Site icon Vistara News

PM Narendra Modi: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸಹೋದರ ಭೇಟಿ

PM Narendra Modi

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಹೋದರ ಸೋಮಭಾಯಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಗುಜರಾತ್‌ನಿನಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಿದ್ದು, ಯಲಹಂಕದ ಸಾಯಿಬಾಬಾ ದೇವಸ್ಥಾನ ಹಾಗೂ ಟ್ರಸ್ಟ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮೊದಲು ಯಲಹಂಕದ ಸಾಯಿಬಾಬಾ ದೇವಸ್ಥಾನ ಮತ್ತು ಘಂಚಿ ಸಮಾಜ್ ಪೂರ್ಣೇಶ್ವರ ಧಾಮ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಸೋಮಭಾಯಿ ಮೋದಿ ಅವರು ಭಾಗವಹಿಸಲಿದ್ದು, ಬಳಿಕ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೂ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

HD Kumaraswamy

ಇದನ್ನೂ ಓದಿ | ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

HD Kumaraswamy

ಹಾಸನ: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ನೀಡಿ ನೀಡಿದರು. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಅವರು ಜತೆಗಿದ್ದ ಜಿಲ್ಲಾಧಿಕಾರಿ, ಎಸ್‌ಪಿ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಕುಮಾರಸ್ವಾಮಿ ಹೇಳಿದ್ದೇನು?

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ʼʼಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಸಕಲೇಶಪುರದ ಜತೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭೂ ಕುಸಿತವಾಗಿದೆ. ಕಳಪೆ, ಅವೈಜ್ಞಾನಿಕ ಕಾಮಗಾರಿ ನಡೆದಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಬಗ್ಗೆ ಪರಿಶೀಲಿಸಲಾಗುವುದುʼʼ ಎಂದು ಅವರು ತಿಳಿಸಿದರು.

ʼʼಕಳೆದ ಲೋಕಸಭಾ ‌ಚುನಾವಣೆ ನಂತರ ಪ್ರಥಮ ಬಾರಿಗೆ ಹಾಸನ ಜಿಲ್ಲೆಯಲ್ಲಿ ಆಗಿರುವ ಅನಾಹುತ ನೋಡಲು ಬಂದಿದ್ದೇನೆ. ಚುನಾವಣೆ ಆಸುಪಾಸಿನಲ್ಲಿ ನಡೆದ ಕೆಲವು ಅಹಿತರಕರ ಘಟನೆಗಳಿಂದ‌ ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ನಿರಾಸೆ ಮೂಡಿಸಿದೆ. ಹಾಸನ ಜಿಲ್ಲೆಯ ಜನತೆ ದೇವೇಗೌಡರಿಗೆ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿ‌ ಕೊಟ್ಟಿದ್ದಾರೆ. ಅರವತ್ತು ವರ್ಷಗಳ ಏಳುಬೀಳುಗಳಲ್ಲಿ ಅವರ ರಾಜಕೀಯ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿರುವುದು ಹಾಸನ ಜಿಲ್ಲೆಯ ಜನ. ನಮ್ಮ ಬದುಕು ಇರುವವರೆಗೂ ನಾವು ಇದನ್ನು ಮರೆಯುವುದಿಲ್ಲʼʼ ಎಂದು ಎಚ್‌ಡಿಕೆ ಭರವಸೆ ನೀಡಿದರು.

ʼʼನಾನು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಎಲ್ಲ ಮಾಹಿತಿಯನ್ನು ಕೇಂದ್ರಕ್ಕೆ ನೀಡುತ್ತೇನೆ. ಬಹಳ ದಿನಗಳಿಂದ ಈ ರಸ್ತೆಯಲ್ಲಿ ಸುರಂಗ ಮಾರ್ಗ ಆಗಬೇಕು ಎನ್ನುವ ಚರ್ಚೆಗಳಿವೆ. ಇದಕ್ಕೆ ಅರಣ್ಯ ಇಲಾಖೆಯ ತೊಡಕುಗಳಿವೆ. ಎಲ್ಲವನ್ನೂ ನಾನು ಚರ್ಚೆ ಮಾಡುತ್ತೇನೆ. ಮುಂದೆ ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ಬರುತ್ತೇನೆʼʼ ಎಂದು ಕುಮಾರಸ್ವಾಮಿ ತಿಳಿಸಿದರು.

ʼʼಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಆಗ್ರಹ ಕೇಳಿ ಬಂದಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ರೇವಣ್ಣ ಅವರ ನೇತೃತ್ವದಲ್ಲೇ ಬೃಹತ್ ಸಮಾವೇಶ ಮಾಡುತ್ತೇವೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚೇ ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿನ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿ ಪಕ್ಷ ಸಂಘಟನೆ ಮಾಡುತ್ತೇವೆ. ಈ ಮೂಲಕ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು; ಕುಮಾರಸ್ವಾಮಿ ಸಲಹೆ

ʼʼನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುವ ಸಿದ್ಧತೆ ನಡೆಯುತ್ತಿದೆ. ನನಗೂ ಸಹ ಜವಾಬ್ದಾರಿ ನೀಡಿದ್ದಾರೆ. ಎರಡು ಜವಾಬ್ದಾರಿ, ಎರಡು ಸಮಿತಿ ಜತೆಗೆ ದೇಶದ ಅಭಿವೃದ್ಧಿಗೆ ಕೆಲಸ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆದ್ದರಿಂದ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆʼʼ ಎಂದು ಎಚ್‌ಡಿಕೆ ತಿಳಿಸಿದರು.

Exit mobile version