ಬೆಂಗಳೂರು: ಗಣೇಶ ಚತುರ್ಥಿ ನಂತರ ಐದನೇ ದಿನವಾದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಅನೇಕ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರಿಗೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಸೂಚಿಸಲಾಗಿದೆ. ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧ ಜಾರಿಯಲ್ಲಿರಲಿದೆ.
ನಾಗವಾರದಿಂದ ಹೋಗಲು ಪರ್ಯಾಯ ಮಾರ್ಗ?
– ಥಣಿಸಂದ್ರ ಕಡೆಯಿಂದ ಶಿವಾಜಿನಗರ ಜಂಕ್ಷನ್ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನಾಗವಾರ ಜಂಕ್ಷನ್‌ನಿಂದ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
– ಹೆಣ್ಣೂರು ಜಂಕ್ಷನ್-ಸಿದ್ದಪ್ಪ ರೆಡ್ಡಿ ಜಂಕ್ಷನ್-ಅಯೋಧ್ಯ ಜಂಕ್ಷನ್ ಲಿಂಗರಾಜಪುರಂ ಕಡೆಯಿಂದ ಆಗಮಿಸುವ ವಾಹನಗಳು ಐಟಿಸಿ ಫೈ ಓವರ್ ಮೂಲಕ ರಾಬರ್ಟ್‌ನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ಕಡೆಗೆ ಚಲಿಸಬಹುದು.
ನಾಗವಾರ ಕಡೆ ಬರುವವರು
– ಶಿವಾಜಿನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆ ಬಳಸಬಹುದು.
– ಕೋಲ್ಸ್ ರಸ್ತೆ, ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಲು ಅವಕಾಶ ನೀಡಲಾಗಿದೆ.
– ಆರ್.ಟಿ.ನಗರದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದು.
ವಾಹನ ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು
– ಪಾಟರಿ ಸರ್ಕಲ್‌ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಪೊಲೀಸ್ ಠಾಣೆಯವರೆಗೆ ಚಲಿಸಬಹುದು.
– ಎಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್, ಜಂಕ್ಷನ್ ವರೆಗೆ ಪಾರ್ಕಿಂಗ್ ನಿರ್ಬಂಧ ವಿಧಿಸಲಾಗಿದೆ.
ಸಿಸಿಟಿವಿ, ಡ್ರೋನ್ ಮೂಲಕ ನಿಗಾ!!
ಟ್ಯಾನರಿ ರಸ್ತೆಯಲ್ಲಿ ಗಣೇಶ ಮೆರವಣಿಗೆ ಇರಲಿದ್ದು, ಮೆರವಣಿಗೆ ಬರುವ ರಸ್ತೆಗಳಲ್ಲಿ ಸಿಸಿಟಿವಿ, ಡ್ರೋನ್ ಮೂಲಕ ನಿಗಾ ಇಡಲಾಗುತ್ತದೆ. 250 ಪೊಲೀಸ್ ಸಿಬ್ಬಂದಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿ ಇಂದು ಭದ್ರತೆಗೆ ಇಳಿಯಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಬಾರ್ & ರೆಸ್ಟೋರೆಂಟ್, ಪಬ್‌ಗಳಿಗೆ ನಿಷೇಧ!
ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ಹಿನ್ನಲೆಯಲ್ಲಿ ಅತಿಸೂಕ್ಷ್ಮ ಪ್ರದೇಶದಲ್ಲಿನ ಬಾರ್ & ರೆಸ್ಟೋರೆಂಟ್, ಪಬ್ ಗಳಿಗೆ ನಿಷೇಧ ಹೇರಲಾಗಿದೆ. ಕೊತ್ತನೂರು, ರಾಮಮೂರ್ತಿನಗರ, ಅಮೃತಹಳ್ಳಿ, ಸಂಪಿಗೆಹಳ್ಳಿ ಕೆಜೆಹಳ್ಳಿ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಇದನ್ನೂ ಓದಿ | Ganesh Chaturthi | ಸಿಲಿಕಾನ್ ಸಿಟಿಯಲ್ಲಿ ಎರಡು ದಿನದಲ್ಲಿ 1.6 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ!