ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ (Physical Abuse) ನಡೆದಿರುವ ಆರೋಪ ಕೇಳಿ ಬಂದಿದೆ. ಹೊಟ್ಟೆ ನೋವು ಎಂದು ನರಳಾಡುತ್ತಿದ್ದ ಮಗಳನ್ನು ಆಸ್ಪತ್ರೆಗೆ ಕರೆದುಹೋದ ಪೋಷಕರಿಗೆ ಆಘಾತವೇ ಎದುರಾಗಿತ್ತು. ಯಾಕೆಂದರೆ ಶಾಲೆಗೆ ಹೋಗುತ್ತಿದ್ದ ಮಗಳು 7 ತಿಂಗಳ ಗರ್ಭಿಣಿಯಾಗಿದ್ದಳು. ವೈದ್ಯರು ಹೇಳಿದ ಸುದ್ದಿ ಕೇಳಿ ತಂದೆ-ತಾಯಿ ಶಾಕ್ ಆಗಿದ್ದರು. ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಾ ಅಲ್ಪ-ಸ್ವಲ್ಪ ಫೇಮಸ್ ಆಗಿದ್ದ ಸಾದ್ ಮುಸೈಬ್ನಾ ಎಂಬಾತನ ಮೇಲೆ ಬಾಲಕಿ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. 15 ವರ್ಷದ ಮಗಳನ್ನು ನಂಬಿಸಿ, ಮನವೊಲಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ.
ಸಂತ್ರಸ್ತೆಯನ್ನು ಆರೋಪಿ ಸಾದ್ ಮನೆಗೆ ಕರೆದೊಯ್ದು ಆತನ ತಾಯಿ ಹಾಗೂ ಸಹೋದರಿಗೆ ಪರಿಚಯಿಸಿ ನಂಬಿಸಿದ್ದನಂತೆ. ಬಳಿಕ ಪದೆ ಪದೇ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದನಂತೆ. ಈ ಬಗ್ಗೆ ಕೇಳಲು ಆರೋಪಿ ಮನೆಗೆ ಹೋದಾಗ ಬಾಲಕಿಯ ತಂದೆಗೆ ಬೆದರಿಕೆ ಹಾಕಿದ್ದನಂತೆ. ರೌಡಿಗಳ ಪರಿಚಯವಿದೆ, ನಿಮ್ಮ ಮಗಳನ್ನು ಬಿಡುವುದಿಲ್ಲ ಎಂದು ಹಲ್ಲೆ ನಡೆಸಿದ್ದನಂತೆ.
ಇದನ್ನೂ ಓದಿ: Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!
ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ
ಈ ಎಲ್ಲ ಘಟನೆಗಳಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಪೋಷಕರು ಆಕೆಯನ್ನು ರಕ್ಷಿಸಿದ್ದಾರೆ. ಆರೋಪಿ ಸಾದ್ ಹಲವಾರು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಾಲೆಗೆ ಬರುವ ಅಮಾಯಕ ಹೆಣ್ಣುಮಕ್ಕಳನ್ನು ಇದೇ ರೀತಿ ಬಳಸಿಕೊಳ್ಳುತ್ತಿದ್ದಾನೆ. ಎಲ್ಲರ ಪರವಾಗಿ ನಾನೇ ಮುಂದೆ ಬಂದು ದೂರು ನೀಡಿದ್ದಾನೆ ಎಂದಿದ್ದಾರೆ.
ಸದ್ಯ ಬಾಲಕಿ ತಂದೆಯ ದೂರಿನನ್ವಯ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಗಳಿಗೆ ನ್ಯಾಯ ಕೊಡಿಸಲು ತಂದೆ ನಿರಂತರವಾಗಿ ಹೋರಾಡುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತರಿಗೂ ಆರೋಪಿಯ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. ಮೊದಮೊದಲು ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಇದೀಗ ಕೊನೆಗೂ ಆರೋಪಿಯ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಡ್ರ್ಯಾಗರ್ ಹಿಡಿದು ಪೋಸ್
ಇನ್ನೊಂದೆಡೆ ಆರೋಪಿ ತಾಯಿ ನನ್ನ ಮಗ ಹೀರೋ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಬರ್ತ್‌ಡೇ ಪಾರ್ಟಿಯೊಂದರಲ್ಲಿ ಡ್ರ್ಯಾಗರ್ ಹಿಡಿದು ಆರೋಪಿ ಪೋಸ್ ಕೊಟ್ಟಿದ್ದಾನೆ. ಆತನ ಕುಟುಂಬದಿಂದ ನಮಗೆ ಜೀವ ಬೆದರಿಕೆ ಇದೆ ಅಂತಲೂ ಬಾಲಕಿ ಪೋಷಕರು ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ