ಬೆಂಗಳೂರು: 17 ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ಮೃತ ಯುವತಿಯ ಪೋಷಕರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಗ್ಗಲಿಪುರದ ಯುವತಿ ಕಾಲೇಜಿಗೆ ಹೋಗುತ್ತಿದ್ದು, ವೆಂಕಟೇಶ್ ಎಂಬಾತನ ಜೊತೆ ಸ್ನೇಹ ಬೆಳೆಸಿಕೊಂಡಿದ್ದಳು. ಮನೆಯವರು ವೆಂಕಟೇಶ್‌ನನ್ನು ಕರೆದು ಬುದ್ಧಿ ಹೇಳಿದ್ದರು. ನಿನ್ನೆ ಈಕೆ ಕಾಲೇಜಿಗೆ ಹೋಗದೆ ಕಾಣೆಯಾಗಿದ್ದಳು. ಸ್ವಲ್ಪ ಸಮಯದ ಬಳಿಕ ವೆಂಕಟೇಶ್ ಎಂಬಾತ ಆಕೆಯ ಪೋಷಕರಿಗೆ ಕರೆ ಮಾಡಿದ್ದ. ʼಮಧ್ಯಾಹ್ನ ನನ್ನ ಜೊತೆ ಬೈರಸಂದ್ರಕ್ಕೆ ಬಂದಿದ್ದಳು. ತಿಂಡಿ ತಿಂದಿಲ್ಲ. ತಲೆ ಸುತ್ತಿ ಬಿದ್ದಿದ್ದಾಳೆ. ನೀರು ಕುಡಿಸಿದರೂ ಕುಡಿಯುತ್ತಿಲ್ಲ. ಉಸಿರಾಡುತ್ತಿಲ್ಲʼ ಎಂದು ಕರೆ ಮಾಡಿ ಹೇಳಿದ್ದಾನೆ. ತಕ್ಷಣ ಸ್ಥಳಕ್ಕೆ ಹೋಗಿ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದು ತೋರಿಸಿದಾಗ, ಆಕೆ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದರು.
ಮೃತಳ ಕೈಕಾಲಿನಲ್ಲಿ ಗಾಯಗಳು ಕಂಡುಬಂದಿದ್ದು, ರಕ್ತ ಕೂಡ ಬರುತ್ತಿರುವುದರಿಂದ ಅನುಮಾನಗೊಂಡ ಪೋಷಕರು, ಈಕೆಯ ಅತ್ಯಾಚಾರಗೈದು ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ. ವೆಂಕಟೇಶ್ ಬೈರಸಂದ್ರದ ಬಳಿ ಆಕೆಯನ್ನು ಕರೆದೊಯ್ದು ಅತ್ಯಾಚಾರವೆಸಗಿದ್ದಾನೆಂದು ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ಶವವನ್ನು ಆರ್‌ಆರ್ ಆಸ್ಪತ್ರೆಗೆ ಹೆಚ್ಚಿನ ಪರೀಕ್ಷೆಗಾಗಿ ರವಾನಿಸಲಾಗಿದೆ.
ಇದನ್ನೂ ಓದಿ: Murder Case: ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಯುವತಿಯ ಶವ ಕೆನಾಲ್‌ನಲ್ಲಿ ಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ!