Site icon Vistara News

Eid Milad : ಡಿಜೆ ನಿಷೇಧ, ಪೂಜಾಸ್ಥಳಗಳ ಮುಂದೆ ಘೋಷಣೆ ಕೂಗುವಂತಿಲ್ಲ; ಈದ್‌ ಮೆರವಣಿಗೆಗೆ ಕಠಿಣ ನಿರ್ಬಂಧ

Eid Milad procession

ಬೆಂಗಳೂರು: ಮುಸ್ಲಿಮರ ಪವಿತ್ರ ಹಬ್ಬವಾದ ಈದ್‌ ಮಿಲಾದ್‌ನ್ನು ( Eid milad festival) ಸೆಪ್ಟೆಂಬರ್‌ 28ರಂದು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಎಲ್ಲೆಡೆ ಆಚರಿಸಲಾಗುತ್ತಿದೆ. ಈದ್‌ ಹಬ್ಬದ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಕಡೆ ಮೆರವಣಿಗೆಗಳು (Eid Procession) ನಡೆಯಲಿವೆ. ಈ ವೇಳೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಿಂದ ಪೊಲೀಸ್‌ ಇಲಾಖೆ ಕೆಲವೊಂದು ನಿಬಂಧನೆಗಳನ್ನು ಜಾರಿ (Conditions from police department) ಮಾಡಿದೆ. ಅದರ ಜತೆಗೆ ಮೆರವಣಿಗೆಗಳು ಸುಗಮವಾಗಿ ಸಾಗುವಂತೆ ಸಂಚಾರದಲ್ಲೂ (Road traffic advisory) ವ್ಯತ್ಯಾಸ ಮಾಡಲಾಗಿದೆ. ಮಸೀದಿಗಳಲ್ಲಿ ಪ್ರಾರ್ಥನೆ (Prayer at Mosques) ಸಲ್ಲಿಸಿದ ಬಳಿಕ ಸಂಜೆ ಮೂರು ಗಂಟೆಯ ಹೊತ್ತಿಗೆ ಮೆರವಣಿಗೆ ಶುರುವಾಗಲಿದೆ.

ಈದ್ ಮಿಲಾದ್ ಹಬ್ಬದ ಪ್ರಯುಕ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಕೆಲವೊಂದು ನಿಬಂಧನೆಗಳನ್ನು ವಿಧಿಸಲಾಗಿದೆ. ಮುಖ್ಯವಾಗಿ ಮೆರವಣಿಗೆಯಲ್ಲಿ ಹೋಗುವಾಗ ಹರಿತವಾದ ಆಯುಧ ಹಿಡಿದುಕೊಂಡು ಹೋಗುವಂತಿಲ್ಲ, ಡಿಜೆ ಬಳಸುವಂತಿಲ್ಲ, ಅನ್ಯ ಧರ್ಮದ ಪೂಜಾ ಸ್ಥಳಗಳ ಮುಂದೆ ಘೋಷಣೆ ಕೂಗುವಂತಿಲ್ಲ ಎಂದು ಸೂಚಿಸಲಾಗಿದೆ.

ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ದ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. ಮೈದಾನ, ಮಿಲ್ಲರ್‌ರಸ್ತೆ ಬುದ್ದುಸಾಬ್ ಈದ್ಧಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆ ಕಾರ್ಯಕ್ರಮಗಳ ನಡೆಯವ ಹಿನ್ನಲೆ ಹಬ್ಬದ ದಿನದಂದು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಬೇಕು ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ಆಡಚಣೆ ಉಂಟಾಗದಂತೆ ಸ್ವಯಂಸೇವಕರು ಹಾಗೂ ಆಯೋಜಕರು ರಸ್ತೆಯ ಎರಡು ಬದಿಯಲ್ಲಿ ನಿಂತು ಮೆರವಣಿಗೆಗಾರರಿಗೆ ಸೂಕ್ತ ನಿರ್ದೇಶನವನ್ನು ನೀಡಿ ಮೆರವಣಿಗೆಯನ್ನು ಶಾಂತ ರೀತಿಯಲ್ಲಿ ಸಾಗುವಂತೆ ಸಹಕರಿಸುವುದು ಹಾಗೂ ಸಾರ್ವಜನಿಕ ಸಂಚಾರ ಸುಗಮವಾಗಿ ಸಾಗಲು ಅನುವು ಮಾಡುವುದು.
  2. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೇ ಹರಿತವಾದ ವಸ್ತುಗಳನ್ನು ಹೊಂದಿರಬಾರದು.
  3. ಈದ್ ಹಬ್ಬದ ದಿನದಂದು ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು.
  4. ಈದ್ ಹಬ್ಬದ ಪ್ರಯುಕ್ತ ಸ್ತಬ್ದ ಚಿತ್ರಗಳು ಯಾವುದೇ ಕೋಮು ಗಲಭೆಗೆ ಅವಕಾಶ ನೀಡದಂತೆ ಇರಬೇಕು.
  5. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ ಚರ್ಚ್‌ಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.
  6. ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್‌ ಇಲಾಖೆಯಿಂದ ಸಿಬ್ಬಂದಿಯನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು.
  7. ಈದ್ ಹಬ್ಬದ ಮೆರವಣಿಗೆಯ ಸಂದರ್ಭದಲ್ಲಿ ಅಯೋಜಕರು ಬೆಂಕಿನಿಂದಿಸುವ ಸಾಮಗ್ರಿಯನ್ನು ಹೊಂದಿರಬೇಕು.
  8. ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚು ಜನ ಇರಬಾರದು.

2022ರಲ್ಲಿ ಪ್ರಯಾಗ್‌ ರಾಜ್‌ನಲ್ಲಿ ನಡೆದ ಈದ್‌ ಮೆರವಣಿಗೆ ದೃಶ್ಯ- ಸಾಂದರ್ಭಿಕ ಚಿತ್ರ

ಗಮನಿಸಿ, ಈದ್‌ ಮೆರವಣಿಗೆ ನಿಮಿತ್ತ ಸಂಚಾರ ನಿರ್ಬಂಧ, ಮಾರ್ಗ ಬದಲು

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಗುರುವಾರ ಬೆಂಗಳೂರಿನ ಕೆಲವೆಡೆ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರು ನಗರ ಸಂಚಾರ ಪೊಲೀಸರು ಮಾರ್ಗಸೂಚಿ (Bangalore Traffic Advisory) ಬಿಡುಗಡೆ ಮಾಡಿದ್ದಾರೆ. ನೃಪತುಂಗ, ಅಂಬೇಡ್ಕರ್ ರಸ್ತೆ, ನಾಯಂಡಹಳ್ಳಿ ಜಂಕ್ಷನ್, ಕಿಂಕೋ ಜಂಕ್ಷನ್, ಬಾಪೂಜಿನಗರ, ಮಾರ್ಕೆಟ್ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಬದಲಿ ಮಾರ್ಗ ಬಳಸುವಂತೆ ವಾಹನ ಸವಾರರಿಗೆ ಪೊಲೀಸರು ಸೂಚಿಸಿದ್ದಾರೆ.

ನಗರದ ನಾಗವಾರ ಜಂಕ್ಷನ್, ನೇತಾಜಿ ಜಂಕ್ಷನ್, ಲಾಜರ್ ರಸ್ತೆ, MM ರಸ್ತೆ ಜಂಕ್ಷನ್, HM ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ನಾಳೆ‌ ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಹಿನ್ನೆಲೆ ದರ್ಗಾಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: Salwar Suit Fashion: ಈದ್‌ ಮಿಲಾದ್‌ ಫೆಸ್ಟಿವ್‌ ಸಂಭ್ರಮಕ್ಕೆ ಎಂಟ್ರಿ ನೀಡಿದ ಆ್ಯಂಕೆಲ್‌ ಲೆಂಥ್ ಸಲ್ವಾರ್‌ ಸೂಟ್ಸ್

ಈ ಕುರಿತು ಬೆಂಗಳೂರು ಪೊಲೀಸರು ನೀಡಿರುವ ಮಾರ್ಗಸೂಚಿಗಳು ಹೀಗಿವೆ

ನೃಪತುಂಗ ರಸ್ತೆಗೆ ಬದಲಿ : ಆನಂದರಾವ್ ಸರ್ಕಲ್ ಕಡೆಯಿಂದ ಬರುವ ವಾಹನ ಸವಾರರು ಕೆ.ಆರ್ ಸರ್ಕಲ್ ಬಳಿ ಎಡ ತಿರುವು ಪಡೆದು ಡಾ. ಅಂಬೇಡ್ಕರ್ ರಸ್ತೆಯಲ್ಲಿ ಸಾಗಿ ಬಾಳೇಕುಂದ್ರಿ ಸರ್ಕಲ್ ಕ್ವೀನ್ಸ್‌ ರಸ್ತೆ ಮೂಲಕ ಮುಂದಕ್ಕೆ ತೆರಳುವುದು.

ಡಾ.ಎ.ಆರ್. ಅಂಬೇಡ್ಕರ್ ರಸ್ತೆ: ಬಾಳೇಕುಂದ್ರಿ ಸರ್ಕಲ್‌ನಿಂದ ಸಿಟಿ ಮಾರ್ಕೆಟ್ ಕಡೆಗೆ ಸಂಚರಿಸುವ ಸವಾರರು ಕ್ವೀನ್ಸ್‌ ರಸ್ತೆ, ಸಿದ್ದಲಿಂಗಯ್ಯ ಸರ್ಕಲ್ ಮೂಲಕ ಸಂಚರಿಸುವುದು.

ನಾಯಂಡನಹಳ್ಳಿ ಜಂಕ್ಷನ್: ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದಲ್ಲ ನಾಯಂಡನಹಳ್ಳಿ ಅಂಗ್ಲಸ್ ನಲ್ಲಿ ಎಡ ತಿರುವು ಪಡೆದು ನಾಗರಭಾವಿ ರಿಂಗ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ ಹಾಗೂ ಚಂದ್ರಲೇಔಟ್ ವಿಜಯನಗರ ಮುಖೇನ ಸಂಚರಿಸಬಹುದಾಗಿರುತ್ತದೆ.

ಕಿಂಕೋ ಜಂಕ್ಷನ್: ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣಿ ಹೆಚ್ಚಾದಲ್ಲಿ ಕಿಂಕೋ ಜಂಕ್ಷನ್‌ನಲ್ಲ ಎಡತಿರುವು ಪಡೆದು ವಿಜಯನಗರ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ

ಬಾಪೂಜಿ ನಗರ: ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದಲ್ಲಿ ವಿಜಯನಗರದ ಕಡೆಯಿಂದ ಬರುವ ವಾಹನಗಳು ಮೈಸೂರು ಕಡೆಗೆ ಚಲಿಸಲು ಚಂದ್ರಲೇಔಟ್‌ನಿಂದ ಬಲ ತಿರುವು ಪಡೆದು ನಾಗರಭಾವಿ ಸರ್ಕಲ್ ಹಾಗೂ ರಿಂಗ್ ರಸ್ತೆ ಮುಖಾಂತರ ಕೆಂಗೇರಿ ಉಪ ನಗರ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ

ಮಾರ್ಕೆಟ್ ಸರ್ಕಲ್: ಟೌನ್‌ ಹಾಲ್‌ ಕಡೆಗೆ ಸಂಚಾರ ದಟ್ಟಣೆ ಉಂಟಾದಲ್ಲಿ ಬಸಪ್ಪ ಸರ್ಕಲ್ ಕಡೆಗೆ ಬಲತಿರುವು ನೀಡಿ ಅಥವಾ ಅವಿನ್ಯೂ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.

ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಇಂತಿವೆ

1.ಥಣಿಸಂದ್ರ ಕಡೆಯಿಂದ ಶಿವಾಜಿನಗರ ಕಡಗ ಬರುವ ವಾಹನಗಳು ನಾಗವಾರ ಜಂಕ್ಷನ್‌ನಿಂದ ಎಡತಿರುವು – ಹೆಣ್ಣೂರು ಜಂಕ್ಷನ್ – ಬಲತಿರುವು – ಸಿದ್ಧಪ್ಪ ರೆಡ್ಡಿ ಜಂಕ್ಷನ್ – ಅಯೋಧ್ಯ ಜಂಗ್ಟನ್-ಅಂಗರಾಜಪುರಂ ಹೈ ಓವರ್ ಮೂಲಕ ರಾಬರ್ಟ್‌ಸನ್ ರಸ್ತೆ ಜಂಕ್ಷನ್‌ನಲ್ಲ ಬಲ ತಿರುವು – ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪುವುದು.

2. ಶಿವಾಜನಗರದ ಕಡೆಯಿಂದ ನಾಗವಾರ ಅಂಕ್ಷನ್‌ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದು – ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಡ್ ರಸ್ತೆ ತಲುಪಿ ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದು.

3. ಆರ್.ಅರ್.‌ ನಗರದಿಂದ ಮತ್ತು ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಟಾಕೀಸ್ ಬಳಿ ಎಡ ತಿರುವು ವರದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದು.

4. ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗವಾರ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನೇತಾಜಿ ಜಂಕ್ಷನ್‌ನಿಂದ – ಬಲತಿರುವು ಮಾಸ್ಕ್ ಜಂಕ್ಷನ್ ಲಾಟರ್ ರಸ್ತೆ ಎಂ.ಎಂ.ರಸ್ತೆ ಜಂಕ್ಷನ್ – ಎಡತಿರುವು – ನಾಟರಿ – ರಸ್ತೆ ಹೆಣ್ಣೂರು ರಸ್ತೆ ಜಂಕ್ಷನ್ – ಬಲತಿರುವು – ಎಚ್.ಎಂ.ರಸ್ತೆ ಡೇವಿಸ್ ರಸ್ತೆ ಜಂಕ್ಷನ್‌ ಮೂಲಕ ಲಿಂಗರಾಜಪುರಂ ಫ್ಲೈಓವರ್ ಮುಖೇನ ಹೆಣ್ಣೂರು ಕಡೆಗೆ ಸಂಚರಿಸಬಹುದು.

5. ಲಾಜರ್ ರಸ್ತೆ ಮತ್ತು ಎಂ.ಎಂ.ರಸ್ತೆ ಜಂಕ್ಷನ್‌ನಲ್ಲಿ ಮಾಸ್ಕ್ ಸರ್ಕಲ್ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಲಾಜರ್‌ ರಸ್ತೆಯಲ್ಲಿ ಮುಂದುವರೆದು ಸಿಂಧಿ ಕಾಲೋನಿ ಜಂಕ್ಷನ್ –ವೀಲರ್ ರಸ್ತೆ ಮೂಲಕ ಕೀರ್ತಿ ಸಾಗರ್ ಥಾಮಸ್ ಬೇಕರಿ – ಥಾಮಸ್ ಜಂಕ್ಷನ್ – ಬಲತಿರುವು – ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹಡ್ಸನ್‌ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

6. ಎಚ್.ಎಂ.ರಸ್ತೆ ಮೂಲಕ ವಾಟರಿ ರಸ್ತೆ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಹೆಚ್‌.ಎಂ.ರಸ್ತೆಯಲ್ಲಿ ‘ಕಡ್ಡಾಯವಾಗಿ ಎಡ ತಿರುವು ಪಡೆದು ಲಾಜರ್ ರಸ್ತೆ – ಸಿಂಧಿ ಕಾಲೋನಿ ಜಂಕ್ಷನ್ – ವೀಲರ್ ರಸ್ತೆ ಮೂಲಕ ಕೀರ್ತಿ – ಸಾಗರ್ – ಥಾಮಸ್ ಬೇಕರಿ – ಥಾಮಸ್ ಕಫ ಅಂಗ್ಟನ್ – ಬಲತಿರುವು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹನ್ನ = ಸರ್ಕಲ್‌ ಕಡೆಗೆ ಸಂಚರಿಸಬಹುದಾಗಿದೆ.

Exit mobile version