ಚಾಮರಾಜಪೇಟೆ ಮೈದಾನ: ಖಾಕಿ ಕಣ್ಗಾವಲು, ಕೆಎಸ್‌ಆರ್‌ಪಿ ಪಥಸಂಚಲನ - Vistara News

ಪ್ರಮುಖ ಸುದ್ದಿ

ಚಾಮರಾಜಪೇಟೆ ಮೈದಾನ: ಖಾಕಿ ಕಣ್ಗಾವಲು, ಕೆಎಸ್‌ಆರ್‌ಪಿ ಪಥಸಂಚಲನ

ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದು, ಪೊಲೀಸರು ಹಾಗೂ ಕೆಎಸ್‌ಆರ್‌ಪಿ ಪಡೆಯವರು ಶುಕ್ರವಾರ ಪಥಸಂಚನ ನಡೆಸಿದರು.

VISTARANEWS.COM


on

eidgah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದೂ ಹಾಗೂ ಮುಸ್ಲಿಂ ಪರ ಸಂಘಟನೆಗಳ ನಡುವಿನ ತಿಕ್ಕಾಟ, ಸಂಘರ್ಷಕ್ಕೆ ಕಾರಣವಾಗಿರುವ ಚಾಮರಾಜಪೇಟೆಯ ಮೈದಾನದಲ್ಲಿ ಪೊಲೀಸ್‌ ಹಾಗೂ ಅರೆಸೇನಾ ಪಡೆಗಳು ಪಥಸಂಚಲನ ನಡೆಸಿದವು.

ಚಾಮರಾಜಪೇಟೆಯ ರಸ್ತೆಗಳು ಹಾಗೂ ಮೈದಾನದಲ್ಲಿ ಕೆಎಸ್ಆರ್‌ಪಿ‌ ತುಕಡಿ ಹಾಗು ಪೊಲೀಸರು ಸೇರಿ ಸುಮಾರು 600 ಸಿಬ್ಬಂದಿ ಪಥಸಂಚಲನದಲ್ಲಿ ಭಾಗಿಯಾದರು. ಡಿಸಿಪಿ ಲಕ್ಷ್ಮಣ್ ನಿಂಬರಗಿ, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಏರಿಯಾ ಮ್ಯಾಪಿಂಗ್ ನಡೆಸಿದ್ದಾರೆ.

ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿ, ಪರಿಸರದಲ್ಲಿ ಶಾಂತಿ ಕಾಪಾಡುವ ಹಾಗೂ ದುಷ್ಕೃತ್ಯಕ್ಕೆ ಮುಂದಾಗಲಿರುವ ಕಿಡಿಗೇಡಿಗಳಿಗೆ ಎಚ್ಚರ ನೀಡುವ ಉದ್ದೇಶದಿಂದ ಈ ಪರೇಡ್‌ ನಡೆಸಲಾಗಿದೆ ಎಂದರು.

ಆಗಸ್ಟ್‌ 15ರಂದು ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಶಾಂತಿಯುತವಾಗಿ ಸರ್ಕಾರದ ಕಡೆಯಿಂದಲೇ ಇಲ್ಲಿ ಧ್ವಜಾರೋಹಣ ನಡೆಯಲಿದೆ. ಯಾವುದೇ ರೀತಿಯ ಗಲಭೆಗೆ ಆಸ್ಪದ ಇಲ್ಲ. ಕಾರ್ಯಕ್ರಮಕ್ಕೆ ಆಹ್ವಾನ ಇರುವವರಿಗೆ ಮಾತ್ರ ಅವಕಾಶ. ಎರಡು ತುಕಡಿ ಕೆಎಸ್‌ಆರ್‌ಪಿ ಸಿಬ್ಬಂದಿ ಹಾಗೂ ಪೊಲೀಸರು ಸದಾ ಇಲ್ಲಿರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಜಮೀರ್‌ ಅಹ್ಮದ್‌ಗೆ ಹಿನ್ನಡೆ: ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದಲೇ ಧ್ವಜಾರೋಹಣ

ಈದ್ಗಾ ಮೈದಾನ ಹಾಟ್‌ಸ್ಪಾಟ್‌

ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಈಗ ಈದ್ಗಾ ಮೈದಾನ ಹಾಟ್‌ಸ್ಪಾಟ್ ಎನಿಸಿದೆ. ಕಂದಾಯ ಇಲಾಖೆಯ ಸುಪರ್ದಿಗೆ ಬಂದ ಬಳಿಕ ಈದ್ಗಾ ಮೈದಾನದಲ್ಲಿ ಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಧ್ವಜಾರೋಹಣ ನಡೆಯಲಿದೆ. ಪ್ರತಿ ಬಾರಿ ಮಾಣಿಕ್ ಶಾ ಪರೇಡ್ ಗ್ರೌಂಡ್‌ನಲ್ಲಿ ಹೆಚ್ಚಿನ ಭದ್ರತೆ ನೀಡಲಾಗುತಿತ್ತು. ಆದರೆ ಈ ಬಾರಿ ಈದ್ಗಾ ಮೈದಾನಕ್ಕೆ ಹೆಚ್ಚಿನ ಪೊಲೀಸ್ ದಳ ನಿಯೋಜನೆ ಮಾಡಲಾಗಿದೆ‌. ಆಗಸ್ಟ್ 15ರಂದು ಹೆಚ್ಚಿನ ಭದ್ರತೆ ಬೇಕಿರುವ ಹಿನ್ನೆಲೆಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್‌ಗೂ ಪೊಲೀಸ್ ಇಲಾಖೆ ಮನವಿ ಮಾಡಲಿದೆ.

eidgah

ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಹಾಗೂ ಹಿಂದೂಗಳು ಕಾರ್ಯಕ್ರಮ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಪ್ರದೇಶದ ಸೂಕ್ಷ್ಮ ಪರಿಸ್ಥಿತಿ ಅರಿತ ಪೊಲೀಸರು ಸ್ಥಳದಲ್ಲಿ ಸಾಕಷ್ಟು ಮುಂಜಾಗರೂಕತೆ ವಹಿಸಿದ್ದಾರೆ. 15 ದಿನಗಳಿಂದ ಕೆಎಸ್‌ಆರ್‌ಪಿ ತುಕಡಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿವೆ.

ಪಶ್ಚಿಮ ವಿಭಾಗದ ಪೊಲೀಸರು ಮಫ್ತಿಯಲ್ಲಿ ಮಾಹಿತಿ ಕಲೆ ಹಾಕುತ್ತಿದ್ದು, ಅಂಗಡಿ ಮುಂಗಟ್ಟು, ಬಾರ್ ಆ್ಯಂಡ್ ರೆಸ್ಟೋರೆಂಟ್, ಸಂಘಸಂಸ್ಥೆಗಳು, ಕಚೇರಿಗಳು, ಸಾರ್ವಜನಿಕ ಪ್ರದೇಶಗಳು, ಆಟೋ ಸ್ಟಾಂಡ್‌ಗಳು, ದೇವಾಲಯಗಳು ಹೀಗೆ ಹತ್ತು ಹಲವಾರು ಕಡೆ ಬಾತ್ಮಿದಾರರನ್ನು ಹೆಚ್ಚಿಸಿಕೊಂಡಿದ್ದಾರೆ. ದಿನದ 24 ಗಂಟೆಯೂ ಗಸ್ತು ನಡೆಸುತ್ತಿರುವ ಪೊಲೀಸ್ ಪಡೆ ಮೈದಾನದ ಸುತ್ತಮುತ್ತ ಜನ ಗುಂಪುಗೂಡದಂತೆ ನೋಡಿಕೊಂಡಿದ್ದಾರೆ. ಸ್ಥಳೀಯ ಮತ್ತು ಸುತ್ತಮುತ್ತಲಿನ ಪೊಲೀಸ್ ಠಾಣೆಗಳ ರೌಡಿ ಶೀಟರ್‌ಗಳ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ಇದನ್ನೂ ಓದಿ: ಈದ್ಗಾ ಮೈದಾನ ಇನ್ನು `ಸರ್ವೇ ನಂಬರ್‌ 40-ಗುಟ್ಟಹಳ್ಳಿʼ: ಸಚಿವ ಆರ್‌. ಅಶೋಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading

ಕ್ರೀಡೆ

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

KL Rahul: ಲಕ್ನೊ ಸೂಪರ್ ಜೈಂಟ್ಸ್​ ತಂಡ ತನ್ನ ಎಕ್ಸ್​ ಪೇಜ್​ನಲ್ಲಿ ನಮ್ಮ ನಂಬರ್ 1 ಯಾವಾಗಲೂ ನಂಬರ್​ ಒನ್​. ಶೂನ್ಯದಿಂದಲೂ ಅವರು ನಂಬರ್ ಒನ್​ ಎಂದು ಬರೆದುಕೊಂಡಿದೆ. ಕೆ. ಎಲ್​ ರಾಹುಲ್ ಅವರ ಜೆರ್ಸಿ ಸಂಖ್ಯೆ 1. ಹೀಗಾಗಿ ಅವರನ್ನು ನಂಬರ್​ ಒನ್​ ಎಂದು ಫ್ರಾಂಚೈಸಿ ನಂಬರ್​ 1 ಎಂದ ಕರೆದಿದೆ.

VISTARANEWS.COM


on

KL Rahul
Koo

ಬೆಂಗಳೂರು: ಮುಂಬರುವ ಟಿ20 ವಿಶ್ವ ಕಪ್​ಗೆ ಭಾರತ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಆದರೆ ಈ ತಂಡದಲ್ಲಿ ಕನ್ನಡಿಗ ಕೆ. ಎಲ್​ ರಾಹುಲ್ ಗೆ (KL Rahul) ಅವಕಾಶ ನೀಡಿಲ್ಲ. ಉತ್ತಮ ಫಾರ್ಮ್​ನಲ್ಲಿರುವ ಹಾಗೂ ವಿದೇಶಿ ನೆಲಗಳಲ್ಲಿ ಗರಿಷ್ಠ ಪ್ರದರ್ಶ ನೀಡುವ ಅವರನ್ನು ಕೈ ಬಿಟ್ಟಿರುವುದಕ್ಕೆ ಕ್ರಿಕೆಟ್​ ವಲಯದಲ್ಲಿ ಅಸಮಾಧಾನ ವ್ಯಕ್ತಗೊಂಡಿದೆ. ಪ್ರಸ್ತುತ ಐಪಿಎಲ್​ ಆಡುತ್ತಿರುವ ಅವರು ಲಕ್ನೊ ಸೂಪರ್ ಜೈಂಟ್ಸ್​ ತಂಡ ದ ನಾಯಕರಾಗಿದ್ದಾರೆ. 2024ರ ಟೂರ್ನಿಯಲ್ಲಿ ಅವರು ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. ಹೀಗಾಗಿ ಈ ಫ್ರಾಂಚೈಸಿಗೂ ರಾಹುಲ್ ಅವರನ್ನು ಬಿಟ್ಟಿರುವ ಬಗ್ಗೆ ಹೆಚ್ಚಿನ ಬೇಸರವಿದೆ. ಹೀಗಾಗಿ ಸರಿಯಾಗಿ ಟಾಂಗ್ ಕೊಟ್ಟಿದೆ.

ಲಕ್ನೊ ಸೂಪರ್ ಜೈಂಟ್ಸ್​ ತಂಡ ತನ್ನ ಎಕ್ಸ್​ ಪೇಜ್​ನಲ್ಲಿ ನಮ್ಮ ನಂಬರ್ 1 ಯಾವಾಗಲೂ ನಂಬರ್​ ಒನ್​. ಶೂನ್ಯದಿಂದಲೂ ಅವರು ನಂಬರ್ ಒನ್​ ಎಂದು ಬರೆದುಕೊಂಡಿದೆ. ಕೆ. ಎಲ್​ ರಾಹುಲ್ ಅವರ ಜೆರ್ಸಿ ಸಂಖ್ಯೆ 1. ಹೀಗಾಗಿ ಅವರನ್ನು ನಂಬರ್​ ಒನ್​ ಎಂದು ಫ್ರಾಂಚೈಸಿ ನಂಬರ್​ 1 ಎಂದ ಕರೆದಿದೆ.

ತಂಡದಲ್ಲಿ ಯಾರ್ಯಾರಿಗೆ ಸಿಕ್ಕಿದೆ ಅವಕಾಶ

ಕೆಲವು ದಿನಗಳಿಂದ ಕ್ರಿಕೆಟ್​ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದ ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾ(Team India) ಪ್ರಕಟ ಯಾವಾಗ? ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮಂಗಳವಾರ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್​ ಅಗರ್ಕರ್(Ajit Agarkar)​ ಅವರು ಭಾರತ ತಂಡವನ್ನು ಪ್ರಕಟಿಸುವ ಮೂಲಕ ಸ್ಪಷ್ಟ ಉತ್ತರ ನೀಡಿದ್ದಾರೆ. ತಂಡವನ್ನು ರೋಹಿತ್​ ಶರ್ಮ ಮುನ್ನಡೆಸಲಿದ್ದಾರೆ. ಹಾರ್ದಿಕ್​ ಪಾಂಡ್ಯ ಉಪನಾಯನಾಗಿದ್ದಾರೆ. ಅಚ್ಚರಿ ಎಂದರೆ ಕನ್ನಡಿಗ ಕೆ.ಎಲ್​ ರಾಹುಲ್​ ಅವರಿಗೆ ಅವಕಾಶ ಸಿಕ್ಕಿಲ್ಲ.

ಇದನ್ನೂ ಓದಿ: Virat kohli : ಕಾಮೆಂಟ್ರಿ ಬಾಕ್ಸ್​​ನಲ್ಲಿ ಕುಳಿತು ವಿಮರ್ಶೆ ಮಾಡುವುದು ಸುಲಭ; ಕೊಹ್ಲಿ ತಿರುಗೇಟು ಕೊಟ್ಟಿದ್ದು ಯಾರಿಗೆ?

ವಿಕೆಟ್ ಕೀಪರ್ ಆಯ್ಕೆ ಹಾಗೂ ಆಲ್ ರೌಂಡರ್ ಕುರಿತು ಹೆಚ್ಚಿನ ಚರ್ಚೆ ನಡೆದಿತ್ತು. ಇದೀಗ ಪಂತ್​ ಮತ್ತು ಸಂಜು ಸ್ಯಾಮ್ಸನ್​ ವಿಕೆಟ್​ ಕೀಪರ್​ ಆಗಿ ಆಯ್ಕೆಯಾಗಿದ್ದಾರೆ. ಆಲ್​ರೌಂಡರ್​ ಕೋಟದಲ್ಲಿ ಶಿವಂ ದುಬೆ, ಅಕ್ಷರ್​ ಪಟೇಲ್​, ರವೀಂದ್ರ ಜಡೇಜಾ ಮತ್ತು ಹಾರ್ದಿಕ್​ ಪಾಂಡ್ಯ ಕಾಣಿಸಿಕೊಂಡಿದ್ದಾರೆ. ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಅವಕಾಶ ಸಿಕ್ಕಿದೆ. ರಿಷಭ್​ ಪಂತ್​ ಅವರು ಮೊದಲ ಆಯ್ಕೆಯ ವಿಕೆಟ್​ ಕೀಪರ್​ ಆಗಿದ್ದರೆ, 2ನೇ ಕೀಪರ್ ಆಗಿ ಸಂಜು ಆಯ್ಕೆಯಾಗಿದ್ದಾರೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿತ್ತು. ಹೀಗಾಗಿ ಏಪ್ರಿಲ್​ 30ರಂದು ಹಾಲಿ ಚಾಂಪಿಯನ್​ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಭಾರತ ತನ್ನ ತಂಡವನ್ನು ಪ್ರಕಟಿಸಿತು. ಸೋಮವಾರ ನ್ಯೂಜಿಲ್ಯಾಂಡ್​ ತನ್ನ ತಂಡವನ್ನು ಪ್ರಕಟಿಸಿತ್ತು. ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Continue Reading

ಪ್ರಮುಖ ಸುದ್ದಿ

Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

Manish Sisodia: ಜಾಮೀನು ಅರ್ಜಿಯನ್ನು ವಿರೋಧಿಸಿದ ತನಿಖಾ ಸಂಸ್ಥೆ, “ಸಿಸೋಡಿಯಾ ಹಗರಣದ ಕಿಂಗ್​​ಪಿನ್. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ನೀಡಿದರೆ, ಅವರು ಸಾಕ್ಷ್ಯಗಳನ್ನು ತಿರುಚಬಹುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ವಾದ ಮಾಡಿತ್ತು.

VISTARANEWS.COM


on

Manish Sisodia
Koo

ನವದೆಹಲಿ: ಪ್ರಸ್ತುತ ರದ್ದುಪಡಿಸಲಾದ ದೆಹಲಿ ಮದ್ಯ ಅಬಕಾರಿ ನೀತಿ 2021-22 ರ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ದಾಖಲಿಸಿದ ಪ್ರಕರಣಗಳಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನುದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 30 ರಂದು ವಜಾಗೊಳಿಸಿದೆ. ಕೇಂದ್ರ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ಪ್ರಕರಣಗಳಲ್ಲಿ ಸಿಸೋಡಿಯಾ ಜಾಮೀನು ಕೋರಿದ್ದರು. ಹೀಗಾಗಿ ಅವರು ಜೈಲಿನಲ್ಲೇ ಉಳಿಯುವಂತಾಗಿದೆ. ಅರವಿಂದ್ ಕೇಜ್ರಿವಾಲ್ ಕೂಡ ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಹೀಗಾಗಿ ಇಬ್ಬರೂ ಇನ್ನಷ್ಟು ದಿನ ಜೈಲಿನಲ್ಲೇ ದಿನ ಕಳೆಯುಂತಾಗಿದೆ.

ಈ ಹಿಂದೆ ಕೆಳ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದ್ದವು. ಜಾಮೀನು ಅರ್ಜಿಯನ್ನು ವಿರೋಧಿಸಿದ ತನಿಖಾ ಸಂಸ್ಥೆ, “ಸಿಸೋಡಿಯಾ ಹಗರಣದ ಕಿಂಗ್​​ಪಿನ್. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ನೀಡಿದರೆ, ಅವರು ಸಾಕ್ಷ್ಯಗಳನ್ನು ತಿರುಚಬಹುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ವಾದ ಮಾಡಿತ್ತು.

ಸಿಸೋಡಿಯಾ ಫೆಬ್ರವರಿ 26, 2023 ರಿಂದ ಬಂಧನದಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸಿಬಿಐ ಮತ್ತು ಇಡಿ ಎರಡೂ ತನಿಖೆ ನಡೆಸುತ್ತಿವೆ. ಲಂಚಕ್ಕಾಗಿ ದೆಹಲಿ ಸರ್ಕಾರಿ ಅಧಿಕಾರಿಗಳು ಕೆಲವು ವ್ಯಾಪಾರಿಗಳಿಗೆ ಮದ್ಯದ ಪರವಾನಗಿ ನೀಡಿರುವ ಪ್ರಕರಣದಲ್ಲಿ ಸಿಸೊಡಿಯಾ ಶಾಮೀಲಾಗಿದ್ದಾರೆ ಎಂಬ ಆರೋಪಗಳಿವೆ. ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಅಬಕಾರಿ ನೀತಿಯನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

ವಿಶೇಷವೆಂದರೆ, ವಿಚಾರಣಾ ನ್ಯಾಯಾಲಯವು ಸಿಸೋಡಿಯಾ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು ಇದು ಎರಡನೇ ಬಾರಿ. ಸಿಬಿಐ ಪ್ರಕರಣದಲ್ಲಿ ಅವರ ಮೊದಲ ಜಾಮೀನು ಅರ್ಜಿಯನ್ನು ಮಾರ್ಚ್ 31, 2023 ರಂದು ತಿರಸ್ಕರಿಸಲಾಗಿತ್ತು. ಏಪ್ರಿಲ್ 28 ರಂದು ವಿಚಾರಣಾ ನ್ಯಾಯಾಲಯವು ಇಡಿ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿತ್ತು.

ವಿಚಾರಣೆಗೆ ವೇಗ ಕೊಡುವಂತೆ ಸುಪ್ರೀಂ ಕೋರ್ಟ್​ ಹೇಳಿತ್ತು

ಬಳಿಕ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅದು ಅಕ್ಟೋಬರ್ 30, 2023 ರಂದು ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಆದಾಗ್ಯೂ, ವಿಚಾರಣೆಯು ನಿಧಾನಗತಿಯಲ್ಲಿ ಮುಂದುವರಿದರೆ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಆ ಸಮಯದಲ್ಲಿ ಹೇಳಿತ್ತು.

ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ, ಸಿಸೋಡಿಯಾ ಅವರು ಈಗ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ ಎಂದು ಸಿಸಿಡಿಯಾ ಪರ ವಕೀಲರು ವಾದ ಮಾಡಿದ್ದರು.

ನಾವು ಫೆಬ್ರವರಿಯಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಪ್ರಕರಣವನ್ನು ನಾಲ್ಕು ಬಾರಿ ಮುಂದೂಡಲಾಗಿದೆ. ಅರ್ಜಿದಾರರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ ಎಂದು ವಕೀಲ ವಿವೇಕ್ ಜೈನ್ ವಾದಿಸಿದ್ದಾರೆ. ಏತನ್ಮಧ್ಯೆ, ವಿಚಾರಣೆಯ ವಿಳಂಬವು ಸಿಸೋಡಿಯಾ ಮತ್ತು ಇತರ ಸಹ ಆರೋಪಿಗಳಿಂದಾಗಿದೆಯೇ ಹೊರತು ತಮ್ಮಿಂದ ಅಲ್ಲ ಸಿಬಿಐ ಸಮರ್ಥಿಸಿಕೊಂಡಿವೆ.

ಕೆಲವು ವ್ಯಾಪಾರಿಗಳಿಗೆ ಅನುಕೂಲಕರವಾದ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಸಿಸೋಡಿಯಾ ಪ್ರಮುಖ ವ್ಯಕ್ತಿಯಾಗಿದ್ದರು. ಪ್ರತಿಯಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಕಿಕ್​ಬ್ಯಾಕ್​ ಪಡೆದಿದೆ ಎಂದು ಎರಡೂ ಏಜೆನ್ಸಿಗಳು ವಾದಿಸಿವೆ. ಈ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕ ಸಂಜಯ್ ಸಿಂಗ್, ಎಎಪಿ ಸಂವಹನ ಮುಖ್ಯಸ್ಥ ವಿಜಯ್ ನಾಯರ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್​​ಎಸ್) ನಾಯಕಿ ಕೆ ಕವಿತಾ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್ ಮತ್ತು ಕವಿತಾ ಪ್ರಸ್ತುತ ಜೈಲಿನಲ್ಲಿದ್ದರೆ, ಸಂಜಯ್ ಸಿಂಗ್ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

Continue Reading

Lok Sabha Election 2024

Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

Lok Sabha Election 2024: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಎಲ್ಲ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದು, ಕಾಂಗ್ರೆಸ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಮೈತ್ರಿ ಒಕ್ಕೂಟದ ತುಷ್ಟೀಕರಣ ನೀತಿ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರೆ ನೀಡಿದ್ದಾರೆ. “ಈ ಚುನಾವಣೆ ನಮ್ಮ ವರ್ತಮಾನ ಮತ್ತು ಉಜ್ವಲ ಭವಿಷ್ಯವನ್ನು ನಿರ್ಮಿಸಲು ಎದುರಾಗಿರುವ ಸುವರ್ಣಾವಕಾಶ. ಐದಾರು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕುಟುಂಬ ಮತ್ತು ಕುಟುಂಬದ ಹಿರಿಯರು ಅನುಭವಿಸಿದ ಕಷ್ಟಗಳಿಂದ ಪರಿಹಾರ ಪಡೆಯಲು ಈ ಚುನಾವಣೆ ಒಂದು ಪ್ರಮುಖ ಅಸ್ತ್ರ ಎನಿಸಿಕೊಂಡಿದೆʼʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಬಿಜೆಪಿಯ ಎಲ್ಲ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದು, ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಯಿಂದ ಮುಸ್ಲಿಮರಿಗೆ ಮೀಸಲಾತಿ ನೀಡುವ ಕಾರ್ಯಸೂಚಿ, ಪಿತ್ರಾರ್ಜಿತ ಆಸ್ತಿ ತೆರಿಗೆಯ ಪ್ರಸ್ತಾವ ಸೇರಿದಂತೆ ಕಾಂಗ್ರೆಸ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಒಕ್ಕೂಟಗಳ ಹಿಂಜರಿತ ರಾಜಕೀಯ ನೀತಿಯ ಬಗ್ಗೆ ಜನರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮತ್ತು ಗುಜರಾತ್‌ನ ಪೋರ್‌ ಬಂದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನ್ಸುಖ್ ಮಾಂಡವಿಯಾ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ಬರೆದಿರುವ ಪತ್ರವನ್ನು ಹಂಚಿಕೊಂಡು ಪ್ರಧಾನಿ ಅವರ ಪ್ರೇರಕ ಮಾತುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಈ ಸ್ಫೂರ್ತಿದಾಯಕ ಮಾತುಗಳಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. 10 ವರ್ಷಗಳಲ್ಲಿ ನೀವು ಮಾಡಿದ ಕೆಲಸಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತಂದಿವೆ. ನಾವೆಲ್ಲರೂ ನಿಮ್ಮ ಸಲಹೆಯಂತೆ ಕಾರ್ಯ ನಿರ್ವಹಿಸುತ್ತೇವೆʼʼ ಎಂದು ಬರೆದುಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?

ʼʼಇದು ಸಾಮಾನ್ಯ ಚುನಾವಣೆಯಲ್ಲ ಮತ್ತು ಬಿಜೆಪಿಗೆ ನೀಡುವ ಪ್ರತಿಯೊಂದು ಮತವು ಬಲವಾದ ಸರ್ಕಾರವನ್ನು ರಚಿಸುವ ಮತ್ತು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸುವ ಪ್ರಯತ್ನಗಳನ್ನು ವೇಗಗೊಳಿಸುತ್ತದೆʼʼ ಎಂದು ಪತ್ರದಲ್ಲಿ ಮೋದಿ ಹೇಳಿದ್ದಾರೆ. “ಈ ಚುನಾವಣೆ ನಮ್ಮ ವರ್ತಮಾನ ಮತ್ತು ಉಜ್ವಲ ಭವಿಷ್ಯವನ್ನು ನಿರ್ಮಿಸಲು ಎದುರಾಗಿರುವ ಸುವರ್ಣಾವಕಾಶ. ಐದಾರು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕುಟುಂಬ ಮತ್ತು ಕುಟುಂಬದ ಹಿರಿಯರು ಅನುಭವಿಸಿದ ಕಷ್ಟಗಳಿಂದ ಪರಿಹಾರ ಪಡೆಯಲು ಈ ಚುನಾವಣೆ ಒಂದು ಪ್ರಮುಖ ಅಸ್ತ್ರ ಎನಿಸಿಕೊಂಡಿದೆ. ಕಳೆದ ದಶಕದಲ್ಲಿ ಸಮಾಜದ ಪ್ರತಿಯೊಂದು ವರ್ಗದವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಮೂಲಕ ದೇಶವಾಸಿಗಳ ಅನೇಕ ತೊಂದರೆಗಳನ್ನು ತೊಡೆದುಹಾಕಲಾಗಿದೆʼʼ ಎಂದು ಬರೆದಿದ್ದಾರೆ.

“ಇದಲ್ಲದೆ ಕಾಂಗ್ರೆಸ್ ಮತ್ತು ಅದರ ʼಇಂಡಿಯಾʼ ಮೈತ್ರಿಕೂಟದ ವಿಭಜಕ ಮತ್ತು ತಾರತಮ್ಯದ ಉದ್ದೇಶಗಳ ವಿರುದ್ಧ ಮತದಾರರಿಗೆ ಮಾಹಿತಿ ನೀಡುವಂತೆ ನಾನು ಕೇಳಿಕೊಳ್ಳುತ್ತೇನೆ. ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಾಂವಿಧಾನಿಕವಾಗಿದ್ದರೂ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ಮೂಲಕ ʼಇಂಡಿಯಾʼ ಒಕ್ಕೂಟ ತಮ್ಮ ಮತ ಬ್ಯಾಂಕ್‌ ಆದ ಮುಸ್ಲಿಮರಿಗೆ ಮೀಸಲಾತಿ ನೀಡಲು ಮುಂದಾಗಿದೆ. ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಸಿದುಕೊಂಡು ಇವರಿಗೆ ನೀಡಲು ಮುಂದಾಗಿದೆ. ಜತೆಗೆ ಕಾಂಗ್ರೆಸ್‌ ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಪ್ರಸ್ತಾವಿಸಿದೆ. ಇದನ್ನು ತಡೆಯಲು ದೇಶವು ಒಂದಾಗಬೇಕಾಗಿದೆʼʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಪತ್ರವು ಆರೋಗ್ಯ ಸಲಹೆಯನ್ನೂ ಒಳಗೊಂಡಿದೆ. ʼʼಬೇಸಿಗೆಯ ಶಾಖವು ಎಲ್ಲರಿಗೂ ಸಮಸ್ಯೆಗಳನ್ನು ತಂದೊಡ್ಡಿದೆ. ಆದ್ದರಿಂದ ಮತದಾರರು ಬೆಳಗ್ಗೆಯೇ ಮತಗಟ್ಟೆಗೆ ತೆರಳಿ ಬಿಸಿಲಿನ ತಾಪ ಆರಂಭವಾಗುವ ಮುನ್ನ ಮತ ಚಲಾಯಿಸಬೇಕುʼʼ ಎಂದು ಮೋದಿ ಸಲಹೆ ನೀಡಿದ್ದಾರೆ. ಎಲ್ಲ ಪತ್ರಗಳು ವೈಯಕ್ತಿಕ ಉಲ್ಲೇಖವನ್ನೂ ಹೊಂದಿರುವುದು ವಿಶೇಷ. ಉದಾಹರಣೆಗೆ, ಮಾಂಡವಿಯಾ ಅವರನ್ನು ಉದ್ದೇಶಿಸಿ “ಸಣ್ಣ ಉದ್ಯಮಿಗಳಿಗಾಗಿ ಪಿಎಂ ಭಾರತೀಯ ಜನೌಷಧಿ ಕೇಂದ್ರವನ್ನು (PMBJAK) ಸ್ಥಾಪಿಸಲು ಮತ್ತು ಮೇಲ್ದರ್ಜೆಗೇರಿಸಲು ನೀವು ಮಾಡಿದ ಕೆಲಸ ಗಮನಾರ್ಹʼʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಅತ್ಯಂತ ಚಿಕ್ಕ ವಯಸ್ಸಿನಲ್ಲಿ, ನೀವು ಭಾರತೀಯ ಜನತಾ ಯುವ ಮೋರ್ಚಾದ ನಾಯಕರಾದಿರಿ ಮತ್ತು ವಿವಿಧ ಸ್ಥಾನಗಳಲ್ಲಿ ಸಂಘಟನೆಗಾಗಿ ಕೆಲಸ ಮಾಡಿದ್ದೀರಿ. ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದ ನೀವು ನಿಮ್ಮ ಮತದಾರರೊಂದಿಗೆ ಸಂಪರ್ಕ ಹೊಂದಿದ್ದೀರಿ. ನೀವು ಕೆಲವು ವರ್ಷಗಳ ಹಿಂದೆ ನಿಮ್ಮ ಡಾಕ್ಟರೇಟ್ ಪೂರ್ಣಗೊಳಿಸಿದ್ದೀರಿ, ಇದು ಅನೇಕ ಜನರಿಗೆ ಸ್ಫೂರ್ತಿಯ ಮೂಲವಾಗಿದೆ” ಎಂದು ಪತ್ರದಲ್ಲಿ ಕೇಂದ್ರ ಸಚಿವರನ್ನು ಶ್ಲಾಘಿಸಲಾಗಿದೆ.

ಇದನ್ನೂ ಓದಿ: PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

Continue Reading
Advertisement
V Srinivas Prasad
ಪ್ರಮುಖ ಸುದ್ದಿ6 mins ago

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

KL Rahul
ಕ್ರೀಡೆ14 mins ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Actress Summer Fashion
ಫ್ಯಾಷನ್14 mins ago

Actress Summer Fashion: ಬಾಲಿವುಡ್‌ನವರನ್ನು ಮೀರಿಸಿದ ನಟಿ ಶಿಲ್ಪಾ ಮಂಜುನಾಥ್‌ ಪೂಲ್‌ಸೈಡ್‌ ಹಾಟ್‌ ಲುಕ್‌!

Hassan Pen Drive Case
ಸಿನಿಮಾ17 mins ago

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Physical Abuse
ಕ್ರೈಂ37 mins ago

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

Russia-Ukraine War
ರಷ್ಯಾ-ಉಕ್ರೇನ್‌ ಕದನ37 mins ago

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Leg Swelling
ಆರೋಗ್ಯ44 mins ago

Leg Swelling: ಪ್ರಯಾಣಿಸುವಾಗ ನಮ್ಮ ಕಾಲುಗಳು ಊದಿಕೊಳ್ಳುವುದೇಕೆ?

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
ರಾಜಕೀಯ48 mins ago

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Manish Sisodia
ಪ್ರಮುಖ ಸುದ್ದಿ55 mins ago

Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

Mohammed Shami
ಕ್ರೀಡೆ55 mins ago

Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ13 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌