Site icon Vistara News

Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

Prajwal Revanna Case

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case) ಸಂಬಂಧಿಸಿ ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಜಾಮೀನು ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಅರ್ಜಿ ಸಲ್ಲಿಸಿದೆ. ಆದರೆ, ಅರ್ಜಿಗೆ ರೇವಣ್ಣ ಸಲ್ಲಿಸಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ಸಂತ್ರಸ್ತೆ ಅಪಹರಣ ಸಂಬಂಧ ಆಕೆಯ ಪುತ್ರ ನೀಡಿದ ದೂರಿನ ಮೇರೆಗೆ ಕೆ. ಆರ್‌ ನಗರ ಠಾಣೆಯಲ್ಲಿ ಎಚ್‌.ಡಿ. ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಇದರಲ್ಲಿ ಸತೀಶ್‌ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.

ಕೆ.ಆರ್‌.ನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ನಿರಂತರ ಕಾನೂನು ಸಮರದ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ನಂತರ ಎರಡು ಎಫ್‌ಐಆರ್‌ ರದ್ದು ಮಾಡುವಂತೆ ರೇವಣ್ಣ ನ್ಯಾಯಾಲಯದ ಮೊರೆ ಹೋಗಿದ್ದರು.

ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ (Pavithra Gowda) ಇನ್ನು ಕೆಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ(UTP)ಕೈದಿ ನಂಬರ್ 6024 ಆಗಿದೆ. ಜೈಲು ಅಧಿಕಾರಿಗಳಿಂದ ವಿಚಾರಣಾಧೀನ ಬಂಧಿ ನಂಬರ್ ವಿತರಣೆ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ. ಹೈಪೈಯಾಗಿ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲು ಹಕ್ಕಿಯಾಗಿ ಸೆರೆವಾಸದಲ್ಲಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಎದ್ದಿರುವ ಅವರು ಸಿಬ್ಬಂದಿ ನೀಡಿದ ಕಾಫಿ ಕುಡಿದಿದ್ದಾರೆ. ಮಹಿಳಾ ವಿಭಾಗದ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ.

ಇದನ್ನೂ ಓದಿ: Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ ಜೈಲು ಸಿಬ್ಬಂದಿ. ಇಂದು ಡಿ-ಗ್ಯಾಂಗ್ ಪಟಾಲಂ. ಜೈಲೂಟ ಸವಿಯಲಿದೆ. ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ಕುಟುಂಬಸ್ಥರು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪವಿತ್ರಾ ಗೌಡ ಮಗಳು ಮತ್ತು ತಾಯಿ ಭೇಟಿಯಾಗುವ ಸಾಧ್ಯತೆ ಇದೆ.

ಇನ್ನು ನಿನ್ನೆ ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು.

Exit mobile version