ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಹೆಣ್ಮಕ್ಕಳಿಗೆ ರಕ್ಷಣೆ ಇಲ್ವಾ? ಇಂತಹದೊಂದು ಆತಂಕ ಶುರುವಾಗಿದೆ. ಸೇಫ್ಟ್ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರಲ್ಲಿ ಅತ್ಯಾಚಾರದಂತಹ ಪ್ರಕರಣಗಳು (Physical abuse) ಹೆಚ್ಚಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏ.25ರ ಬೆಳಗ್ಗೆ 8:30ರ ಸುಮಾರಿಗೆ ಯುವತಿಯನ್ನು ಕಿಡ್ನ್ಯಾಪ್ ಮಾಡಿ (Kidnaping Case) ನಿರ್ಜನ ಪ್ರದೇಶದಲ್ಲಿ ಐವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.
23 ವರ್ಷದ ಯುವತಿ ಮೇಲೆ ಎರಗಿ ಅತ್ಯಾಚಾರ ಮಾಡಿ ಕ್ರೂರವಾಗಿ ಹಿಂಸೆ ನೀಡಿದ್ದಾರೆ. ಚಿತ್ರದುರ್ಗ ಮೂಲದ ಯುವತಿ ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದಳು. ಸರ್ಕಾರಿ ಉದ್ಯೋಗಿಯಾಗಿರುವ ಯುವತಿ ಹಿಂದೆ ಬಿದ್ದ ಆರೋಪಿಯೊಬ್ಬ ಪ್ರೀತ್ಸೆ ಅಂತ ಕಾಟ ಕೊಡುತ್ತಿದ್ದ ಎನ್ನಲಾಗಿದೆ. ಹಲವು ವರ್ಷಗಳಿಂದ ಮದುವೆ ಮಾಡಿಕೊಳ್ಳುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಆದರೆ ಯುವತಿ ನಿರಾಕರಿಸಿದ್ದಳು.
ಈ ಸಿಟ್ಟಿಗೆ ಕೆಲಸಕ್ಕೆ ಹೊರಟ್ಟಿದ್ದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ್ದಾರೆ. ತಮ್ಮನ ಕೃತ್ಯಕ್ಕೆ ಆರೋಪಿಯ ಅಣ್ಣ ಹಾಗೂ ಆತನ ಕೆಲ ಸ್ನೇಹಿತರು ಸಾಥ್ ನೀಡಿದ್ದು, ಬಾಡಿಗೆ ಕಾರು ಮಾಡಿಕೊಂಡು ಬಂದು ಯುವತಿಯನ್ನು ಕಿಡ್ನ್ಯಾಪ್ ಮಾಡಿ, ಚಿತ್ರದುರ್ಗಕ್ಕೆ ಕರೆದುಹೋಗಿ ಅತ್ಯಾಚಾರವೆಸಗಿದ್ದಾನೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ: Robbery Case: ಮನೆ ಮಾಲೀಕರಿಗೆ ಪಿಸ್ತೂಲ್ ತೋರಿಸಿ 40 ಲಕ್ಷ ರೂ. ದರೋಡೆ
6 ವರ್ಷದ ಬಾಲಕಿ ಮೇಲೂ ಅತ್ಯಾಚಾರ
ಬೆಂಗಳೂರು: ಬೆಂಗಳೂರಿನಲ್ಲಿ (Bengaluru News) ಮನುಕುಲ ಮೆಚ್ಚದ ಪೈಶಾಚಿಕ ಪಾತಕ ಕೃತ್ಯವೊಂದು ನಡೆದಿದೆ. ಇನ್ನೂ ಜಗತ್ತು ಅಂದರೆ ಏನು ಎಂದು ತಿಳಿಯದ ಬಾಲಕಿ ಮೇಲೆ ಕಾಮುಕನೊಬ್ಬ ದೌರ್ಜನ್ಯವನ್ನು (physical Abuse) ನಡೆಸಿದ್ದಾನೆ. 6 ವರ್ಷದ ಬಾಲಕಿ ಮೇಲೆ ಎರಗಿ ದುಷ್ಟ ಅತ್ಯಾಚಾರವೆಸಗಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮಜನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ಕುಟುಂಬ ಹಾಗೂ ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಬಾಲಕಿ ತಂದೆ ಹಾಲು ತರಲು ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಯಾರು ಇಲ್ಲದಿರುವುದು ತಿಳಿಯುತ್ತಿದ್ದಂತೆ ದುಷ್ಟ ಮಮಜನ್ ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪೋಷಕರು ಮನೆಗೆ ವಾಪಸ್ ಬಂದಾಗ ಕಾಮುಕನ ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಕಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿರುವ ಕೆ.ಆರ್. ಪುರಂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ