Site icon Vistara News

Peenya Flyover : ಲೋಡ್‌ ಟೆಸ್ಟಿಂಗ್‌ ಕಂಪ್ಲೀಟ್‌; ಪೀಣ್ಯ ಫ್ಲೈಓವರ್‌ ಸಂಚಾರಕ್ಕೆ ಮುಕ್ತ

Peenya Flyover Reopen

ಬೆಂಗಳೂರು: ಲೋಡ್‌ ಟೆಸ್ಟಿಂಗ್‌ ಹಿನ್ನೆಲೆಯಲ್ಲಿ ಬೆಂಗಳೂರಿನ ಪೀಣ್ಯ ಫ್ಲೈಓವರ್‌ (Peenya Flyover)ನಲ್ಲಿ ಜನವರಿ 16ರಿಂದ ವಾಹನ ಸಂಚಾರವು (peenya flyover news) ಬಂದ್‌ ಆಗಿತ್ತು. ಇದೀಗ ಲೋಡ್‌ ಟೆಸ್ಟಿಂಗ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಜ.19ರ ಬೆಳಗ್ಗೆ 11 ಗಂಟೆಗೆ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ. ಕಳೆದ ಮೂರು ದಿನಗಳಿಂದ ಟ್ರಾಫಿಕ್‌ ಕಿರಿಕಿರಿಯಿಂದ ಬೇಸತ್ತಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.

ಯಾವುದೇ ಘನ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿಲ್ಲ. ಮೊದಲಿಗೆ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಸ್‌ಗಳು, ಮತ್ತು ಆರು ಚಕ್ರದ ವಾಹನಗಳಿಗೆ ಅವಕಾಶವಿಲ್ಲ. ಬೈಕ್, ಕಾರು, ನಾಲ್ಕು ಚಕ್ರದ ವಾಹನಗಳಿಗೆ ಮೊದಲಿನಂತೆ ಸಂಚಾರಕ್ಕೆ ಮುಕ್ತವಾಗಲಿದೆ.

ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಎಲಿವೇಟೆಡ್ ಹೈವೇ (ಡಾ.ಶಿವಕುಮಾರ ಸ್ವಾಮೀಜಿ ಮೇಲ್ಲೇತುವೆ) (Peenya Elevated Highway) ಗೆ ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಇತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದುರಸ್ಥಿ ಕಾರ್ಯವನ್ನು ಕೈಗೆತ್ತಿಕೊಂಡು, ವಾಹನಗಳ ಸಂಚಾರವನ್ನು ನಿರ್ಬಂಧಿಸಬೇಕೆಂದು ಕೋರಿತ್ತು.

ವಯಾಡಕ್ಟ್‌ ಸಮಗ್ರತೆಯ ಪರಿಶೀಲನೆಯನ್ನು ನಡೆಸಲು ಲೋಡ್ ಟೆಸ್ಟಿಂಗ್ ಮಾಡಬೇಕಾಗಿತ್ತು. ಈ ನಿಟ್ಟಿನಲ್ಲಿ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಸ್ತೆಯಲ್ಲಿ ಜನವರಿ 16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

ಸದ್ಯ ಲೋಡ್‌ ಟೆಸ್ಟಿಂಗ್‌ ಕಾರ್ಯವು ಪೂರ್ಣಗೊಂಡಿದ್ದು, ಸವಾರರು ಫ್ಲೈಓವರ್‌ ಬಳಸಬಹುದಾಗಿದೆ. ಈಗಾಗಲೇ ಫ್ಲೈಓವರ್‌ ಮುಂಭಾಗ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತೆರವು ಮಾಡಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version