾಗದ ಇನ್ಸ್‌ಪೆಕ್ಟರ್ ಬಿ. ಧನಂಜಯ್ (B.Dhananjay) ಶುಕ್ರವಾರ ಮೃತಪಟ್ಟಿದ್ದಾರೆ.

2009ನೇ ಬ್ಯಾಚ್‌ನ ಪಿಎಸ್‌ಐ ಆಗಿರುವ ಇವರು, ಆರು ತಿಂಗಳ ಹಿಂದೆಯಷ್ಟೇ ಬಡ್ತಿ ಪಡೆದಿದ್ದರು. ಬೋನ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಧನಂಜಯ್ ಕಳೆದ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಹಲಸೂರು ಗೇಟ್‌ ಠಾಣೆ, ಇಂದಿರಾ ನಗರ ಠಾಣೆಗಳಲ್ಲಿ ಸೇವೆ ಸಲ್ಲಿಸಿ, ಬಡ್ತಿ ಪಡೆದಿದ್ದರು. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಇದನ್ನೂ ಓದಿ | CN Ashwathanarayana | ಬೆಂಗಳೂರಲ್ಲಿ ಹೆಚ್ಚುತ್ತಿರುವ ಅತ್ಯಾಚಾರ, ಸಿಸಿಟಿವಿ ಸಂಖ್ಯೆ ಹೆಚ್ಚಿಸಲು ಕ್ರಮ ಎಂದ ಸಚಿವರು

Exit mobile version