ಬೆಂಗಳೂರು: ಅಶ್ಲೀಲ ವಿಡಿಯೋ ತೋರಿಸಿ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ತಾತನಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.
2020ರಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿತ್ತು. 70 ವರ್ಷದ ರಮೇಶ್ ಶಿಕ್ಷೆಗೊಳಾಗದ ವ್ಯಕ್ತಿ. 70 ವರ್ಷದ ಈ ವೃದ್ಧ, ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿನ್ನ ತಂದೆಯನ್ನು ಕೊಲೆ ಮಾಡುವುದಾಗಿ ಹೆದರಿಸಿ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ಶಾಲೆ ಮಗಿಸಿ ಮನೆಗೆ ಬರುತ್ತಿದ್ದ ಮೊಮ್ಮಗಳನ್ನು ಆಟವಾಡಿಸುವ ನೆಪದಲ್ಲಿ ಆಕೆಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದ.
ಕುಮಾರಸ್ವಾಮಿ ಲೇಔಟ್ ಪೊಲೀಸರು ಈ ಬಗ್ಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಪೋಕ್ಸೋ ಪ್ರಕರಣ ವಿಚಾರಣೆ ನಡೆಸಿದ ನಗರದ ತ್ವರಿತ ವಿಶೇಷ ನ್ಯಾಯಾಲಯ 20 ವರ್ಷ ಸೆರೆವಾಸ 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಸಂತ್ರಸ್ತ ಬಾಲಕಿಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ಅದೇಶಿಸಲಾಗಿದೆ.
ಇದನ್ನೂ ಓದಿ: Crime news: ರಾಜಧಾನಿಯಲ್ಲಿ ಹಾಡಹಗಲೇ ಯುವತಿ ಮೇಲೆ ಅಪರಿಚಿತರಿಂದ ಲೈಂಗಿಕ ದೌರ್ಜನ್ಯ