Power Cut: ಆ.19ರಂದು ಬೆಂಗಳೂರಿನ ಬಹುತೇಕ ಕಡೆ ಪವರ್‌ ಕಟ್; ಎಲ್ಲೆಲ್ಲಿ ವ್ಯತ್ಯಯವಾಗಲಿದೆ? - Vistara News

ನೋಟಿಸ್ ಬೋರ್ಡ

Power Cut: ಆ.19ರಂದು ಬೆಂಗಳೂರಿನ ಬಹುತೇಕ ಕಡೆ ಪವರ್‌ ಕಟ್; ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

Power Cut: ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ವತಿಯಿಂದ ವಿದ್ಯುತ್‌ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಆ.19ರಂದು ಬೆಂಗಳೂರಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

VISTARANEWS.COM


on

Overhead power line
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ವಿವಿಧೆಡೆ ಆಗಸ್ಟ್‌ 19ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ ಉಂಟಾಗಲಿದೆ. ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ವತಿಯಿಂದ ವಿದ್ಯುತ್‌ ಮಾರ್ಗಗಳ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ವಿದ್ಯುತ್ ಕಡಿತವಾಗಲಿದೆ (Power Cut) ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ.

ಯಾವ ಪ್ರದೇಶಗಳಲ್ಲಿ ಪವರ್‌ ಕಟ್‌ ಆಗಲಿದೆ?

ನಗರದ ದುರ್ಗಾಂಬಿಕಾ ದೇವಸ್ಥಾನ, ನಿಟುವಳ್ಳಿ, ರಾಷ್ಟ್ರೋತ್ಥಾನ ಶಾಲೆ, ಮಣಿಕಂಠ ಸರ್ಕಲ್, ಶ್ರೀ ರಾಮ್ ಬಡಾವಣೆ, ಕರಿಯಮ್ಮ ದೇವಸ್ಥಾನ, ಜಯನಗರ ಎ ಮತ್ತು ಬಿ ಬ್ಲಾಕ್, ಭಗೀರಥ ಸರ್ಕಲ್, ಜಯನಗರ ಚರ್ಚ್, ಎಸ್ಪಿಎಸ್ ನಗರ, ಬಿಎನ್ ಲೇಔಟ್ ಫಸ್ಟ್, ಬಾಷಾ ನಗರ 1-7ನೇ ಕ್ರಾಸ್, ರಾಜೌಲ್ಲಾ ಮುಸ್ತಫಾ ನಗರ, ಬಿಡಿ ಲಾಯೌಟ್ , ಎಸ್‌ಎಸ್‌ಎಂ ನಗರ, ರಾಜ್‌ಕುಮಾರ್ ಲೇಔಟ್, ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ದೊಡ್ಡ ಪೇಟೆ, ವಿಜಯಲಕ್ಷ್ಮಿ ರಸ್ತೆ, ಚೌಕಿಪೇಟೆ, ಬಸವರಾಜ ಪೇಟೆ, ಹಗೇಡಿಬ್ಬ ವೃತ್ತ, ಅಂಬೇಡ್ಕರ್ ವೃತ್ತ, ಚಿಟ್ಟನಹಳ್ಳಿ, ಕಕ್ಕರಗೊಲ್ಲ, ಅವರಗೊಲ್ಲ, ಶ್ಯಾನೇಶ್ವರಿ, ವಿಜಯನಗರ, ವಿಜಯನಗರ, ಶಿವಾಲಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ | Cost of Living: ಭಾರತದಲ್ಲಿ ಬದುಕೋಕೆ ದುಬಾರಿ ನಗರವಿದು! ಬೆಂಗಳೂರಿನ ರ‍್ಯಾಂಕ್‌ ಎಷ್ಟಿದೆ ನೋಡಿ!

ಹಾಗೆಯೇ ವಿಜಯನಗರ, ಯರಗುಂಟಾ, ಅಮೃತನಗರ, ನೀಲನಹಳ್ಳಿ, ನಂದಿಗುಡಿ ವ್ಯಾಪ್ತಿ, ಬಾನುವಳ್ಳಿ ವ್ಯಾಪ್ತಿ, ಕೊಡಗವಳ್ಳಿ, ಚಿಕ್ಕಪುರ, ಹಿರೇಗುಂಟನೂರು, ಭೀಮಸಮುದ್ರ, ವಡ್ಡರಪಾಳ್ಯ, ಭೀಮೇಶ್ವರ ದೇವಸ್ಥಾನ, ತುರೆಬೈಲು ಕ್ಯಾಂಪ್, ಸೀಬರ, ಬೆರವರ, ಎನ್.ಬಳ್ಳೆಕಟ್ಟೆ, ಹೊಗೆರಳ್ಳಿ, ಹೊಗೆರಳ್ಳಿ, ಹೊಗೆರಹಳ್ಳಿ ಹೆಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಭದ್ರಘಟ್ಟ, ಅಡವಿಗೊಲ್ಲರಹಳ್ಳಿ, ಭರಮಸಾಗರ, ಪಾಮೇರಹಳ್ಳಿ, ಕೋಗುಂಡೆ, ಎಸ್‌ಕೆಎಂ ಇಂಡಸ್ಟ್ರಿಯಲ್ ಫೀಡರ್ ಮತ್ತು ಕೋಡಿಹಳ್ಳಿ, ಕೊಣನೂರು, ಹಳವುದರ, ಓಬಳಾಪುರ, ಅಳಗವಾಡಿ, ಪಾಲಕಿಹಳ್ಳಿ, ಮದಕರಿಪುರ, ಸಿರಿಗೆರೆ, ಚಿಕ್ಕೇನಹಳ್ಳಿ. ಮದಕರಿಪುರ, ಸಿರಿಗೆರೆ, ಚಿಕ್ಕೇನಹತ್ತನಹಳ್ಳಿ, ಆಲಂಗಹತ್ತನಹಳ್ಳಿ ಜಾಪುರ, ಮರಡಿ ಆಂಜನೇಯ.

ಚಿಕ್ಕಲಘಟ್ಟ ನಗರ, ಕೆಳಗೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಗಟ್ಟ, ಜಿ.ಆರ್. ಹಳ್ಳಿ, ವಿದ್ಯಾನಗರ, ಸಿ.ಜಿ. ಹಳ್ಳಿ, ಜೆಸಿಆರ್ ಬಡವಣೆ, ಚಂದ್ರವಳ್ಳಿ, ಪಿ.ಕೆ. ಹಳ್ಳಿ, ಗಿರಣಿ ಏರಿಯಾ, ಅನ್ನೇಹಾಳ್, ಹುಲ್ಲೂರು, ಪಂಡರಹಳ್ಳಿ, ಜಾನಕೊಂಡ, ಸಿದ್ದಾಪುರ, ಮಹದೇವನಕಟ್ಟೆ, ಸೊಪ್ಪರಕಟ್ಟೆ, ಮಹದೇವನಕಟ್ಟೆ., ಕುರುಬರಹಳ್ಳಿ, ಬಿಎನ್ ಹಳ್ಳಿ, ಸಿಂಗಾಪುರ, ಕಕ್ಕರು, ಮಾದನಾಯಕನಹಳ್ಳಿ, ಸಿ.ಜಿ. ಹಳ್ಳಿ, ಯಲವರ್ತಿ, ಹೊಸಗೊಲ್ಲರಹಟ್ಟಿ, ರಾಯನಹಳ್ಳಿ, ಸೂರನಹಳ್ಳಿ, ಇನಹಳ್ಳಿ, ಚಿಕ್ಕನಕಟ್ಟೆ, ಹಿರೇಕಂದವಾಡಿ, ಗುಂಜಿಗನೂರು, ಬಿ.ದುರ್ಗ, ಕಡೂರು, ಕೋಟೆಹಾಳ್, ಚಿಕ್ಕಮಜ್ಜನಕಟ್ಟೆ, ಚಿಕ್ಕಮಜ್ಜನಹಟ್ಟಿ, ಐಮಂಗಲ, ಬರಂಪುರ, ಮರಡಿದೇವಿಕೆರೆ, ಕೊವೇರಹಟ್ಟಿ.

ಕಲ್ವತ್ತಿ, ಮರಡಿಹಳ್ಳಿ, ಬುರುಜಿನರೊಪ್ಪ, ನುಲೇನೂರು, ಯು.ಪಿ.ಹಳ್ಳಿ, ನೆಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಗೊಲ್ಲರಹಳ್ಳಿ, ಜಿ.ಹಳ್ಳಿ, ತೇಕಲವಟ್ಟಿ, ಹುಲಿಕೆರೆ, ಕೊಳಲ್, ಎಮ್ಮಿಗನೂರು, ಮದ್ದೇರು, ಶಿವಗಂಗಾ, ಹೊಸಕಲ್ಲಹಳ್ಳಿ, ರಾಮಾಡಿಕಲ್ಲಹಳ್ಳಿ, ರಾಮಾಡಿಕಲ್ಲಹಳ್ಳಿ, ರಾಮಾಡಿಕಲ್ಲಹಳ್ಳಿ, ಚನ್ನಪಟ್ಟಣ, ಆದನೂರು, ಅರೇನಹಳ್ಳಿ, ಅಪರಸನಹಳ್ಳಿ, ಹೊಳಲ್ಕೆರೆ ಟೌನ್, ಮದೇರು, ಬೊಮ್ಮನಕಟ್ಟೆ, ಚಿತ್ರಹಳ್ಳಿ, ಮಲ್ಲಾಡಿಹಳ್ಳಿ, ಗುಂಡಿಮಡು, ಮಾಳೇನಹಳ್ಳಿ, ಪುಣಜೂರು, ಲೋಕದಹಾಳು, ಚೀರನಹಳ್ಳಿ, ರಾಮಗಿರಿ ರಸ್ತೆ, ಎನ್ ಜಿ ಹಳ್ಳಿ, ಗುಂಡೇರಿ, ತಾಳಿಕಟ್ಟೆ, ಗೌಡರಹಳ್ಳಿ, ಕಂದಮ್ಮನಹಳ್ಳಿ, ಗುಂಡೇರಿ, ತಾಳಿಕಟ್ಟೆ, ಗೌಡಿಹಳ್ಳಿ ಲೆನೂರ್, ಕಾವಲು, ಹನುಮಹಳ್ಳಿ, ಮುದ್ದಾಪುರ.

ರಂಗಾಪುರ, ಬೊಮ್ಮಕ್ಕನಹಳ್ಳಿ, ಕುಣಬೇವು, ಆವಲೇನಹಳ್ಳಿ, ದೊಡ್ಡಘಟ್ಟ, ತುರುವನೂರು, ಕರಿಯಮ್ಮನಹಟ್ಟಿ, ಕೋಟೆಹಟ್ಟಿ, ಹುಣಸೇಕಟ್ಟೆ, ಪೆಲಾರಹಟ್ಟಿ, ಜೆ.ಎನ್.ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆ.ಸಿ.ಹಳ್ಳಿ, ಎಚ್.ಎಂ.ಹೊತ್ತಲ ಸ್ಥಳ, ಗೌಡಗೆರೆ ಆವರಿಸಿ, ಧುಮಿ, ಕುನಗಾಲಿ, ಹೊಲೆಮಾಲಾಲಿ, ಅಗ್ರಹಾರ, ಯಲಾಪುರ, ಸಾಗರನಹಳ್ಳಿ, ಎಂಎಸ್ ಹಳ್ಳಿ, ಹೇಮಾವತಿ, ಬಂಡಿಹಳ್ಳಿ, ಬೊಮ್ಮೇನಹಳ್ಳಿ, ತ್ಯಾಗತೂರು, ಬೆಣಚಿಗೆರೆ, ಹೆಸರಹಳ್ಳಿ, ಬೆಳವರ, ಮತ್ತಿಗಟ್ಟ, ಎಂಎನ್ ಕೋಟೆ, ರಾಂಪುರ, ನಿಟ್ಟೂರು, ಸೋಪನಹಳ್ಳಿ, ಸೋಮಲಾಪುರ ಗ್ರಾಮ ಪಂಚಾಯಿತಿ ಮಿತಿ, ಎಚ್.ನಾಗೇನಹಳ್ಳಿ, ಗೊಲ್ಲಾಪುರ, ಉತ್ತೇನಹಳ್ಳಿ ಟೌನ್, ಬಾಗೂರು, ಸಂಕಾಪುರ, ಗ್ಯಾರಹಳ್ಳಿ, ಮಾಯಸಂದ್ರ, ಜಡೆಯ, ಶೆಟ್ಟಿಗೌಡನಹಳ್ಳಿ, ಸಿಗ್ಗೆಹಳ್ಳಿ, ಎತ್ತಿಗಹಳ್ಳಿ, ಜಿಎಂ ಪಾಳ್ಯ, ರಾಮಯ್ಯ ರೆಡ್ಡಿ ಲೇಔಟ್, ವಿಜ್ಞಾನ ನಗರ, ಐಎಎಸ್ ಕಾಲೋನಿ.

ಎನ್ಎಸ್ ಪಾಳ್ಯ ಇಂಡಸ್ಟ್ರಿಯಲ್ ಏರಿಯಾ, ಜಾನ್ವಿ ಎನ್‌ಕ್ಷೇವ್, ಅನಂತ್ ಲಾಲ್‌ಕೌಟ್, ಅನಂತ್ ಲಾಕಹಳ್ಳಿ ಜಯನಗರ, 9 ನೇ ಬ್ಲಾಕ್ ಜಯನಗರ, ಈಸ್ಟ್ ಎಂಡ್ ಎಬಿಸಿಡಿ ರಸ್ತೆ, ಭೆಲ್ ಲೇಔಟ್, ಎಸ್‌ಆರ್‌ಕೆ ಗಾರ್ಡನ್ಸ್, ನಲ್ ಲೇಔಟ್, ತಿಲಕ್ ನಗರ, 9 ನೇ ಬ್ಲಾಕ್ ಜಯನಗರ, ಭಾಗಶಃ 4 ನೇ ಟಿ ಬ್ಲಾಕ್, ಶಾಂತಿ ಪಾರ್ಕ್ ಮತ್ತು ಅಪಾರ್ಟೆಂಟ್, ಜಯದೇವ ಆಸ್ಪತ್ರೆ, ರಾಂಕಾ ಕಾಲೋನಿ ರಸ್ತೆ, ಎನ್ ಎಸ್ ಪಾಳ್ಯ ಮುಖ್ಯ ರಸ್ತೆ, ಜಿಆರ್‌ಬಿ ಮುಖ್ಯ ರಸ್ತೆ, ಜೈನ್ ಟೆಂಪಲ್ ರಸ್ತೆ, ಬಿಟಿಎಂ 4 ನೇ ಹಂತದ ಕೆಲವು ಭಾಗಗಳು, ವೈಶ್ಯ ಬ್ಯಾಂಕ್ ಕಾಲೋನಿ, ಬಿಟಿಎಂ 2 ನೇ ಹಂತ, ಎಂಸಿಎಚ್‌ಎಸ್‌ ಲೇಔಟ್, ಬಿಸಿಎಚ್‌ಎಸ್ ಲೇಔಟ್, ಶಾಂತಿನಿಕೇತನ ಶಾಲೆ, ಮೈಕೋ ಲೇಔಟ್, 7 ನೇ ಮುಖ್ಯ, ಮಂತ್ರಿ ಅಪಾರ್ಟ್‌ಮೆಂಟ್, ಒರಾಕಲ್, ಐಬಿಎಂ ಮತ್ತು ಸ್ಪಾರ್, ಗುರಪ್ಪನಪಾಳ್ಯ, ರಸ್ತೆ, ಬಿಸ್ಮಿಲ್ಲಾ ನಗರ.

ಇದನ್ನೂ ಓದಿ | Gruha Lakshmi Scheme : ಸೆಪ್ಟೆಂಬರ್‌ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ ಹಣ? 2500 ಕೋಟಿ ಉಳಿಸಲು ಪ್ಲ್ಯಾನ್!

ಶೋಭಾ ಅಪಾರ್ಟ್‌ಮೆಂಟ್, ದಿವ್ಯಶ್ರೀ ಟವರ್ಸ್, ವೇಗಾ ಸಿಟಿ ಮಾಲ್, ಏರ್‌ಟೆಲ್ ಆಫೀಸ್, ಬನ್ನೇರುಘಟ್ಟ ಮುಖ್ಯ ರಸ್ತೆ, ಕೆಬ್ ಕಾಲೋನಿ, ಬಿಟಿಎಂ 1ನೇ ಹಂತ, ನಿಮ್ಹಾನ್ಸ್, ಕಿದ್ವಾಯಿ, ಜಯನಗರ 1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್ ಸೋಮೇಶ್ವರನಗರ, ವಿಲ್ಸನ್ ಗಾರ್ಡನ್, ಆಕ್ಸೆಂಚರ್, ಐಬಿಸಿ ಟೆಕ್ ಪಾರ್ಕ್, ಆರ್‌ವಿ ರಸ್ತೆ, ಎಂಎನ್‌ಕೆ ಪಾರ್ಕ್, ಗಾಂಧಿ ಬಜಾರ್, ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚೀಕಲಸಂದ್ರ, ಟಿಜಿ ಲೇಔಟ್, ಭುವನೇಶ್ವರಿನಗರ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ವಿಟ್ಲ ನಗರ, ವಿಕ್ರಂ ನಗರ, ಯೆಲ್ವೇನಹಳ್ಳಿ, ಬೆಲ್ ಕಾಲೋನಿ, ರಾಮಚಂದ್ರಾಪುರ, ಜಲಾಲಹಳ್ಳಿ ಚಾಮುಂಡೇಶ್ವರಿ ಲೇಔಟ್‌ನಲ್ಲಿ ವಿದ್ಯುತ್‌ ವ್ಯತ್ಯ ಉಂಟಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

SSLC 2024 Exam 2: ಎಸ್ಎಸ್ಎಲ್‌ಸಿ ಪರೀಕ್ಷೆ-2, ಜೂನ್‌ 14ರಿಂದ 22 ರವರೆಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಬಿಡುಗಡೆ ಮಾಡಿದೆ.

VISTARANEWS.COM


on

SSLC 2024 Exam 2
Koo

ಬೆಂಗಳೂರು: 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2ರ (SSLC 2024 Exam 2) ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.

2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2 ಅನ್ನು ಈ ಹಿಂದೆ ಜೂನ್‌ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಪರೀಕ್ಷೆ-2ನ್ನು ಮುಂದೂಡಿ, ಜೂನ್‌ 14ರಿಂದ 22 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

  • 14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.
  • 15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ
  • 19-06-2024 ಬುಧವಾರ: ಅರ್ಥ ಶಾಸ್ತ್ರ
  • 20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
  • 21-06-2024 ಶುಕ್ರವಾರ– ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ
  • 22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

Hebbal flyover: ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

VISTARANEWS.COM


on

Hebbal Flyover
Koo

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹೆಬ್ಬಾಳ ಮೇಲ್ಸೇತುವೆಯ ಕೆ.ಆರ್.ಪುರಂ ಅಪ್ ರ‍್ಯಾಂಪ್ ಮುಚ್ಚಲಾಗಿದ್ದು, ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಫ್ಲೈ ಓವರ್ (Hebbal flyover) ಮೇಲೆ ಸಂಚಾರ ನಿರ್ಬಂಧಿಸಲಾಗಿದೆ. ಏಪ್ರಿಲ್ 17ರಿಂದ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ನಿರ್ಬಂಧ ಇತ್ತು. ಈಗ ಎಲ್ಲಾ ರೀತಿಯ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಮಾರ್ಗದ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ.

ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲು ಬಿ.ಡಿ.ಎ ಕಾಮಗಾರಿ ಆರಂಭಿಸಿರುವುದರಿಂದ ಈಗಾಗಲೇ ಏ.17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇದೀಗ ಮೇ 14ರಿಂದ ಕೆ.ಆರ್.ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈ ಓವರ್‌ನ ಮುಖ್ಯ ಟ್ರ್ಯಾಕ್‌ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್‌ಗಳನ್ನು ತೆಗೆದುಹಾಕುತ್ತಿರುವುದರಿಂದ ರ‍್ಯಾಂಪ್ ಮತ್ತು ಮುಖ್ಯ ಟ್ರ್ಯಾಕ್‌ಗೆ ಸಂಪರ್ಕ ಕಡಿತವಾಗಲಿದೆ. ಹೀಗಾಗಿ ಯಾವುದೇ ರೀತಿಯ ವಾಹನ ಸಂಚಾರ ಸಾಧ್ಯವಿರದ ಹಿನ್ನೆಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಕೆಳಕಂಡ ಮಾರ್ಪಾಡುಗಳನ್ನು ಮಾಡಲಾಗಿದೆ.

ಇದನ್ನೂ ಓದಿ | Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 14ರಿಂದ ಹೆಬ್ಬಾಳ ಫ್ಲೈ ಓವರ್‌ನ ಕೆ.ಆರ್. ಪುರಂ ಅಪ್ ರ‍್ಯಾಂಪ್ ಮುಚ್ಚುತ್ತಿರುವುದರಿಂದ ಕೆ.ಆರ್‌.ಪುರಂ., ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಮೇಲ್ಸೇತುವೆ ಮೇಲೆ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

  1. ನಾಗವಾರ(ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್‌ನಲ್ಲಿ ಫ್ಲೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫ್ಲೈ ಓವರ್‌ನ ರ‍್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
  2. ಕೆ.ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಈ ಕೆಳಕಂಡ ರಸ್ತೆಗಳ ಮೂಲಕ ನಗರ ಪ್ರವೇಶಿಸಬಹುದಾಗಿದೆ.
    ಐ.ಒ.ಸಿ. ಮುಕುಂದ ಥಿಯೇಟರ್ ರಸ್ತೆ,
    ಲಿಂಗರಾಜಪುರ ಮೇಲ್ಸೇತುವೆ ಮಾರ್ಗ,
    ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ
  3. ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿ.ಕೆ.ವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
  4. ಕೆ.ಆ‌ರ್.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
  5. ಕೆ.ಆ‌ರ್.ಪುರಂ, ಹೆಣ್ಣೂರು, ಎಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.

Continue Reading

ಬೆಂಗಳೂರು

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Award Ceremony: 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಗೆ ಡಾ. ಬಿ. ಎಸ್. ಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

VISTARANEWS.COM


on

Award Ceremony
Koo

ಬೆಂಗಳೂರು: ಅ. ನ. ಕೃ. ಪ್ರತಿಷ್ಠಾನ ವತಿಯಿಂದ ಕಾದಂಬರಿ ಸಾರ್ವಭೌಮ ಅ. ನ. ಕೃ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 19ರಂದು ಬೆಳಗ್ಗೆ 10ಗಂಟೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಎಚ್. ಎನ್. ಮಲ್ಟಿಮೀಡಿಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 2022ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಹಾಗೂ 2023ನೇ ಸಾಲಿನ ಅ. ನ. ಕೃ. ಪ್ರಶಸ್ತಿಯನ್ನು ಡಾ. ಬಿ. ಎಸ್. ಸ್ವಾಮಿ ಅವರಿಗೆ ಪ್ರದಾನ (Award Ceremony) ಮಾಡಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರಾದ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ಅವರು ರಾಷ್ಟೋತ್ಥಾನ ಸಾಹಿತ್ಯದ ಗೌರವ ಪ್ರಧಾನ ಸಂಪಾದಕರಾಗಿದ್ದು, ಡಾ. ಬಿ. ಎಸ್. ಸ್ವಾಮಿ ಅವರು ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ನಿರ್ವಾಹಕರಾಗಿದ್ದಾರೆ.

ಪ್ರಜಾವಾಣಿ ದಿನಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಹುಶ್ರುತ ವಿದ್ವಾಂಸರಾದ ಶತಾವಧಾನಿ ಡಾ. ಆರ್. ಗಣೇಶ್, ಲೇಖಕ, ಉಪನ್ಯಾಸಕ ಡಾ. ಬಂಡ್ಲಹಳ್ಳಿ ವಿಜಯಕುಮಾ‌ರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಇದನ್ನೂ ಓದಿ | ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ಡಾ. ಕೆ.ಆರ್. ಸಂಧ್ಯಾರೆಡ್ಡಿ, ಶಾ.ಮಂ. ಕೃಷ್ಣರಾವ್, ಎಂ. ವೆಂಕಟೇಶ್ ಅವರು ಉಪಸ್ಥಿತರಿರಲಿದ್ದು, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ನ್ಯಾಯವಾದಿ ಅಶೋಕ್ ಹಾರನಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅ. ನ. ಕೃ. ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಗೌತಮ್ ಅ. ನ. ಕೃ, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿರಲಿದ್ದಾರೆ.

2022ರ ಪ್ರಶಸ್ತಿ ಪುರಸ್ಕೃತರು: ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ

ಆರೂವರೆ ದಶಕಗಳ ಕಾಲ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಸಮಾಜಕಾರ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಎಸ್. ಆರ್. ರಾಮಸ್ವಾಮಿ ಅವರು (ಜನನ: 29-10-1937) ಕಳೆದ 45 ವರ್ಷಗಳಿಂದ ‘ಉತ್ಥಾನ’ ಮಾಸಪತ್ರಿಕೆ ಮತ್ತು ‘ರಾಷ್ಟ್ರೋತ್ಥಾನ ಸಾಹಿತ್ಯ’ ಪ್ರಕಾಶನದ ಪ್ರಧಾನ ಸಂಪಾದಕರಾಗಿದ್ದಾರೆ.

ಸುಭಾಷ್‌ಚಂದ್ರ ಬೋಸ್ ಅವರ ಸಮಗ್ರ ಜೀವನಚರಿತ್ರೆ ‘ಕೋಲ್ಮಿಂಚು’ ಜಯಪ್ರಕಾಶ್ ನಾರಾಯಣ್ ವಲ್ಲಭಭಾಯಿ ಪಟೇಲ್, ಮೋಕ್ಷಗುಂಡಂ ವಿಶ್ವೇಶ್ವರಯ್ಯ, ಸ್ವಾಮಿ ವಿವೇಕಾನಂದ, ಭಗಿನಿ ನಿವೇದಿತಾ ಮೊದಲಾದ ಇಪ್ಪತ್ತಕ್ಕೂ ಹೆಚ್ಚು ಜೀವನಚರಿತ್ರೆಗಳೂ ಸೇರಿ ಸುಮಾರು 60 ಗ್ರಂಥಗಳನ್ನು ಬರೆದಿದ್ದಾರೆ. ‘ಭಾರತದಲ್ಲಿ ಸಮಾಜಕಾರ್ಯ’, ‘ಸ್ವಾತಂತ್ರ್ಯೋದಯದ ಮೈಲಿಗಲ್ಲುಗಳು’ ಮೊದಲಾದ ಹಲವಾರು ಪ್ರತಿಷ್ಠಿತ ಕೃತಿಗಳಿಗೆ ವಿಸ್ತತ ಸ್ವತಂತ್ರ ಅವಲೋಕನ ಪ್ರಬಂಧಗಳನ್ನು ಬರೆದು ಸಂಪಾದನ ಮಾಡಿದ್ದಾರೆ.

ಅಭ್ಯುದಯ ಅರ್ಥಶಾಸ್ತ್ರದಲ್ಲಿ ಆಳವಾದ ಪರಿಶ್ರಮ ಮಾಡಿರುವ ಇವರು ಜಾಗತೀಕರಣದ ಹಿನ್ನೆಲೆಯಲ್ಲಿ ಬರೆದ ‘ಆರ್ಥಿಕತೆಯ ಎರಡು ಧ್ರುವ’ ಅರ್ಥಶಾಸ್ತ್ರ ಕ್ಷೇತ್ರದ ಒಂದು ಉನ್ನತ ಕೃತಿಯೆಂದು ಪರಿಗಣಿತವಾಗಿದೆ. ಸ್ವಾತಂತ್ರ್ಯೋತ್ತರ ಭಾರತದ ಅರ್ಥಿಕ ಯೋಜನೆಗಳನ್ನು ತಲಸ್ಪರ್ಶಿಯಾಗಿ ವಿಶ್ಲೇಷಿಸಿರುವ ರಾಮಸ್ವಾಮಿಯವರ ‘ಶತಮಾನದ ತಿರುವಿನಲ್ಲಿ ಭಾರತ’ ಸಮಾಜವಿಜ್ಞಾನ ಕ್ಷೇತ್ರದ ಆ ವರ್ಷದ ಶ್ರೇಷ್ಠ ಕೃತಿಯೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಪಡೆದಿದೆ. ಬ್ರಿಟಿಷ್-ಪೂರ್ವ ಭಾರತದ ಉನ್ನತ ಸ್ಥಿತಿ ಕುರಿತ ಖ್ಯಾತ ಸಂಶೋಧಕ ಧರ್ಮಪಾಲ್ ಅವರ ಕೃತಿಗಳನ್ನು ಇವರು ಕನ್ನಡಕ್ಕೆ ಪರಿಚಯಿಸಿದ್ದಾರೆ. ಸ್ವದೇಶೀ ಚಿಂತನೆಯ ಪ್ರತಿಪಾದಕಗಳಾದ ಇವರ ಹಲವಾರು ಕೃತಿಗಳು ಪಥದರ್ಶಕವೆನಿಸಿವೆ.

ಅನೇಕ ಹಿರಿಯ ಸಾಹಿತಿಗಳ ಒಡನಾಟದಲ್ಲಿದ್ದ ರಾಮಸ್ವಾಮಿಯವರು, ಡಿ.ವಿ.ಗುಂಡಪ್ಪ, ಸೀತಾರಾಮಯ್ಯ, ರಾಕ್ಲಪಲ್ಲಿ ಅನಂತಕೃಷ್ಣಶರ್ಮ, ವೀರಕೇಸರಿ ಸೀತಾರಾಮಶಾಸ್ತ್ರಿ, ತಿ. ತಾ. ಶರ್ಮ, ಪಿ. ಕೋದಂಡರಾವ್, ತೋಟಗಾರಿಕೆ ಋಷಿ ಎಂ. ಎಚ್. ಮರಿಗೌಡ ಮೊದಲಾದ ಧೀಮಂತರನ್ನು ಕುರಿತು ಬರೆದ ‘ದೀವಟಿಗೆಗಳು’, ‘ದೀಪ್ತಿಮಂತರು’ ಮತ್ತು ‘ದೀಪ್ತಶೃಂಗಗಳು’ – ಇವು ಅನುಪಮ ವ್ಯಕ್ತಿಚಿತ್ರಮಾಲಿಕೆಗಳಾಗಿವೆ. ಈಗಿನ ಜಗದ್‌ವ್ಯಾಪಿ ತುಮುಲಗಳ ಬೇರುಗಳಿರುವುದು ಎರಡು ಭಿನ್ನ ಜೀವನದೃಷ್ಟಿಗಳಲ್ಲಿ – ಎಂದು ಅವರ ‘ನಾಗರಿಕತೆಗಳ ಸಂಘರ್ಷ’ ಕೃತಿ ಪ್ರತಿಪಾದಿಸಿದೆ. ಅವರ ‘ಕೆಲವು ಇತಿಹಾಸ-ಪರ್ವಗಳು’ ಮತ್ತು ‘ಮರೆಯಬಾರದ ಇತಿಹಾಸಾಧ್ಯಾಯಗಳು’ ಮೈಲಿಗಲ್ಲುಗಳೆಂದು ಅಂಕಿತಗೊಂಡಿರುವ ಕೆಲವು ಇತಿಹಾಸ ಘಟನಾಸರಣಿಗಳ ಪರಾಮರ್ಶನೆಯಾಗಿವೆ. ಭಾರತದ ಈಚಿನ ಇತಿಹಾಸಕ್ಕೆ ನಿರ್ಣಾಯಕ ತಿರುವನ್ನಿತ್ತ ರಾಜಾ ರಾಮಮೋಹನರಾಯ್ ಅವರಿಂದ ಜಯಪ್ರಕಾಶ ನಾರಾಯಣ್ ವರೆಗಿನ ಹತ್ತಾರು ಮಹನೀಯರ ಜೀವಿತಕಥನಗಳು `ನವೋತ್ಥಾನದ ಅಧ್ವರ್ಯುಗಳು’ ಮತ್ತು ‘ಹಲವರು ರಾಷ್ಟ್ರಾರಾಧಕರು’. ರಾಮಸ್ವಾಮಿಯವರ ‘ಕವಳಿಗೆ’ ಮತ್ತು ‘ಸಾಹಿತ್ಯ ಸಾನ್ನಿಹಿತ್ಯ ಉನ್ನತಮಟ್ಟದ ಸಾಹಿತ್ಯ ಪರಾಮರ್ಶಕ ಕೃತಿಗಳಾಗಿವೆ. ರಾಮಸ್ವಾಮಿಯವರು ಕಳೆದ ಅರವತ್ತು ವರ್ಷಗಳಲ್ಲಿ ವಿವಿಧ ಪತ್ರಿಕೆಗಳಲ್ಲಿ 2000ಕ್ಕೂ ಹೆಚ್ಚು ಅಧ್ಯಯನಪೂರ್ಣ ಲೇಖನಗಳನ್ನು ಬರೆದಿದ್ದಾರೆ.

ಪತ್ರಿಕೋದ್ಯಮ ಸೇವೆಗಾಗಿ 2006ರಲ್ಲಿ ಇವರಿಗೆ ‘ಆರ್ಯಭಟ ಪ್ರಶಸ್ತಿ’ ದೊರೆತಿದೆ. ಸಾಹಿತ್ಯಸೇವೆಗಾಗಿ 2008ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಇವರಿಗೆ ದೊರೆತಿದೆ. 2011ರಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇವರ ಸುದೀರ್ಘ ಸಾಹಿತ್ಯಸೇವೆಗಾಗಿ ಗೌರವಾರ್ಥ ಡಾಕ್ಟರೇಟ್ ನೀಡಿದೆ. ದೀರ್ಘ ಪತ್ರಿಕೋದ್ಯಮ ಸೇವೆಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ‘ವರ್ಷದ ಶ್ರೇಷ್ಠ ವ್ಯಕ್ತಿ’ ಸಮ್ಮಾನ ದೊರೆತಿದೆ (2012). ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳ ಜೀವಮಾನ ಸಾಧನೆಗಾಗಿ 2015ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪದವಿಯನ್ನು ಇವರಿಗೆ ನೀಡಲಾಗಿದೆ. ಕರ್ನಾಟಕ ಸರಕಾರವು 2022-23ರ ‘ಪಂಪಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ.

2023ರ ಪ್ರಶಸ್ತಿ ಪುರಸ್ಕೃತರು : ಡಾ. ಬಿ. ಎಸ್. ಸ್ವಾಮಿ

ಬಿ. ಸಿದ್ಧಲಿಂಗ ಸ್ವಾಮಿಯವರು ಮೂಲತಃ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯವರು. ವಿ. ಬಸವಲಿಂಗಪ್ಪ – ಶಿವನಾಗಮ್ಮ ದಂಪತಿಯ ಸುಪುತ್ರರಾದ ಇವರು ಎಂ. ಎ., ಪಿಎಚ್. ಡಿ. ಪದವೀಧರರು. ಐದು ವರ್ಷ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಂತರ ಬೆಂಗಳೂರು ಆಕಾಶವಾಣಿಯಲ್ಲಿ ಇಪ್ಪತ್ತು ವರ್ಷ ಕಾರ್ಯನಿರ್ವಹಿಸಿ ಅನಂತರ ಗುಲ್ಬರ್ಗ, ಬೆಂಗಳೂರು, ಮಂಗಳೂರು ಬಾನುಲಿಕೇಂದ್ರಗಳಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಹದಿನಾಲ್ಕು ವರ್ಷ ದುಡಿದು ನಿವೃತ್ತರಾದರು.

ಬಾನುಲಿಯ ಸುದೀರ್ಘ ಸೇವೆಯಲ್ಲಿ ಇವರು ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಪ್ರತಿಭಾವಂತರನ್ನು ಹುಡುಕಿ ಅವರನ್ನು ಆಕಾಶವಾಣಿಯ ಕಾರ್ಯಕ್ರಮಗಳಲ್ಲಿ ತೊಡಗಿಸಿ ಜನಾನುರಾಗಿಯಾದರು.
1967ರಲ್ಲಿ ಇವರ ಮೊದಲ ಕವನಸಂಗ್ರಹ ‘ಅಮೃತ’ ಪ್ರಕಟವಾಯಿತು. ಅಂದಿನಿಂದ ಇಂದಿನವರೆಗೆ ಆರು ದಶಕ ಲೇಖನಿಯನ್ನು ಕೆಳಗಿಡದೆ ಒಂದೇ ಸಮನೆ ಬರೆಯುತ್ತ ಸುಮಾರು ನಾಲ್ಕುನೂರು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ‘ಕಲಿ ಭಾರತ’, ‘ಅಲ್ಲಮಪ್ರಭು’, ‘ಅಕ್ಕಮಹಾದೇವಿ’, ‘ಬಸವಣ್ಣ’ ಮಹಾಕಾವ್ಯಗಳೂ, ‘ಬೆಂಕಿಯಲ್ಲಿ ಅರಳಿದ ಹೂವು’ ನಂತಹ ಆತ್ಮಕಥನವೂ ಸೇರಿದೆ.

ಇವರ ಸಾಹಿತ್ಯಸೃಷ್ಟಿಗೆ ಯಾವ ಸರಹದ್ದುಗಳೂ ಇಲ್ಲ. ಕಥೆ, ಕಾದಂಬರಿ, ಕವನ, ನಾಟಕ, ರೂಪಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಸಂಪಾದನೆ, ವೈಚಾಲಕ, ಹಾಸ್ಯ, ಜಾನಪದ, ಪ್ರವಾಸಕಥನ, ಜೀವನ ಚರಿತ್ರೆ, ವಚನಸಾಹಿತ್ಯ, ದಾಸಸಾಹಿತ್ಯ, ಮಕ್ಕಳ ಸಾಹಿತ್ಯ, ಬಿಡಿ ಬರೆಹಗಳು – ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೈಯಾಡಿಸಿದ್ದಾರೆ. ಅನೇಕ ಸಾಮಾಜಿಕ, ಐತಿಹಾಸಿಕ ಕಾದಂಬರಿಗಳನ್ನು ಬರೆದ ಕೈಗಳಿಂದಲೇ ಜಾನಪದ ಸಾಹಿತ್ಯಚರಿತ್ರೆಯ ಹದಿನೈದು ಸಂಪುಟಗಳು, ಮಲೆ ಮಾದೇಶ್ವರ ಕಾವ್ಯ ಸಂಪಾದನೆ ಮಾಡಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಒಂದು ವಿಶ್ವವಿದ್ಯಾಲಯ ಮಾಡುವಷ್ಟು ಕ್ಷೇತ್ರಕಾರ್ಯ, ಸಂಪಾದನೆ, ವಿಶ್ಲೇಷಣ, ಸಂಗ್ರಹ ಮಾಡಿದ್ದಾರೆ. ಶಿಷ್ಟಸಾಹಿತ್ಯದಲ್ಲಿ ಡಾ. ಸ್ವಾಮಿಯವರ ಕೊಡುಗೆ ಸಣ್ಣದಲ್ಲ. ಕಾಳಿದಾಸನ ಸಾಹಿತ್ಯದ ಕುರಿತು ಬರೆಯಬಲ್ಲ ಡಾ. ಸ್ವಾಮಿಯವರು ಸೂರದಾಸನ ಸಾಹಿತ್ಯದ ಬಗೆಗೂ ಬರೆಯಬಲ್ಲರು. ಹರಿದಾಸ ಪರಂಪರೆಯ ಕುರಿತು ಹಲವು ವರ್ಷ ಸಂಶೋಧನೆ ಮಾಡಿ ಒಂದು ಬೃಹತ್ ಗ್ರಂಥ ಪ್ರಕಟಿಸಿದ್ದಾರೆ. ಅದಕ್ಕಾಗಿ ಅವರು ಊರೂರು ಅಲೆದು ಹಲಕಥಾಕಾರರನ್ನು ಸಂದರ್ಶಿಸಿ, ವಾಚನಾಲಯಗಳಲ್ಲಿ ತಿಂಗಳುಗಟ್ಟಲೆ ಕುಳಿತು ಸಂಶೋಧನೆ ಮಾಡಿದ್ದಾರೆ.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ಇವರ ಸಾಹಿತ್ಯಸೇವೆಯನ್ನು ಗಮನಿಸಿ ಕನ್ನಡಿಗರು ಅವರಿಗೆ ‘ಮಧುವೃತ’ ಎಂಬ ಗೌರವಗ್ರಂಥ ಅರ್ಪಿಸಿದ್ದಾರೆ.
ಇವರ ‘ಕವಿಚಕ್ರೇಶ್ವರ’ ಕಾದಂಬರಿಗೆ ದೇವರಾಜ ಬಹದ್ದೂರ್ ಪ್ರಶಸ್ತಿ(1974), ‘ಜಾನಪದ ಕಥಾಸಂಗಮ’ಕ್ಕೆ ಕರ್ನಾಟಕ ಜಾನಪದ-ಯಕ್ಷಗಾನ ಅಕಾಡೆಮಿಯ ಬಹುಮಾನ(1987), ‘ಮಹಾಜ್ಯೋತಿ ಮಾದೇಶ್ವರ’ ಕೃತಿಗೆ ಮುದ್ದಣ- ರತ್ನಾಕರವರ್ಣಿ ಪ್ರಶಸ್ತಿ, ‘ಜಾನಪದ ಸೌರಭ’, ಅಕ್ಕಮ್ಮ ಗಿರಿಗೌಡ ರುದ್ರಪ್ಪ ಪ್ರಶಸ್ತಿ (1996), ‘ತುಳುನಾಡ ಐಸಿರಿ’ಗೆ ಗೊರೂರು ಪ್ರತಿಷ್ಠಾನದ ಪ್ರಶಸ್ತಿ (1997), ಕದಂಬೋತ್ಸವದಲ್ಲಿ ಅಭಿನಂದನೆ(1998), ‘ಸಮಗ್ರ ನಾಟಕಗಳು’ಗೆ ಆರ್ಯಭಟ ಪ್ರಶಸ್ತಿ, ಜಾನಪದ ಜ್ಞಾನ ವಿಜ್ಞಾನ ಪ್ರಶಸ್ತಿ(2002), ‘ನಾಟಕ ರೂಪಕ’ ಕೃತಿಗೆ ಅತ್ತಿಮಬ್ಬೆ ಸಾಹಿತ್ಯಪ್ರತಿಷ್ಠಾನದ ಪ್ರಶಸ್ತಿ, ‘ಜಾನಪದಶ್ರೀ’ಗೆ ಕರ್ನಾಟಕ ಜಾನಪದ ಅಕಾಡೆಮಿ ಬಹುಮಾನ, ಇಂಥ ಅನೇಕ ಸಂಘಸಂಸ್ಥೆಗಳ ಬಹುಮಾನಗಳು, ಪ್ರಶಸ್ತಿಗಳು ಇವರಿಗೆ ಸಂದಿವೆ.

Continue Reading

ಬೆಂಗಳೂರು

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Book Release: ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಮೇ 12ರಂದು ಬೆಳಗ್ಗೆ 10ಗಂಟೆಗೆ ಕನ್ನಡದಲ್ಲಿ ಶ್ರೀ ಶಂಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Book Release
Koo

ಬೆಂಗಳೂರು: ಅಯೋಧ್ಯಾ ಪ್ರಕಾಶನ ಪ್ರಕಟನೆಯ ಲೇಖಕ ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರ; ಶಾಂಕರ ಸ್ತೋತ್ರಗಳ ಭಾವಾನುಭವ (Book Release) ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಮೇ 12ರಂದು ಬೆಳಗ್ಗೆ 10ಗಂಟೆಗೆ ನಗರದ ಬನಶಂಕರಿಯ ಬಿ.ವಿ.ಕಾರಂತ್‌ ರಸ್ತೆಯ ಸುಚಿತ್ರ ಫಿಲ್ಮ್‌ ಸೊಸೈಟಿಯ ನಾಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಸ್ವಾಮಿ ನಿತ್ಯಸ್ಥಾನಂದಜಿ ಮಹಾರಾಜ್‌ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ಡಾ.ಜಿ.ಬಿ. ಹರೀಶ, ವಾಗ್ಮಿ ಹಾಗೂ ಬಹುಭಾಷಾವಿದರು ಶತಾವಧಾನಿ ಆರ್‌. ಗಣೇಶ್‌ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Continue Reading
Advertisement
Narendra Modi
ದೇಶ15 mins ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ30 mins ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ36 mins ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Bengaluru Rain
ಕರ್ನಾಟಕ1 hour ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Kantara Movie
ಸಿನಿಮಾ1 hour ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ2 hours ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ2 hours ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ3 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

West Nile fever Health department on alert
ಆರೋಗ್ಯ3 hours ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ8 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌