ಬೆಂಗಳೂರು: ಬೆಂಗಳೂರಿನಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ (Pocso case) ಘಟನೆ ನಡೆದಿದೆ. ಮೊಮ್ಮಗಳ ಮೇಲೆ ಎರಗಿದ ಕಾಮುಕ ತಾತ ಅತ್ಯಾಚಾರ (Physical Abuse) ನಡೆಸಿದ್ದಾನೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ತಾಯಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಹೇಯ ಕೃತ್ಯ ನಡೆಸಿದ್ದಾನೆ.
ಸುಮಾರು 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಲೈಂಗಿಕ ದೌರ್ಜನ್ಯ ನಡೆಸಿರುವುದು ಬಾಲಕಿ ತಾಯಿಗೆ ತಿಳಿಯುತ್ತಿದ್ದಂತೆ ಯಾರಿಗೂ ಹೇಳದಂತೆ ಆರೋಪಿಗಳು ಆಮಿಷವೊಡ್ಡಿದ್ದಾರೆ. ಮನೆಯನ್ನು ಮೊಮ್ಮಗಳ ಹೆಸರಿಗೆ ಬರೆಯುತ್ತೇವೆ. ಚಿನ್ನದ ಒಡವೆ ಕೊಡಿಸುತ್ತೇವೆ ಎಂದು ಆಸೆ ತೋರಿಸಿದ್ದಾರೆ. ಆದರೆ ಆರೋಪಿಗಳ ವಿರುದ್ಧ ತಿರುಗಿ ಬಿದ್ದಿರುವ ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕೃತ್ಯವೆಸಗಿದ ಅಜ್ಜನ ಜತೆಗೆ ಅಜ್ಜಿ ಮತ್ತು ಅತ್ತೆ ಸಹ ಎಸ್ಕೇಪ್ ಆಗಿದ್ದಾರೆ. ಇವರೆಲ್ಲರೂ ಪರಾರಿ ಆಗಲು ಸಹಕರಿಸಿದ ಬಾಲಕಿಯ ತಂದೆಯನ್ನು ಬಂಧಿಸಲಾಗಿದೆ. ಬಾಲಕಿ ತಾಯಿ ನೀಡಿದ ದೂರಿನ ಮೇಲೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಆರೋಪಿಗಾಗಿ ಹಾಗೂ ಸಂತ್ರಸ್ತೆಗೆ ಆಮಿಷವೊಡ್ಡಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸದ್ಯ ಅಸ್ವಸ್ಥಳಾಗಿರುವ ಬಾಲಕಿಯನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ಇದನ್ನೂ ಓದಿ: Fake Complaint : ಹೆಸ್ಕಾಂ ಎಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್; ದೂರುದಾರೆ ಸೇರಿ 13 ಮಂದಿ ಜೈಲುಪಾಲು
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಇದರಿಂದ ಸದ್ಯ ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ.
ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಆದರೆ, ಪ್ರಜ್ವಲ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ʼಪ್ರತಿ ದಿನ ಫೋನ್ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?
ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.
ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್ ಫೋನ್ ನಂಬರ್ ಪಡೆದಿದ್ದ. ನಂಬರ್ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.
ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.
ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.
ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ ಚುರುಕುಗತಿ ಪಡೆದುಕೊಂಡಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ