ಬೆಂಗಳೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ನಗರದ ಮಲ್ಲೇಶ್ವರದ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಮತ್ತು ಯಲಹಂಕ ಕೇಂದ್ರೀಯ ವಿದ್ಯಾಲಯ ರೈಲುಗಾಲಿ ಕಾರ್ಖಾನೆ ಶಾಲೆಯಲ್ಲಿ ʼಪರೀಕ್ಷಾ ಪೇ ಚರ್ಚಾʼ ಚಿತ್ರಕಲಾ ಸ್ಪರ್ಧೆಯನ್ನು ಮಂಗಳವಾರ ಆಯೋಜಿಸಲಾಗಿತ್ತು. ನಂತರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಮಲ್ಲೇಶ್ವರದ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಬೆಂಗಳೂರಿನ ವಿವಿಧ ಶಾಲೆಗಳ 100 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಕಾನ್ಸೆಪ್ಟ್‌ನಲ್ಲಿ ಪೇಂಟಿಂಗ್ ಮಾಡಿದ್ದ ಅತ್ಯುತ್ತಮ ಐದು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಉಳಿದವರಿಗೆ ಡಿಜಿಟಲ್ ಪ್ರಮಾಣಪತ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ʼಪರೀಕ್ಷಾ ಯೋಧರುʼ (Exam Warriors) ಪುಸ್ತಕವನ್ನು ಹಂಚಲಾಯಿತು. ಕೇಂದ್ರೀಯ ವಿದ್ಯಾಲಯ ಪ್ರಾಂಶುಪಾಲರಾದ ಶಶಿಮೋಹನ್ ಹಾಗೂ ತೀರ್ಪುಗಾರರು ಎಲ್ಲಾ ಮಕ್ಕಳಿಗೂ ಸ್ಫೂರ್ತಿದಾಯಕ ಮಾತುಗಳನ್ನು ಹೇಳಿ ಹುರಿದುಂಬಿಸಿದರು.
ಇದನ್ನೂ ಓದಿ | Education News: ಶಾಲೆಗಳಲ್ಲಿ ಗಾಂಧೀಜಿ ವಿಚಾರಧಾರೆಯ ಪ್ರಬಂಧ ಸ್ಪರ್ಧೆ; ಮಧು ಬಂಗಾರಪ್ಪಗೆ ಸಿಎಂ ಸೂಚನೆ
ನಗರದ ಯಲಹಂಕ ಕೇಂದ್ರೀಯ ವಿದ್ಯಾಲಯ ರೈಲುಗಾಲಿ ಕಾರ್ಖಾನೆ ಶಾಲೆಯಲ್ಲಿ ಪರೀಕ್ಷಾ ಪೇ ಚರ್ಚಾ ಬಗ್ಗೆ ಅರಿವು ಮೂಡಿಸಲು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಕ್ಕಳು ವಿವಿಧ ಶಾಲೆಗಳಿಂದ ಭಾಗವಹಿಸಿದ್ದರು. ಪರೀಕ್ಷೆಯ ಸಮಯದಲ್ಲಿ ಮಕ್ಕಳು ತಮ್ಮ ಮಾನಸಿಕ ಒತ್ತಡವನ್ನು ಹೇಗೆ ಕಡಿಮೆ ಮಾಡಬೇಕು ಎಂಬುದರ ಬಗ್ಗೆ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಚಿತ್ರಗಳನ್ನು ಬಿಡಿಸಿದ್ದರು.
ಶಾಲೆಯ ಪ್ರಾಂಶುಪಾಲೆ ಡಾ. ಪುಷ್ಪರಾಣಿ ಯಾದವ್ ಅವರು ವಿಜೇತರಿಗೆ ಬಹುಮಾನವಾಗಿ ʼಎಕ್ಸಾಂ ವಾರಿಯರ್ಸ್ʼ ಪುಸ್ತಕವನ್ನು ನೀಡಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ನೀಡಿದರು.